More

    ಶ್ರೀ ಶಿವಯೋಗಿ ಸಿದ್ದರಾಮೇಶ್ವರರ ತತ್ವಾದರ್ಶಗಳನ್ನು ರೂಢಿಸಿಕೊಳ್ಳಿ

    ಚಿಕ್ಕಬಳ್ಳಾಪುರ: ಜನ ಸಾಮಾನ್ಯರಿಗೆ ಉತ್ತಮ ಮಾರ್ಗದರ್ಶನ ನೀಡಿದ ಶ್ರೀ ಶಿವಯೋಗಿ ಸಿದ್ದರಾಮೇಶ್ವರರು ಆದರ್ಶ ವಚನಕಾರರು ಎಂದು ತಾಪಂ ಅಧ್ಯಕ್ಷ ಬಿ.ಎಂ.ರಾಮಸ್ವಾಮಿ ಬಣ್ಣಿಸಿದರು.

    ನಗರದ ಅಂಬೇಡ್ಕರ್ ಭವನದಲ್ಲಿ ಜಿಲ್ಲಾಡಳಿತ, ಜಿಪಂ, ಕನ್ನಡ ಮತ್ತು ಸಂಸ್ಕ್ರತಿ ಇಲಾಖೆ ಮಂಗಳವಾರ ಆಯೋಜಿಸಿದ್ದ ಶ್ರೀ ಶಿವಯೋಗಿ ಸಿದ್ದರಾಮೇಶ್ವರ ಜಯಂತ್ಯುತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

    ಭೋವಿ ಜನಾಂಗದವರು ಮೊದಲಿನಿಂದಲೂ ಶ್ರಮಿಕರು. ಸಮಾಜಕ್ಕೆ ಉತ್ತಮ ಕೊಡುಗೆ ನೀಡಿದ್ದಾರೆ. ಸಮುದಾಯ ಸರ್ವಾಂಗೀಣ ಪ್ರಗತಿ ಕಾಣಲು ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಕೊಡಿಸಿ, ಉನ್ನತ ಹುದ್ದೆಗಳನ್ನು ಅಲಂಕರಿಸಲು ಪ್ರೋತ್ಸಾಹಿಸಬೇಕು ಎಂದರು.

    ಕರ್ಮಯೋಗಿಗಳಾದ ಸಿದ್ದರಾಮೇಶ್ವರರು ಸಮಾಜದ ಸುಧಾರಣೆ ಸೇವೆಯಲ್ಲಿ ಬದುಕಿನ ಸಿದ್ಧಿ ಕಂಡುಕೊಂಡವರು. ಮಹಿಳೆಯರ ಸಮಾನತೆಗಾಗಿ ಧ್ವನಿ ಎತ್ತುವುದರ ಜತೆಗೆ ಜಾತಿ ವ್ಯವಸ್ಥೆ ವಿರುದ್ಧ ಹೋರಾಡಿದರು. ಇಂತಹ ವ್ಯಕ್ತಿಯನ್ನು ನಿರಂತರವಾಗಿ ಸ್ಮರಿಸಿ, ಅವರ ತತ್ವಾದರ್ಶಗಳನ್ನು ಜೀವನದಲ್ಲಿ ರೂಢಿಸಿಕೊಳ್ಳಬೇಕು ಎಂದು ತಿಳಿಸಿದರು.

    ತಹಸೀಲ್ದಾರ್ ಕೆ.ನರಸಿಂಹಮೂರ್ತಿ ಮಾತನಾಡಿ, ಕಾಯಕವೇ ಕೈಲಾಸ ಸಂದೇಶದಂತೆ ಜೀವನ ಸಾಗಿಸಿದ ಶಿವಯೋಗಿ ಸಿದ್ಧರಾಮೇಶ್ವರರು ಸಮ ಸಮಾನತೆಯ ಸಮಾಜ ನಿರ್ಮಿಸಲು ಶ್ರಮಿಸಿದರು. ಇವರು ರಚಿಸಿರುವ ವಚನಗಳನ್ನು ಓದಿ ತಿಳಿದುಕೊಳ್ಳಬೇಕು ಎಂದು ಹೇಳಿದರು.

    ಚಿಂತಾಮಣಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಇತಿಹಾಸ ವಿಭಾಗದ ಮುಖ್ಯಸ್ಥ ಡಾ ಎಂ.ಎನ್.ರಘು ಮಾತನಾಡಿ, ದೇವಾಲಯ, ಗುಡಿ ಗೋಪುರ, ಕೆರೆ ಕಟ್ಟೆ , ಕಾಲುವೆ ಕಟ್ಟೆಗಳನ್ನು ನಿರ್ಮಿಸಿ, ಸಮಾಜಕ್ಕೆ ಬಳುವಳಿಯಾಗಿ ನೀಡಿದ್ದು ಮನುಷ್ಯರಾಗಿ ಹುಟ್ಟಿದ ಮೇಲೆ ಒಳ್ಳೆಯ ಸಾಧನೆ ಮಾಡಬೇಕು. ಇಲ್ಲವಾದರೆ ಬದುಕಿದ್ದೂ ಸತ್ತಂತೆ ಎಂದರು. ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪುರಸ್ಕಾರ ನೀಡಲಾಯಿತು.

    ಪೌರಾಯುಕ್ತ ಲೋಹಿತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ವೆಂಕಟಾಚಲಪತಿ, ಭೋವಿ ಸಂಘದ ಜಿಲ್ಲಾಧ್ಯಕ್ಷ ಗವಿಗಾನಹಳ್ಳಿ ನಾರಾಯಣಸ್ವಾಮಿ, ಭೋವಿ ಮಹಾಸಭಾ ಜಿಲ್ಲಾಧ್ಯಕ್ಷ ಗುರ‌್ರಪ್ಪ ಮತ್ತಿತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts