ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ

Btw_Sathyanarayana
Published on

ಬಂಟ್ವಾಳ: ಬಂಟ್ವಾಳ ತಾಲೂಕು ಹಿಂದು ಜಾಗರಣ ವೇದಿಕೆ ಆಶ್ರಯದಲ್ಲಿ ಅಯೋಧ್ಯೆ ಶ್ರೀರಾಮ ಜನ್ಮಸ್ಥಾನದ ಮುಕ್ತಿ ಆಂದೋಲನದ ವಿಜಯೋತ್ಸವದ ಪ್ರಯುಕ್ತ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಮತ್ತು ಧಾರ್ಮಿಕ ಸಭಾ ಕಾರ್ಯಕ್ರಮ ಶುಕ್ರವಾರ ಬಿ.ಸಿ.ರೋಡಿನ ಶ್ರೀ ರಕ್ತೇಶ್ವರೀ ದೇವಸ್ಥಾನದಲ್ಲಿ ನಡೆಯಿತು.

ಉಪ್ಪಳ ಕೊಂಡೆವೂರು ಶ್ರೀ ನಿತ್ಯಾನಂದ ಯೋಗಾಶ್ರಮ ಮಠದ ಶ್ರೀ ಯೋಗಾನಂದ ಸರಸ್ವತೀ ಸ್ವಾಮೀಜಿ ಅವರು ಆಶೀರ್ವಚನ ನೀಡಿದರು. ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ದೈವ ನರ್ತಕ ಲೋಕಯ್ಯ ಸೇರಾ ಅಧ್ಯಕ್ಷತೆ ವಹಿಸಿದ್ದರು. ಯಕ್ಷಗಾನ ಕಲಾವಿದ ದಿನೇಶ್ ಕಾವಳಕಟ್ಟೆ ದಿಕ್ಸೂಚಿ ಭಾಷಣಗೈದರು.

ಹಿಂದು ಜಾಗರಣ ವೇದಿಕೆ ಪ್ರಾಂತ ಕಾರ್ಯಕಾರಿಣಿ ಸದಸ್ಯರಾದ ಪ್ರಶಾಂತ್ ಕೆಂಪುಗುಡ್ಡೆ, ಜಿಲ್ಲಾ ಸಂಯೋಜಕ ನರಸಿಂಹ ಮಾಣಿ, ತಿರುಲೇಶ್ ಬೆಳ್ಳೂರು ಮೊದಲಾದವರು ಉಪಸ್ಥಿತರಿದ್ದರು.

ಬಂಟ್ವಾಳ ತಾಲೂಕು ಹಿಂಜಾವೇ ಸಂಯೋಜಕ ಚಿದಾನಂದ ಕುಜ್ಲುಬೆಟ್ಟು ಸ್ವಾಗತಿಸಿದರು. ಗುರುಪ್ರಿಯ ನಾಯಕ್ ವೈಯಕ್ತಿಕ ಗೀತೆ ಹಾಗೂ ವಂದೇಮಾತರಂ ಗೀತೆ ಹಾಡಿದರು. ದುರ್ಗಾದಾಸ್ ಕಡೇಶಿವಾಲಯ ಕಾರ್ಯಕ್ರಮ ನಿರೂಪಿಸಿದರು. ರಂಜಿತ್ ಧನುಪೂಜೆ ವಂದಿಸಿದರು.

ತೆಂಕಬೆಳ್ಳೂರು ನಾಗಶ್ರೀ ಮಿತ್ರ ವೃಂದ ಕಮ್ಮಾಜೆ ಇವರಿಂದ ಭಜನಾ ಸಂಕೀರ್ತನೆ ನಡೆಯಿತು. ಮಧ್ಯಾಹ್ನ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ, ಮಹಾಪೂಜೆ, ಅನ್ನ ಸಂತರ್ಪಣೆ ಜರುಗಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net