

ಹೈದ್ರಾಬಾದ್: ( kidambi srikanth, Shravya Varma ) ಖ್ಯಾತ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಅವರ ಸೊಸೆ, ಸಿನಿಮಾ ನಿರ್ಮಾಪಕಿ ಹಾಗೂ ಸೆಲೆಬ್ರಿಟಿ ಫ್ಯಾಷನ್ ಡಿಸೈನರ್ ಶ್ರಾವ್ಯ ವರ್ಮಾ ಹಾಗೂ ಬ್ಯಾಡ್ಮಿಂಟನ್ ಸ್ಟಾರ್ ಆಟಗಾರ ಕಿಡಂಬಿ ಶ್ರೀಕಾಂತ್ ಅವರ ವಿವಾಹ ಅದ್ಧೂರಿಯಾಗಿ ನಡೆದಿದೆ.
ಹೈದರಾಬಾದ್‌ನ ಖಾಸಗಿ ರೆಸಾರ್ಟ್‌ನಲ್ಲಿ ನಡೆದ ವಿವಾಹ ಸಮಾರಂಭದಲ್ಲಿ ಕುಟುಂಬ ಸದಸ್ಯರು, ಸಂಬಂಧಿಕರು, ಸ್ನೇಹಿತರು, ಆಪ್ತರು ಮತ್ತು ಅನೇಕ ಗಣ್ಯರು ಭಾಗವಹಿಸಿದ್ದರು. ನವ ದಂಪತಿಗೆ ಆಶೀರ್ವದಿಸಿದರು.
ಸ್ಟಾರ್ ಹೀರೋಯಿನ್ ರಶ್ಮಿಕಾ, ವಿಜಯ್ ದೇವರಕೊಂಡ ಕುಟುಂಬ, 'ಕಲ್ಕಿ' ನಿರ್ದೇಶಕ ನಾಗ್ ಅಶ್ವಿನ್, ನಿರ್ದೇಶಕ ವಂಶಿ ಪೈಡಿಪಲ್ಲಿ, ಕೀರ್ತಿ ಸುರೇಶ್ ಭಾಗಿಯಾಗಿದ್ದರು. ಸದ್ಯ ಈ ಮದುವೆ ಸಮಾರಂಭಕ್ಕೆ ಸಂಬಂಧಿಸಿದ ಫೋಟೋಗಳು ಮತ್ತು ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ.
ಚಿತ್ರರಂಗದ ಸೆಲೆಬ್ರಿಟಿಗಳ ಜತೆಗೆ ಅಭಿಮಾನಿಗಳು, ನೆಟಿಜನ್‌ಗಳು ನವದಂಪತಿಗೆ ಶುಭಾಶಯ ಕೋರುತ್ತಿದ್ದಾರೆ. ಶ್ರಾವ್ಯ ವರ್ಮಾ ಮತ್ತು ಕಿಡಂಬಿ ಶ್ರೀಕಾಂತ್ ಕೆಲ ದಿನಗಳಿಂದ ಪ್ರೀತಿಸುತ್ತಿದ್ದರು. ಇವರಿಬ್ಬರ ಪ್ರೀತಿಗೆ ಹಿರಿಯರೂ ಆಶೀರ್ವಾದ ಮಾಡಿದ್ದರಿಂದ ಈ ವರ್ಷ ಆಗಸ್ಟ್‌ನಲ್ಲಿ ಇಬ್ಬರು ಹಿರಿಯರ ಸಮ್ಮುಖದಲ್ಲಿ ಸರಳವಾಗಿ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಈಗ ವಿವಾಹವಾಗಿದ್ದಾರೆ.
ವಿಶ್ವದ ಮಾಜಿ ನಂಬರ್ 1 ಬ್ಯಾಡ್ಮಿಂಟನ್ ಆಟಗಾರ, ಪದ್ಮಶ್ರೀ ಪುರಸ್ಕೃತ ಕಿಡಂಬಿ ಶ್ರೀಕಾಂತ್ ಮತ್ತು ಶ್ರಾವ್ಯ ವರ್ಷಗಳಿಂದ ಪ್ರೀತಿಸುತ್ತಿದ್ದರು. ಅವರ ಹಿರಿಯರ ಒಪ್ಪಿಗೆ ಮೇರೆಗೆ ಆಗಸ್ಟ್‌ನಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದು, ಇತ್ತೀಚೆಗೆ ವಿವಾಹವಾದರು.