More

    ಶ್ರೀ ಕೋಡಿ ಮಹದೇಶ್ವರ ಆರಾಧನಾ ಮಹೋತ್ಸವ

    ಕಪ್ಪಸೋಗೆ: ಕಪ್ಪಸೋಗೆ ಗ್ರಾಮದಲ್ಲಿ ಶ್ರೀ ಕೋಡಿ ಮಹದೇಶ್ವರ 30ನೇ ವರ್ಷದ ಆರಾಧನಾ ಮಹೋತ್ಸವ ವಿಜೃಂಭಣೆೆಯಿಂದ ಜರುಗಿತು.

    ಶ್ರೀ ಕಂತೆ ಮಹದೇಶ್ವರ ಮಠಾಧ್ಯಕ್ಷ ಶ್ರೀ ಮಹಾಂತ ದೇಶಿಕೇಂದ್ರ ಸ್ವಾಮೀಜಿ ನೇತೃತ್ವದಲ್ಲಿ ವಿವಿಧ ಪೂಜಾ ಕೈಂಕರ್ಯಗಳು ನೆರವೇರಿದವು. ಶ್ರೀ ಮಹದೇಶ್ವರ ಸ್ವಾಮಿಗೆ ವಿವಿಧ ಹೂಗಳಿಂದ ಅಲಂಕರಿಸಿ ರುದ್ರಾಭಿಷೇಕ, ಬಿಲ್ವಾರ್ಚನೆ ವಿವಿಧ ಪೂಜೆಗಳನ್ನು ನೆರವೇರಿಸಲಾಯಿತು.

    ಆರಾಧನಾ ಮಹೋತ್ಸವ ಹಿನ್ನೆಲೆಯಲ್ಲಿ ವೀರಗಾಸೆ ಕುಣಿತ, ಮಂಗಳವಾದ್ಯ, ಶ್ರೀ ಮಹದೇಶ್ವರ ಪಲ್ಲಕ್ಕಿ ಉತ್ಸವ ನೆರವೇರಿಸಲಾಯಿತು. ಭಕ್ತರಿಗೆ ಪ್ರಸಾದ ವಿನಿಯೋಗ ನೆರವೇರಿಸಲಾಯಿತು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts