ಶ್ರವಣಬೆಳಗೊಳದ ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ವಿಧಿವಶ

Charukeerthi bhattaraka swamiji
ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ
Published on

ಹಾಸನ: ಜೈನ‌ಕಾಶಿ ಶ್ರವಣಬೆಳಗೊಳದ ಸ್ವಸ್ತಿ ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಅವರು ಇಂದು (ಮಾ.23) ಇಹಲೋಕ ತ್ಯಜಿಸಿದ್ದಾರೆ.

ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಶ್ರೀಗಳನ್ನು ಆ್ಯಂಬ್ಯುಲೆನ್ಸ್ ಮೂಲಕ ಬೆಳ್ಳೂರಿನ ಶ್ರೀ ಆದಿಚುಂಚನಗಿರಿ ಆಸ್ಪತ್ರೆಗೆ ರವಾನಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಶ್ರೀಗಳು ಕೊನೆಯುಸಿರೆಳೆದಿದ್ದಾರೆ.

ಕಳೆದ ನಾಲ್ಕು ತಿಂಗಳಿನಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಶ್ರವಣಬೆಳಗೊಳ ಮಠದಲ್ಲೇ ವೈದ್ಯರು ಚಿಕಿತ್ಸೆ ನೀಡುತ್ತಿದ್ದರು. ಹೆಚ್ಚಿನ ಚಿಕಿತ್ಸೆಗಾಗಿ ಆದಿಚುಂಚನಗಿರಿ ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿತ್ತು. ಇದೀಗ ಶ್ರೀಗಳು ವಿಧಿವಶರಾಗಿದ್ದು, ಮಠದಲ್ಲಿ ನೀರವ ಮೌನ ಆವರಿಸಿದೆ.

ಶ್ರೀಗಳು ಇನ್ನಿಲ್ಲ ಎಂಬ ಸುದ್ದಿ ತಿಳಿದು ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಅವರು ಬೆಂಗಳೂರಿನಿಂದ ಆಗಮಿಸುತ್ತಿದ್ದಾರೆ. ಸ್ವಸ್ತಿ ಶ್ರೀ ಚಾರುಕೀರ್ತಿ ಅನ್ನುವ ಬಿರುದಾಂಕಿತ ಜೈನಭಟ್ಟಾರಕ ಸ್ವಾಮೀಜಿಗಳು ದೇಶಾದ್ಯಂತ ಅಪಾರ ಭಕ್ತವರ್ಗವನ್ನು ಹೊಂದಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net