More

    ಬಿಎಸ್​ವೈ ಬಗ್ಗೆ ಒಳ್ಳೆಯ ಮಾತನ್ನಾಡಬಾರದೆ?; ಬಿಜೆಪಿಗೆ ಬೆಂಬಲ ನೀಡುತ್ತೇನೆ ಎಂದು ಹೇಳಿಲ್ಲ: ಎಚ್​.ಡಿ.ಕುಮಾರಸ್ವಾಮಿ

    ಬೆಂಗಳೂರು: ಮಾಜಿ ಸಿಎಂ ಯಡಿಯೂರಪ್ಪ ಬಗ್ಗೆ ಒಳ್ಳೆಯ ಮಾತು ಹೇಳಿದಾಕ್ಷಣ ಜೆಡಿಎಸ್ ಬಿಜೆಪಿಗೆ ಬೆಂಬಲ ನೀಡುತ್ತದೆ ಎಂದರ್ಥವಲ್ಲ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ. ಜೆಡಿಎಸ್ ಎಲ್ಲೆಲ್ಲಿ ಸ್ಪರ್ಧೆ ಮಾಡಿಲ್ಲವೋ ಅಲ್ಲೆಲ್ಲ ಬಿಜೆಪಿಗೆ ಬೆಂಬಲ ನೀಡುವಂತೆ ಯಡಿಯೂರಪ್ಪ ಮನವಿ ಮಾಡಿರುವುದು ಸರಿಯಷ್ಟೇ. ಈ ಬಗ್ಗೆ ನಾನು ಚಿಕ್ಕಬಳ್ಳಾಪುರದಲ್ಲಿ ಹೇಳಿಕೆ ನೀಡಿ ನಮ್ಮ ಪಕ್ಷದ ಅಭಿಪ್ರಾಯ ಹೇಳಿದ್ದೇನೆ. ಆದರೆ ಆ ಹೇಳಿಕೆಯನ್ನು ತಪ್ಪಾಗಿ ಗ್ರಹಿಸಲಾಗಿದೆ. ಬಿಜೆಪಿಗೆ ಬೆಂಬಲ ನೀಡಲಾಗುವುದು ಎಂದು ಎಲ್ಲೂ ಹೇಳಿಲ್ಲ. ಆದರೆ, ಬೆಂಬಲ ಕೇಳಿದ ಯಡಿಯೂರಪ್ಪ ಬಗ್ಗೆ ರಾಜಕೀಯ ಹೊರತುಪಡಿಸಿ ಒಂದೆರಡು ಒಳ್ಳೆಯ ಮಾತುಗಳನ್ನು ಹೇಳಿದ್ದೇನೆ. ಅವರ ರಾಜಕೀಯ ಅನುಭವ, ಹಿರಿತನಕ್ಕೆ ಗೌರವ ಕೊಟ್ಟು ಮಾತನಾಡಿದ್ದೇನೆ. ಇದರಲ್ಲಿ ತಪ್ಪೇನಿದೆ ಎಂದು ಪ್ರಶ್ನಿಸಿದ್ದಾರೆ.

    ಕಾಂಗ್ರೆಸ್ ಯಾವ ಟೀಮ್: ಕಾಂಗ್ರೆಸ್ ನಾಯಕರಿಗೆ ವಿಧಾನಪರಿಷತ್ ಚುನಾವಣೆಯಲ್ಲಿ ಸೋಲುವ ಭಯ ಶುರುವಾಗಿದೆ. ಆ ಕಾರಣಕ್ಕೆ ಅವರು ಮತದಾರರನ್ನು ದಿಕ್ಕು ತಪ್ಪಿಸುವ ಹಾಗೂ ಜೆಡಿಎಸ್ ವಿರುದ್ಧ ಸುಳ್ಳುಗಳನ್ನು ಹಬ್ಬಿಸುವ ಕೆಲಸ ಮಾಡುತ್ತಿದ್ದಾರೆ. ಅವರಿಗೆ ಪ್ರತಿ ಚುನಾವಣೆ ಬಂದಾಗ ಜೆಡಿಎಸ್ ಜ್ವರ ಶುರುವಾಗುತ್ತದೆ. ಕಾಂಗ್ರೆಸ್ಸಿನ ಮಂಡ್ಯ, ಕೊಡಗು ಅಭ್ಯರ್ಥಿಗಳ ಬಗ್ಗೆ ಜನರಿಗೆ ಗೊತ್ತಾಗಿದೆ. ಮಂಡ್ಯದ ಕಾಂಗ್ರೆಸ್ ಅಭ್ಯರ್ಥಿಗೆ ಟಿಕೆಟ್ ಯಾರು ಕೊಡಿಸಿದರು ಎನ್ನುವುದನ್ನು ಸ್ವತಃ ಸಹಕಾರ ಸಚಿವರೇ ಹೇಳಿದ್ದಾರೆ. ಹಾಗಾದರೆ, ಕಾಂಗ್ರೆಸ್ ಬಿಜೆಪಿಯ ಯಾವ ಟೀಮು? ಸಿ ಟೀಮಾ? ಡಿ ಟೀಮಾ? ನಮ್ಮನ್ನು ಬಿಜೆಪಿ ಬಿ ಟೀಮ್ ಎನ್ನುವವರೇ ಉತ್ತರಿಸಬೇಕು ಎಂದು ಕುಮಾರಸ್ವಾಮಿ ಟಾಂಗ್ ಕೊಟ್ಟಿದ್ದಾರೆ.

    ಕಚೇರಿಯಲ್ಲೇ ಕಾಮದಾಟ, ಡಾ.ರತ್ನಾಕರ್ ಬಂಧನ; ಮಹಿಳೆಯರನ್ನು ಕರೆದುಕೊಂಡು ರಾಜ್ಯದ ಹಲವೆಡೆಗಷ್ಟೇ ಅಲ್ಲ, ಹೊರಜಿಲ್ಲೆಗೂ ಹೋಗಿದ್ದ..

    ಐಪಿಎಸ್​ ಆಫೀಸರ್​ ಆಗಿದ್ದ ಇವರೀಗ ಸೆಕ್ಯುರಿಟಿ ಆಫೀಸರ್!: ನಿರಪರಾಧಿ ಆರ್​ಎಸ್​ಎಸ್ ಕಾರ್ಯಕರ್ತರ ಪರ ನಿಂತಿದ್ದೇ ಮುಳುವಾಯ್ತು..

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts