More

    ವಿದ್ಯಾರ್ಥಿಗಳ ಭವಿಷ್ಯಕ್ಕೆ ಕ್ರೀಡಾಕೂಟ ಸಹಕಾರಿ

    ಶ್ರವಣಬೆಳಗೊಳ: ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಉತ್ತಮ ಭವಿಷ್ಯ ನಿರ್ಮಾಣಕ್ಕೆ ಕ್ರೀಡಾಕೂಟಗಳು ಸಹಕಾರಿಯಾಗಿವೆ ಎಂದು ಮಂಜುನಾಥ್ ಎಜುಕೇಷನ್ ಟ್ರಸ್ಟ್‌ನ ಅಧ್ಯಕ್ಷ ಮಂಜುನಾಥ್ ಹೇಳಿದರು.

    ಹೋಬಳಿಯ ಅರುವನಹಳ್ಳಿ ಗೇಟ್ ಸಮೀಪವಿರುವ ಬಿಎಂಎಚ್ ಪಬ್ಲಿಕ್ ಶಾಲೆಯಲ್ಲಿ ಮಂಗಳವಾರ ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿರುವ ವಿದ್ಯಾರ್ಥಿನಿಗೆ ಅಭಿನಂದಿಸಿ ಮಾತನಾಡಿದ ಅವರು, ಶಿಕ್ಷಣದ ಜತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಪಾಲ್ಗೊಂಡರೆ ಉತ್ತಮ ಸಾಧನೆ ಮಾಡಬಹುದು ಎಂದರು.

    ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಅ.12 ರಂದು ಹಾಸನದ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಜಿಲ್ಲಾಮಟ್ಟದ ಕ್ರೀಡಾಕೂಟದ 14 ವರ್ಷದ ಒಳಗಿನ ಉದ್ದ ಜಿಗಿತ ಸ್ಪರ್ಧೆಯಲ್ಲಿ ನಮ್ಮ ಶಿಕ್ಷಣ ಸಂಸ್ಥೆಯಲ್ಲಿ 7ನೇ ತರಗತಿ ವ್ಯಾಸಂಗ ಮಾಡುತ್ತಿರುವ ಕೆ.ಪಿ.ಲಿಖಿತಾ 4.5 ಮೀಟರ್ ಜಿಗಿಯುವ ಮೂಲಕ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದು, ನ.1 ರಂದು ಉಡುಪಿಯ ಅಜರಕಾಡು ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಲಿದ್ದಾರೆ ಎಂದರು.

    ಕಳೆದ ಸಾಲಿನಲ್ಲಿ ಇದೇ ಶಾಲೆಯ ಧನುಷ್ ಚಂದ್ರ ಎಂಬ ವಿದ್ಯಾರ್ಥಿ ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿ ಗುಂಡು ಎಸೆತ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದು, ಆಳ್ವಾಸ್ ಶಿಕ್ಷಣ ಸಂಸ್ಥೆಯಲ್ಲಿ ಉಚಿತ ದಾಖಲಾತಿ ಪಡೆದಿದ್ದಾನೆ ಎಂದರು.

    ಕಾರ್ಯದರ್ಶಿ ಹರೀಶ್, ಪ್ರಾಂಶುಪಾಲ ಮಹಮದ್ ಫಿರೋಜ್ ಖಾನ್, ಮುಖ್ಯ ಶಿಕ್ಷಕ ರಂಜಿತ್‌ಕುಮಾರ್, ದೈಹಿಕ ಶಿಕ್ಷಣ ಶಿಕ್ಷಕ ಡಿ.ಎನ್.ನಟರಾಜ್ ಹಾಗೂ ಶಿಕ್ಷಕರು ವಿದ್ಯಾರ್ಥಿನಿಗೆ ಅಭಿನಂದಿಸಿ ಶುಭ ಹಾರೈಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts