ಸಾರಿಗೆ ಇಲಾಖೆಯಲ್ಲಿ 9 ಸಾವಿರ ಹುದ್ದೆ ಭರ್ತಿಗೆ ಕ್ರಮ: ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು:
ಸಾರಿಗೆ ಸಂಸ್ಥೆಯಲ್ಲಿ ಖಾಲಿ ಇರುವ 9 ಸಾವಿರ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.
ಸಾರಿಗೆ ಇಲಾಖೆ ವತಿಯಿಂದ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಹಮ್ಮಿಕೊಂಡಿದ್ದ ಶಕ್ತಿ ಯೋಜನೆಯ ಶತಕೋಟಿ ಸಂಭ್ರಮ ಕಾರ್ಯಕಮವನ್ನು ಉದ್ಘಾಟಿಸಿ, ಅಪಘಾತ ರಹಿತ ಚಾಲಕರಿಗೆ ಚಿನ್ನದ ಪದಕ ಪ್ರದಾನ ಮಾಡಿ ಮಾತನಾಡಿದರು.
ಸಾರಿಗೆ ಇಲಾಖೆಯಲ್ಲಿ ಕಳೆದ 7 ವರ್ಷಗಳಿಂದ ಯಾವ ನೇಮಕಾತಿಯೂ ಆಗಿಲ್ಲ. ಈ ಅವಧಿಯಲ್ಲಿ 13 ಸಾವಿರ ಸಿಬ್ಬಂದಿಗಳು ನಿವೃತ್ತಿಯಾಗಲಿದ್ದಾರೆ. ಆದ್ದರಿಂದ ನೇಮಕಾತಿ ಮಾಡಿಕೊಳ್ಳುವುದಕ್ಕೆ ತೀರ್ಮಾನಿಸಲಾಗಿದೆ ಎಂದರು.
4 ಸಾರಿಗೆ ಸಂಸ್ಥೆಗಳಿಗೆ ಹೊಸದಾಗಿ 5500 ಹೊಸ ಬಸ್‌ಗಳನ್ನು ಖರೀದಿ ಮಾಡಲು ಕ್ರಮ ಕೈಗೊಳ್ಳಲಾಗಿದ್ದು, ಜನರಿಗೆ ಉತ್ತಮ ಸೇವೆ ಸಲ್ಲಿಸಲು ಇಲಾಖೆ ಮುಂದಾಗಿದೆ ಎಂದರು.
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ 15 ದಿನದಲ್ಲಿಯೇ 5 ಗ್ಯಾರಂಟಿಗಳ ಪೈಕಿ ಮೊದಲ ಗ್ಯಾರಂಟಿಯಾಗಿ ಶಕ್ತಿ ಯೋಜನೆಯನ್ನು ಜಾರಿಗೆ ತಂದ ಕೀರ್ತಿ ಸಾರಿಗೆ ಇಲಾಖೆಯದ್ದು. 1.58 ಟ್ರಿಪ್‌ನಲ್ಲಿ 100.47 ಕೋಟಿ ಜನ ಪ್ರಯಾಣ ಮಾಡಿರುವುದು ದಾಖಲೆಯಾಗಿದೆ ಎಂದರು.
ತಮಿಳುನಾಡು ಮತ್ತು ದೆಹಲಿ ನಗರದಲ್ಲಿ ಮಾತ್ರ ಮಹಿಳೆಯರಿಗೆ ಉಚಿತ ಪ್ರಯಾಣವಿದೆ. ಮಹಾರಾಷ್ಟ್ರದಲ್ಲಿ ಮಹಿಳೆಯರ ಪ್ರಯಾಣಕ್ಕೆ ಶೇ.50 ರಿಯಾಯಿತಿ ನಿಡಲಾಗಿದೆ. ಇಡೀ ದೇಶದಲ್ಲಿ ನಮ್ಮ ರಾಜ್ಯ ಮಾತ್ರ ಮಹಿಳೆಯರಿಗೆ ಇಡೀ ರಾಜ್ಯದಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಮಾಡಿಕೊಟ್ಟಿದೆ ಎಂದು ಹೇಳಿದರು.
ಸಾರಿಗೆ ಸಂಸ್ಥೆ ಹೆಮ್ಮೆಯ ಸಂಸ್ಥೆಯಾಗಿ ಬೆಳೆದಿದೆ. ರಾಷ್ಟ್ರೀಯ, ಅಂತಾರಾಷ್ಟ್ರೀಯ ಪ್ರಶಸ್ತಿಗಳನ್ನು ಪಡೆದಿದೆ. ಸಿಬ್ಬಂದಿಗಳಿಗೆ ಉಚಿತ ಆರೋಗ್ಯ ತಪಾಸಣೆ ಮಾಡಿಸಲಾಗುತ್ತಿದೆ. ಕೆಎಸ್‌ಆರ್‌ಟಿಸಿಯಲ್ಲಿ 1 ಕೋಟಿ ತನಕ, ಉಳಿದ ಸಂಸ್ಥೆಯಲ್ಲಿ 50 ಲಕ್ಷ ತನಕ ವಿಮೆ ವ್ಯವಸ್ಥೆ ಮಾಡಲಾಗಿದೆ ಎಂದರು.
ಸಾರಿಗೆ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಡಾ.ಎನ್.ವಿ.ಪ್ರಸಾದ್, ಕೆಎಸ್‌ಆರ್‌ಟಿಸಿ ಎಂಡಿ ಅನ್ಬುಕುಮಾರ್, ಬಿಎಂಟಿಸಿ ಎಂಡಿ ಸತ್ಯವತಿ ಮತ್ತಿತರರು ಹಾಜರಿದ್ದರು.

Share This Article

Skin care: ಕಣ್ಣುಗಳ ಕೆಳಗಿರುವ ಚರ್ಮ ಸುಕ್ಕುಗಟ್ಟಿದೆಯೇ? ಹೀಗೆ ಮಾಡಿ..

ಕಣ್ಣುಗಳು(Skin care) ಸೂಕ್ಷ್ಮ ಅಂಗಗಳಾಗಿದ್ದು, ಅವುಗಳ ಕೆಳಗಿರುವ ಚರ್ಮವು ಸಹ ಸೂಕ್ಷ್ಮವಾಗಿರುತ್ತದೆ. ಬಿಸಿಲು, ಪೌಷ್ಠಿಕ ಆಹಾರದ…

Health Tips : ಮೆಟ್ಟಿಲು ಹತ್ತುವಾಗ ಸುಸ್ತಾಗುತ್ತದಾ..! ಈ ಸಲಹೆಗಳನ್ನು ಅನುಸರಿಸಿ

ಬೆಂಗಳೂರು: ಮೆಟ್ಟಿಲು ಹತ್ತುವಾಗ ಉಸಿರಾಟದ ತೊಂದರೆ ಸಾಮಾನ್ಯ. ಈ ಸಮಸ್ಯೆಯು ವಯಸ್ಸಾದಂತೆ ಹೆಚ್ಚಾಗುತ್ತಿದೆ, ಆದರೆ ಇತ್ತೀಚಿನ…