ನವದೆಹಲಿ: ಭಾರತ ತಂಡದ ಬ್ಯಾಟ್ಸ್ಮ್ಯಾನ್ ಶ್ರೇಯಸ್ ಅಯ್ಯರ್ ಬೆನ್ನು ನೋವಿನ ಸಮಸ್ಯೆ ಪರಿಣಾಮ ಶಸ್ತ್ರಚಿಕಿತ್ಸೆಗೆ ಒಳಗಾಗುತ್ತಿದ್ದು IPL ಹಾಗೂ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್(WTC) ಫಿನಾಲೆಗೆ ಅಲಭ್ಯರಾಗಲಿದ್ದಾರೆ ಎಂದು ತಿಳಿದು ಬಂದಿದೆ.
ಬೆನ್ನು ನೋವಿನ ಸಮಸ್ಯೆಯಿಂದ ಬಳಲುತ್ತಿರುವ ಶ್ರೇಯಸ್ ವಿದೇಶದಲ್ಲಿ ಶಸ್ತ್ರ ಚಿಕಿತ್ಸೆಗೆ ಒಳಗಾಗಲಿದ್ಧಾರೆ. ಚಿಕಿತ್ಸೆಯ ನಮತರ ಕನಿಷ್ಠ 5 ತಿಂಗಳು ಕ್ರಿಕೆಟ್ನಿಂದ ದೂರ ಉಳಿಯಲಿದ್ಧಾರೆ ಎಂದು ವರದಿಯಾಗಿದೆ.
ಇದನ್ನೂ ಓದಿ: ಉತ್ತಮ ಕಾನೂನು ಸೇವೆ ಒದಗಿಸುವುದರಲ್ಲಿ ಕರ್ನಾಟಕ ನಂ.1; ಅಗ್ರ 5ರಲ್ಲಿ ದಕ್ಷಿಣದ ನಾಲ್ಕು ರಾಜ್ಯಗಳು
IPLನಲ್ಲಿ ಕೊಲ್ಕತಾ ನೈಟ್ರೈಡರ್ಸ್ ತಂಡದ ನಾಯಕನಾಗಿರುವ ಶ್ರೇಯಸ್ ಕೆಳ ಬೆನ್ನಿನ ನೋವಿನಿಂದ ಬಳಲುತ್ತಿದ್ದು ಜೂನ್ 7ರಂದು ಲಂಡನ್ನಲ್ಲಿ ಭಾರತ-ಆಸ್ಟ್ರೇಲಿಯಾ ನಡುವೆ ನಡೆಯಲಿರುವ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನಿಂದ ಹೊರಗುಳಿಯಲಿದ್ದಾರೆ.