ಮಂಗಳೂರು: ಶ್ರೀನಿವಾಸ ವಿಶ್ವವಿದ್ಯಾಲಯದ ಪಾಂಡೇಶ್ವರದಲ್ಲಿನ ಸಿಟಿ ಕ್ಯಾಂಪಸ್ನಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಮಹಿಳಾ ಹಕ್ಕುಗಳು, ಸಮಾನತೆ ಮತ್ತು ಸಬಲೀಕರಣದ ಮಹತ್ವವನ್ನು ಒಳಗೊಂಡಂತೆ ಹಲವು ಸಂಸ್ಥೆಗಳ ಸಂಯುಕ್ತ ಸಹಭಾಗಿತ್ವದಲ್ಲಿ ಈ ವಿಶೇಷ ದಿನಾಚರಣೆ ಜರುಗಿತು.
ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಅಂಡ್ ಕಾಮರ್ಸ್, ಇನ್ಸ್ಟಿಟ್ಯೂಟ್ ಆಫ್ ಪೋರ್ಟ್, ಶಿಪ್ಪಿಂಗ್ ಅಂಡ್ ಲಾಜಿಸ್ಟಿಕ್ ಮ್ಯಾನೇಜ್ಮೆಂಟ್, ಇನ್ಸ್ಟಿಟ್ಯೂಟ್ ಆಫ್ ಫಿಸಿಯೊಥೆರಪಿ, ಇನ್ಸ್ಟಿಟ್ಯೂಟ್ ಆಫ್ ಹೋಟೆಲ್ ಮ್ಯಾನೇಜ್ಮೆಂಟ್ ಅಂಡ್ ಟೂರಿಸಂ, ಮತ್ತು ಇನ್ಸ್ಟಿಟ್ಯೂಟ್ ಆಫ್ ಎಜುಕೇಶನ್ ಸಂಯುಕ್ತವಾಗಿ ಆಯೋಜಿಸಿತ್ತು.
ಇನ್ಸ್ಟಿಟ್ಯೂಟ್ ಆಫ್ ಹೋಟೆಲ್ ಮ್ಯಾನೇಜ್ಮೆಂಟ್ ಅಂಡ್ ಟೂರಿಸಂನ ವಿದ್ಯಾರ್ಥಿಗಳ ಸಹಯೋಗದಲ್ಲಿ ತಯಾರಿಸಿದ 50 ಕೆ.ಜಿಯ ಭರ್ಜರಿ ಕೇಕ್ ಮಹಿಳಾ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಕೇಕ್ ಕತ್ತರಿಸುವ ಮೂಲಕ ಆಚರಿಸಿದರು. ಶ್ರೀನಿವಾಸ ವಿಶ್ವವಿದ್ಯಾಲಯದ ಕುಲಾಧಿಪತಿ ಡಾ. ಸಿಎ. ಎ. ರಾಘವೇಂದ್ರ ರಾವ್ ಮತ್ತು ಸಹ ಕುಲಾಧಿಪತಿ ಡಾ.ಎ. ಶ್ರೀನಿವಾಸ್ ರಾವ್ ಅವರ ಮಾರ್ಗದರ್ಶನದಲ್ಲಿ ಕಾರ್ಯಕ್ರಮ ಸಂಪನ್ನಗೊಂಡಿತು.