

ಹೆಬ್ರಿ: ಚಾರ ಗಂಧಿನಗರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್ ಉಡುಪಿ ಜಿಲ್ಲಾ ಸಮಿತಿ ವತಿಯಿಂದ ಒಂದು ದಿನದ ಚುಟುಕು ರಚನಾ ಕಮ್ಮಟ ನಡೆಯಿತು.
ದ.ಕ.ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ ಅಧ್ಯಕ್ಷ ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಶಿಕ್ಷಕ ಜಯಾನಂದ ಪೆರಾಜೆ ಕವಿಗೋಷ್ಠಿಯ ಅಧ್ಯಕ್ಷತೆ ವಹಿಸಿ, ಚುಟುಕು ಹಾಗೂ ವಚನ ಸಾಹಿತ್ಯದ ಬೆಳವಣಿಗೆ ಹಾಗೂ ಪರಿಣಾಮಗಳ ಬಗ್ಗೆ ಮಾತನಾಡಿದರು.
ಸ್ಪರ್ಧೆಯಲ್ಲಿ ವಿಜೇತರಿಗೆ ನಗದು ಬಹುಮಾನ ಹಾಗೂ ಪ್ರಶಂಸಾ ಪತ್ರ ನೀಡಿ ಅಭಿನಂದಿಸಲಾಯಿತು. ಚುಟುಕು ಕವಿ ಪ್ರೀತಿ ಬಿರಾದಾರ್ ಚುಟುಕು ಸಾಹಿತ್ಯ ರಚನೆಯ ತರಬೇತಿ ನೀಡಿದರು. 56 ವಿದ್ಯಾರ್ಥಿಗಳು ಭಾಗವಹಿಸಿದ್ದರು. ಕಾರ್ಯದರ್ಶಿ ಪ್ರೇಮಾ ಪಾಟೀಲ್, ಮುಖ್ಯಶಿಕ್ಷಕ ಉಮಾ ಶಂಕರ್ ಉಪಸ್ಥಿತರಿದ್ದರು. ಸಹಶಿಕ್ಷಕಿ ವಸಂತಿ ನಿರೂಪಿಸಿ, ವಂದಿಸಿದರು. ಶಿಕ್ಷಕಿ ದೀಪಾ ಸಹಕರಿಸಿದರು.