More

    ಶ್ರೀ ಲಕ್ಷ್ಮೀನರಸಿಂಹಸ್ವಾಮಿ ರಥೋತ್ಸವ

    ಭದ್ರಾವತಿ: ಹಿಂದು ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಯ ಹಳೇನಗರದ ಪುರಾಣ ಪ್ರಸಿದ್ಧ ಶ್ರೀ ಲಕ್ಷ್ಮೀನರಸಿಂಹಸ್ವಾಮಿ ಬ್ರಹ್ಮರಥೋತ್ಸವ ಗುರುವಾರ ವಿಜೃಂಭಣೆಯಿಂದ ನೆರವೇರಿತು.

    ಮಧ್ಯಾಹ್ನ 12.30ಕ್ಕೆ ಭಕ್ತರ ಸಮ್ಮುಖದಲ್ಲಿ ಅಲಂಕೃತಗೊಂಡ ಭವ್ಯ ರಥದಲ್ಲಿ ಶ್ರೀ ಸ್ವಾಮಿ ಪ್ರತಿಷ್ಠಾಪನೆಯೊಂದಿಗೆ ಬ್ರಹ್ಮರಥೋತ್ಸವ ಆರಂಭವಾಯಿತು. ಜಾಗಟೆ, ನಾದಸ್ವರ ವಾದ್ಯಗಳೊಂದಿಗೆ ವಿವಿಧ ಮಹಿಳಾ ಭಜನೆ ತಂಡಗಳಿಂದ ಭಜನೆ ನಡೆಯಿತು. ಇದಕ್ಕೂ ಮೊದಲು ದೇವಸ್ಥಾನದ ಪ್ರಧಾನ ಅರ್ಚಕ ರಂಗನಾಥ ಶರ್ಮ ನೇತೃತ್ವದಲ್ಲಿ ಧಾರ್ಮಿಕ ಆಚರಣೆಗಳು ನೆರವೇರಿದವು.
    ದೇವಸ್ಥಾನದ ಆವರಣದಲ್ಲಿ ಸೇವಾಕರ್ತರಿಂದ ಮಜ್ಜಿಗೆ, ಪಾನಕ, ಕೋಸಂಬರಿ ವಿತರಣೆ ಹಾಗೂ ದೇವಸ್ಥಾನ ಆಡಳಿತ ಮಂಡಳಿಯಿಂದ ಅನ್ನ ಸಂತರ್ಪಣೆ ನೆರವೇರಿತು. ಧಾರ್ಮಿಕ ದತ್ತಿ ಇಲಾಖೆ ಅಧಿಕಾರಿಗಳು, ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರು, ಪದಾಧಿಕಾರಿಗಳು, ನಗರದ ವಿವಿಧ ದೇವಸ್ಥಾನಗಳ ಅರ್ಚಕರು, ಸಂಘ ಸಂಸ್ಥೆಗಳ ಪ್ರಮುಖರು ಭಾಗವಹಿಸಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts