More

  ವಿದ್ಯಾರ್ಥಿಗಳಿಂದ ಭವಿಷ್ಯದಲ್ಲಿ ರಾಷ್ಟ್ರಕ್ಕೆ ಸೇವೆ, ಶ್ರೀನಿವಾಸ ಮೆಡಿಕಲ್ ಸೈನ್ಸಸ್‌ನ ಪದವಿ ಪ್ರದಾನದಲ್ಲಿ ಡಾ. ರಾಘವೇಂದ್ರ ರಾವ್ ಆಶಯ

  ಮಂಗಳೂರು: ಶ್ರೀನಿವಾಸ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ ಮತ್ತು ರಿಸರ್ಚ್ ಸೆಂಟರ್‌ನ ಪದವಿ ಪ್ರದಾನ ಸಮಾರಂಭ ಶ್ರೀನಿವಾಸ ವಿಶ್ವವಿದ್ಯಾಲಯದ ಮುಕ್ಕ ಕ್ಯಾಂಪಸ್‌ನಲ್ಲಿ ನಡೆಯಿತು.

  ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಶ್ರೀನಿವಾಸ ವಿಶ್ವವಿದ್ಯಾಲಯದ ಕುಲಾಧಿಪತಿ ಡಾ.ಸಿಎ ಎ.ರಾಘವೇಂದ್ರ ರಾವ್, ಸಂಸ್ಥೆಯ ವಿದ್ಯಾರ್ಥಿಗಳು ಭವಿಷ್ಯದಲ್ಲಿ ಸಮಾಜ ಮತ್ತು ರಾಷ್ಟ್ರಕ್ಕೆ ಸೇವೆ ಸಲ್ಲಿಸುವುದು ಹೆಮ್ಮೆಯ ವಿಷಯದ ವೈದ್ಯಕೀಯ ವಿದ್ಯಾರ್ಥಿಗಳು ಹೆಚ್ಚಿನ ಸಂಶೋಧನೆಗಳನ್ನು ನಡೆಸಿ ರಾಷ್ಟ್ರಕ್ಕೆ ಹೆಚ್ಚಿನ ಸೇವೆಯನ್ನು ನೀಡಬಹುದು ಎಂದರು.

  ಸಹ ಕುಲಾಧಿಪತಿ ಡಾ.ಎ.ಶ್ರೀನಿವಾಸ ರಾವ್ ಮಾತನಾಡಿ ನಗುವು ರೋಗಿಗೆ ಮಾನಸಿಕ ಶಕ್ತಿಯನ್ನು ನೀಡುತ್ತದೆ.ಸಕಾರಾತ್ಮಕ ಮನಸ್ಸು ಇದ್ದರೆ ದೇವರು ಕೂಡ ನಮ್ಮೊಂದಿಗೆ ಇರುತ್ತಾರೆ ಎಂದರು

  ಶ್ರೀನಿವಾಸ ವಿಶ್ವವಿದ್ಯಾಲಯದ ಆಡಳಿತ ಮಂಡಳಿ ಸದಸ್ಯರಾದ ವಿಜಯಲಕ್ಷ್ಮಿ ಆರ್.ರಾವ್, ಮಿತ್ರಾ ಎಸ್.ರಾವ್, ಕುಲಸಚಿವರಾದ ಡಾ.ಅನಿಲ್ ಕುಮಾರ್, ಡಾ.ಅಜಯ ಕುಮಾರ್, ಶ್ರೀನಿವಾಸ ಸಮೂಹ ಸಂಸ್ಥೆಗಳ ಡೀನ್ ಮತ್ತು ಪ್ರಾಂಶುಪಾಲರು ಉಪಸ್ಥಿತರಿದ್ದರು.

  ಶ್ರೀನಿವಾಸ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್‌ನ ಡೀನ್ ಡಾ. ಉದಯ ಕುಮಾರ್ ಸ್ವಾಗತಿಸಿ, ವೈದ್ಯಕೀಯ ಅಧೀಕ್ಷಕ ಡಾ.ಡೇವಿಡ್ ಡಿ.ಎಂ. ರೊಸಾರಿಯೊ ವಂದಿಸಿದರು.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts