More

    27 ನಿಮಿಷಗಳ ಕಿರುಚಿತ್ರದ ಮೂಲಕ ಆರಕ್ಷಕರಿಗೆ ‘ಸೆಲ್ಯೂಟ್’

    ಬೆಂಗಳೂರು: ಪೊಲೀಸರ ಕುರಿತು ಇದುವರೆಗೂ ಹಲವು ಚಿತ್ರಗಳು ಬಿಡಗುಡೆಯಾಗಿವೆ. ಈಗ ತ್ಯಾಗರಾಜ್​ ಎನ್ನುವವರು ಪೊಲೀಸರ ಕರ್ತವ್ಯನಿಷ್ಠೆಯನ್ನು ‘ಸೆಲ್ಯೂಟ್​’ ಎಂಬ ಕಿರುಚಿತ್ರದ ಮೂಲಕ ಸೆರೆಹಿಡಿದಿದ್ದಾರೆ.

    ದೀಪಕ್ ಗೌಡ ನಿರ್ಮಿಸಿರುವ ಈ ಕಿರುಚಿತ್ರದ ಪ್ರದರ್ಶನ ಹಾಗೂ ಪತ್ರಿಕಾಗೋಷ್ಠಿಯನ್ನು ಇತ್ತೀಚೆಗೆ ಆಯೋಜಿಸಲಾಗಿತ್ತು. ನಿವೃತ್ತ ಪೊಲೀಸ್ ಅಧಿಕಾರಿ ಉಮೇಶ್, ನಿರ್ಮಾಪಕ ಉಮಾಪತಿ ಶ್ರೀನಿವಾಸ ಗೌಡ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು.

    ಇದನ್ನೂ ಓದಿ: VIDEO: ‘ಅಮೆರಿಕದ ಅಧ್ಯಕ್ಷರಿಗೆ ಹೇಳಿ, ಎಲ್ಲರೂ ನನ್ನನ್ನು ಮೇಡಂ ಅಲ್ಲ… ಸರ್​ ಎಂದು ಸಂಬೋಧಿಸುತ್ತಾರೆ…’

    ಈ ಕುರಿತು ಮಾತನಾಡಿದ ಎಸ್.ಪಿ ಉಮೇಶ್, ‘ಆರಕ್ಷಕರ ಬಗ್ಗೆ ಇಪ್ಪತ್ತೇಳು ನಿಮಿಷಗಳಲ್ಲಿ ಸುಂದರವಾಗಿ ಕಿರುಚಿತ್ರದ ಮೂಲಕ ತೋರಿಸಿರುವ ನಿರ್ದೇಶಕರಿಗೆ ಹಾಗೂ ಇಂತಹ ಕಿರುಚಿತ್ರವನ್ನು ನಿರ್ಮಿಸಿರುವ ದೀಪಕ್ ಗೌಡ ಅವರಿಗೆ ವಂದನೆ. ಕರೊನಾ ಕಾಲದಲ್ಲಿ ಪೊಲೀಸರು ಪಟ್ಟ ಕಷ್ಟ ಅಷ್ಟಿಷ್ಟಲ್ಲ. ನಾನು ಆ ಸಮಯದಲ್ಲಿ ಕಾರ್ಯ ನಿರ್ವಹಿಸಿದ್ದೆ. ಅದೇ ಸಮಯದಲ್ಲೇ ನಿವೃತ್ತನಾದೆ. ಒಂದು ಬೇಸರದ ವಿಷಯವೆಂದರೆ, ನಾನು ನಿವೃತ್ತನಾಗುವ ದಿವಸ ನಮ್ಮ ಠಾಣೆಯಲ್ಲಿ ನಾನು ಮಾತ್ರ ಇದ್ದೆ. ಬೇರೆ ಯಾರು ಇರಲಿಲ್ಲ.‌ ಈ ರೀತಿ ನಿವೃತ್ತಿಯಾಗಿರುವುದು ನಾನೊಬ್ಬನೆ ಅನಿಸುತ್ತದೆ’ ಎಂದರು.

    ತ್ಯಾಗರಾಜ್​ಗೆ ಸ್ನೇಹಿತರ ಮೂಲಕ ನಿರ್ಮಾಪಕ ದೀಪಕ್ ಗೌಡ ಪರಿಚಯವಾದರಂತೆ.‌ ‘ಅವರಿಗೆ ಈ ಕಥೆ ಹೇಳಿದೆ. ಕಥೆ ಇಷ್ಟವಾಗಿ ನಿರ್ಮಾಣ ಮಾಡಿದರು. ಅಶ್ವಿನ್ ಹಾಸನ್ ಸೇರಿದಂತೆ ಎಲ್ಲಾ ಕಲಾವಿದರ ಅಭಿನಯ ಹಾಗೂ ಸಂಗೀತ ನಿರ್ದೇಶಕ ಪ್ರದ್ಯೋತ್ತನ್ ಆದಿಯಾಗಿ ಎಲ್ಲಾ ತಂತ್ರಜ್ಞರ ಕಾರ್ಯ ವೈಖರಿ ಚೆನ್ನಾಗಿದೆ’ ಎಂದರು ನಿರ್ದೇಶಕ ತ್ಯಾಗರಾಜನ್. ಈ ಹಿಂದೆ ಎರಡು ಕಿರುಚಿತ್ರಗಳನ್ನು ತ್ಯಾಗರಾಜನ್ ನಿರ್ದೇಶಿಸಿದ್ದಾರೆ. ಕೆಲವು ಪ್ರಶಸ್ತಿಗಳು‌ ಸಹ ಬಂದಿದೆ.

    ಇದನ್ನೂ ಓದಿ: ಬಿಗ್​ಬಾಸ್ ಫೀವರ್ ಶುರು​: 9ನೇ ಸೀಸನ್​ನಲ್ಲಿ ಯಾರೆಲ್ಲ ಡೊಡ್ಮನೆ ಪ್ರವೇಶಿಸಲಿದ್ದಾರೆ? ಇಲ್ಲಿದೆ ಸಂಭವನೀಯ ಪಟ್ಟಿ​…

    ಹಲವು ಚಿತ್ರಗಳಲ್ಲಿ ನಟಿಸಿರುವ ಅಶ್ವಿನ್​ ಹಾಸನ್​, ಚಕಿರುಚಿತ್ರದಲ್ಲಿ ಒಂದು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಅವರ ಜತೆಗೆ ಶ್ರೀನಾಥ್ ಚಿತ್ತಾರ, ನವೀನ್ ಸಾಣೇಹಳ್ಳಿ, ಲೋಕೇಶ್ ಆಚಾರ್, ವಾಣಿಶ್ರೀ ಕುಲಕರ್ಣಿ ಮುಂತಾದವರು ಅಭಿನಯಿಸಿದ್ದಾರೆ. ಪ್ರದ್ಯೋತ್ತನ್ ಸಂಗೀತ ಮತ್ತು ಅಜಿತ್ ಎ.ಯು ಛಾಯಾಗ್ರಹಣ ಈ ಚಿತ್ರಕ್ಕಿದೆ. ಈ ಕಿರುಚಿತ್ರವನ್ನು ಡಿ ಬೀಟ್ಸ್ ಯೂಟ್ಯೂಬ್ ಚಾನಲ್ ಮೂಲಕ ಬಿಡುಗಡೆ ಮಾಡಲಾಗಿದೆ.

    VIDEO: ‘ನೀನು ಸಿನಿಮಾಕ್ಕೆ ಸೆಲೆಕ್ಟ್​ ಆಗ್ಲಿಲ್ಲ, ಆದ್ರೆ ನನ್​ ಹೆಂಡ್ತಿ ಥರ ಇದ್ರೆ ತಿಂಗಳಿಗೆ 25 ಲಕ್ಷ ಕೊಡುವೆ ಅಂದಿದ್ದ ಉದ್ಯಮಿ!’

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts