ಧರ್ಮ ಅನುಷ್ಠಾನದಿಂದ ಹಿಂದು ಸಮಾಜ ಭದ್ರ :ವಿವೇಕ ಚೈತನ್ಯಾನಂದ ಸ್ವಾಮೀಜಿ ಬಣ್ಣನೆ

virakamba
Published on

ಬಂಟ್ವಾಳ: ಹಿಂದು ಸಮಾಜ ಗಟ್ಟಿ ಆಗಬೇಕಾದರೆ ಧರ್ಮ ಅನುಷ್ಠಾನ ಸರಿಯಾದ ಮಾರ್ಗದರ್ಶನದಲ್ಲಿ ಆಗಬೇಕು ಎಂದು ಪೊಳಲಿ ಶ್ರೀ ರಾಮಕೃಷ್ಣ ತಪೋವನ ಪೊಳಲಿಯ ವಿವೇಕ ಚೈತನ್ಯಾನಂದ ಸ್ವಾಮೀಜಿ ಹೇಳಿದರು.

ತಾಲೂಕಿನ ವೀರಕಂಭ ಗ್ರಾಮದ ಶ್ರೀ ಶಾರದಾ ಭಜನಾ ಮಂದಿರದಲ್ಲಿ, 40ನೇ ವರ್ಷದ ಶ್ರೀ ಶಾರದಾ ಮಹೋತ್ಸವದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಶನಿವಾರ ಆಶೀರ್ವಚನ ನೀಡಿದರು.

ಶ್ರೀ ಶಾರದಾ ಉತ್ಸವ ಸಮಿತಿ ಅಧ್ಯಕ್ಷ ದಿನೇಶ್ ಪೂಜಾರಿ ಇದ್ದರು.ವಿಟ್ಲ ಜೇಸಿ ಶಾಲಾ ಆಡಳಿತಾಧಿಕಾರಿ ರಾಧಾಕೃಷ್ಣ ಎರುಂಬು ಧಾರ್ಮಿಕ ಉಪನ್ಯಾಸ ನೀಡಿದರು. ವಿವಿಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ನಾರಾಯಣ ಭಟ್ ಬೆತ್ತಸರವು, ಆನಂದ ಆಳ್ವ ಗೋಳ್ತಮಜಲು ಉಪಸ್ಥಿತರಿದ್ದರು.

ಕೆಎಂಎಫ್ ವಿಸ್ತರಣಾಧಿಕಾರಿ ಜಗದೀಶ್ ಎ. ಕಾರ್ಯಕ್ರಮ ನಿರೂಪಿಸಿದರು. ಸಭಾ ಕಾರ್ಯಕ್ರಮದ ಮೊದಲು ಸ್ವಾಮಿ ವಿವೇಕ ಚೈತನ್ಯಾನಂದ ಅವರ ಉಪಸ್ಥಿತಿಯಲ್ಲಿ ದುರ್ಗಾ ನಮಸ್ಕಾರ ಪೂಜೆ ಜರುಗಿತು. ಧಾರ್ಮಿಕ ಸಭಾ ಕಾರ್ಯಕ್ರಮದ ಬಳಿಕ ಸ್ಥಳೀಯ ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net