16 C
Bangalore
Saturday, December 7, 2019

ದತ್ತಮಾಲಾ ಅಭಿಯಾನಕ್ಕೆ ಚಾಲನೆ

Latest News

ಎಲ್ಲ ಸಮುದಾಯಗಳ ನಾಯಕ ಬಾಬಾಸಾಹೇಬ್

ಚಿಕ್ಕಬಳ್ಳಾಪುರ: ಪುತ್ಥಳಿಗೆ ಮಾಲಾರ್ಪಣೆ, ಉಪನ್ಯಾಸ ಸೇರಿ ವಿವಿಧ ಕಾರ್ಯಕ್ರಮಗಳೊಂದಿಗೆ ಭಾರತ ರತ್ನ, ಸಂವಿಧಾನ ಶಿಲ್ಪಿ ಡಾ ಬಿ.ಆರ್.ಅಂಬೇಡ್ಕರ್‌ರವರ ಪರಿನಿಬ್ಬಾಣ ದಿನ ಶುಕ್ರವಾರ ನಡೆಯಿತು....

ಮತಯಂತ್ರಕ್ಕೆ ಪೊಲೀಸ್ ಸರ್ಪಗಾವಲು

ಹಾವೇರಿ: ಜಿಲ್ಲೆಯ ರಾಣೆಬೆನ್ನೂರ ಹಾಗೂ ಹಿರೇಕೆರೂರ ವಿಧಾನಸಭಾ ಕ್ಷೇತ್ರಗಳ ಮತಯಂತ್ರಗಳನ್ನು ತಾಲೂಕಿನ ದೇವಗಿರಿಯಲ್ಲಿರುವ ಸರ್ಕಾರಿ ಇಂಜಿನಿಯರಿಂಗ್ ಕಾಲೇಜ್​ನ ಸ್ಟ್ರಾಂಗ್ ರೂಂನಲ್ಲಿ ಪೊಲೀಸ್ ಸರ್ಪ...

ಅಳಿದುಳಿದ ಉಳ್ಳಾಗಡ್ಡಿಗೂ ಡಿಮಾಂಡ್

ರಾಣೆಬೆನ್ನೂರ: ಕಳೆದ ಒಂದು ತಿಂಗಳ ಹಿಂದೆ ಸಂಪೂರ್ಣ ಬೆಲೆ ಕಳೆದುಕೊಂಡಿದ್ದ ಉಳ್ಳಾಗಡ್ಡಿ ಬೆಳೆಗೆ ಇದೀಗ ಭಾರಿ ಡಿಮಾಂಡ್ ಬಂದಿದೆ. ದರದಲ್ಲಿ ಕೂಡ ಭಾರಿ...

ಸಿಸಿಐನಿಂದ ಹತ್ತಿ ಖರೀದಿ ಶುರು

ಲಕ್ಷ್ಮೇಶ್ವರ: ಒಂದು ವಾರದಿಂದ ಮೋಡ ಕವಿದ ವಾತಾವರಣ ಮತ್ತು ತುಂತುರು ಮಳೆಯಿಂದಾಗಿ ಭಾರತೀಯ ಹತ್ತಿ ನಿಗಮ (ಸಿಸಿಐ)ದವರು ಬೆಂಬಲ ಬೆಲೆಯಡಿ ಹತ್ತಿ...

ಕೆಲಗೇರಿ ಕೆರೆ ಸಂರಕ್ಷಣೆಗೆ ಕ್ರಮ

ಧಾರವಾಡ: ನಗರದ ಇತಿಹಾಸ ಮತ್ತು ನೈಸರ್ಗಿಕ ಪರಂಪರೆ ಪ್ರತಿನಿಧಿಸುವ ಕೆಲಗೇರಿ ಮತ್ತು ಸಾಧನಕೇರಿ ಕೆರೆಗಳನ್ನು ಸಂರಕ್ಷಿಸಿ ಅಬಿವೃದ್ಧಿಪಡಿಸಲಾಗುತ್ತದೆ. ಕೆರೆಗಳ ಸೌಂದಯೀಕರಣಗೊಳಿಸಿ ಪ್ರವಾಸಿತಾಣಗಳಾಗಿ ರೂಪಿಸಲು...

ಚಿಕ್ಕಮಗಳೂರು: ಶ್ರೀ ಗುರು ದತ್ತಾತ್ರೇಯ ಪೀಠದಲ್ಲಿ ಶ್ರೀರಾಮ ಸೇನೆ ಹಮ್ಮಿಕೊಂಡಿರುವ 13ನೇ ವರ್ಷದ ದತ್ತಮಾಲಾ ಅಭಿಯಾನಕ್ಕೆ ನಗರದ ಕಾಮಧೇನು ಗಣಪತಿ ದೇವಾಲಯದಲ್ಲಿ ಸೋಮವಾರ ವಿಧ್ಯುಕ್ತ ಚಾಲನೆ ದೊರೆಯಿತು.

ಬೆಳಗ್ಗೆ 10ರಿಂದ ದೇವಸ್ಥಾನದ ಅರ್ಚಕರು ಶ್ರೀ ಗುರು ದತ್ತಾತ್ರೇಯರಿಗೆ ವಿಶೇಷ ಪೂಜೆ ಸಲ್ಲಿಸಿದರೆ, ಭಕ್ತರು ಭಜನೆ ಕಾರ್ಯಕ್ರಮ ನೆರವೇರಿಸಿದರು. ಬಳಿಕ ಭಕ್ತರಿಗೆ ಮಾಲೆ ಹಾಕಲಾಯಿತು.

ಸಂಘಟನೆ ರಾಜ್ಯ ಕಾರ್ಯಾಧ್ಯಕ್ಷ ಗಂಗಾಧರ ಕುಲಕರ್ಣಿ, ರಾಜ್ಯ ಉಪಾಧ್ಯಕ್ಷ ಮಹೇಶ್​ಕುಮಾರ್ ಕಟ್ಟಿನಮನೆ, ಜಿಲ್ಲಾಧ್ಯಕ್ಷ ರಕ್ಷಿತ್ ಶೆಟ್ಟಿ, ವಿಭಾಗ ಕಾರ್ಯದರ್ಶಿ ಸತೀಶ್ ಪೂಜಾರ್, ಜಿಲ್ಲಾ ವಕ್ತಾರ ಭರತ್, ಉಪಾಧ್ಯಕ್ಷ ದಿಲೀಪ್ ಶೆಟ್ಟಿ, ಜಿಲ್ಲಾ ಗೋರಕ್ಷಾ ಪ್ರಮುಖ್ ಮಹೇಶ್, ಶೃಂಗೇರಿ ತಾಲೂಕು ಪ್ರಧಾನ ಕಾರ್ಯದರ್ಶಿ ರಾಘವೇಂದ್ರ ಸೇರಿ 50ಕ್ಕೂ ಹೆಚ್ಚು ಕಾರ್ಯಕರ್ತರು ದತ್ತಮಾಲಾ ಧಾರಣೆ ಮಾಡಿದರು.

ಸೋಮವಾರದಿಂದ 8 ದಿನಗಳ ಕಾಲ ಮಾಲಾಧಾರಿಗಳು ವ್ರತಾಚರಣೆ ಮಾಡಲಿದ್ದು ಅ.28ರಂದು ನಗರದಲ್ಲಿ ಶೋಭಾಯಾತ್ರೆ ನಡೆಯಲಿದೆ. ಈ ಬಾರಿ ಬೋಳರಾಮೇಶ್ವರ ದೇವಸ್ಥಾನ ಆವರಣದ ಬದಲಿಗೆ ಆಜಾದ್ ಪಾರ್ಕ್ ವೃತ್ತದಲ್ಲಿ ಧಾರ್ವಿುಕ ಸಭೆ ನಡೆಯಲಿದೆ. ಅದೇ ದಿನ ದತ್ತಪೀಠಕ್ಕೆ ತೆರಳಿ ಪಡಿ ಅರ್ಪಿಸಿ ಧಾರ್ವಿುಕ ಸಮಾರಂಭದಲ್ಲಿ ಪಾಲ್ಗೊಳ್ಳುವ ಮೂಲಕ ಅಭಿಯಾನಕ್ಕೆ ತೆರೆ ಬೀಳಲಿದೆ.

ಶ್ರೀರಾಮ ಸೇನೆ ಅಧ್ಯಕ್ಷ ಪ್ರಮೋದ್ ಮುತಾಲಿಕ್, ತೆಲಂಗಾಣ ಶಾಸಕ ರಾಜಾಸಿಂಗ್ ಠಾಕೂರ್, ನಾಗಾ ಸಾಧುಗಳು ಸೇರಿ ವಿವಿಧ ಸ್ವಾಮೀಜಿಗಳೊಂದಿಗೆ 5 ಸಾವಿರ ಮಾಲಾಧಾರಿಗಳು ಶೋಭಾಯಾತ್ರೆ ಮತ್ತು ಧಾರ್ವಿುಕ ಸಮಾರಂಭದಲ್ಲಿ ಪಾಲ್ಗೊಳ್ಳುವ ನಿರೀಕ್ಷೆ ಇದೆ ಎಂದು ಆಯೋಜಕರು ತಿಳಿಸಿದ್ದಾರೆ.

ಆಲ್ದೂರಲ್ಲಿ ಮಾಲೆ ಧಾರಣೆ: ಆಲ್ದೂರು: ಗಣಪತಿ ದೇವಸ್ಥಾನದಲ್ಲಿ ಶ್ರೀ ರಾಮಸೇನೆಯಿಂದ ದತ್ತಮಾಲೆಗೆ ಸೋಮವಾರ ಚಾಲನೆ ದೊರೆಯಿತು. ಶ್ರೀರಾಮ ಸೇನೆಯ ಹೋಬಳಿ ಅಧ್ಯಕ್ಷ ರಾಜೇಶ್ ಸಮ್ಮುಖದಲ್ಲಿ ದೇವಾಲಯದ ಅರ್ಚಕ ಪುರುಷೋತ್ತಮ್ ಭಟ್ 20ಕ್ಕೂ ಹೆಚ್ಚು ಕಾರ್ಯಕರ್ತರಿಗೆ ದತ್ತಮಾಲಾ ಧಾರಣೆ ಮಾಡಿದರು. ಹೋಬಳಿ ಅಧ್ಯಕ್ಷ ರಾಜೇಶ್ ಮಾತನಾಡಿ, ಇಂದು 20 ಕಾರ್ಯಕರ್ತರು ದತ್ತಮಾಲೆ ಧರಿಸಿದ್ದಾರೆ. ಮುಂದಿನ ದಿನದಲ್ಲಿ ಪಟ್ಟಣದಲ್ಲಿ 200ಕ್ಕೂ ಹೆಚ್ಚು ಜನ ದತ್ತಮಾಲೆ ಧರಿಸಲಿದ್ದಾರೆ. ದತ್ತಮಾಲೆಯ ಅಂಗವಾಗಿ ಪಟ್ಟಣದಲ್ಲಿ ಅ.27ರಂದು ಬೃಹತ್ ಶೋಭಾಯಾತ್ರೆ ನಡೆಯಲಿದೆ. ಇದೇದಿನ ಗಣಪತಿ ದೇವಸ್ಥಾನದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಳ್ಳಲಾಗಿದೆ ಎಂದರು. ಉಪಾಧ್ಯಕ್ಷ ಮಂಜು ಹೊಸಳ್ಳಿ, ಕಾರ್ಯದರ್ಶಿ ಸೂರಜ್ ಮತ್ತಿತರರು ದತ್ತಮಾಲೆ ಧರಿಸಿದರು.

Stay connected

278,739FansLike
581FollowersFollow
620,000SubscribersSubscribe

ವಿಡಿಯೋ ನ್ಯೂಸ್

VIDEO| ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯ ಜೀವ ಉಳಿಸಿದ ಯೋಧ:...

ಥಾಣೆ: ರೈಲ್ವೆ ರಕ್ಷಣಾ ಪಡೆಯ ಯೋಧರೊಬ್ಬರು ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯೊಬ್ಬನನ್ನು ರಕ್ಷಣೆ ಮಾಡುವ ಮೂಲಕ ಸಮಯಪ್ರಜ್ಞೆ ಮರೆದಿರುವ ಘಟನೆ ಮಹಾರಾಷ್ಟ್ರದ ಥಾಣೆ ರೈಲ್ವೆ ನಿಲ್ದಾಣದಲ್ಲಿ ಬುಧವಾರ ನಡೆದಿದ್ದು, ಇದಕ್ಕೆ...

VIDEO| ನನ್ನನ್ನು ಯಾರೂ ಮುಟ್ಟಲಾರರು; ಸ್ವಯಂಘೋಷಿತ ದೇವಮಾನವ ನಿತ್ಯಾನಂದ ಹೇಳಿಕೆ

ನವದೆಹಲಿ: "ನನ್ನನ್ನು ಯಾರೂ ಮುಟ್ಟಲಾರರು, ನಿಮಗೊಂದು ಸತ್ಯ ಹೇಳುತ್ತೇನೆ. ನಾನೂ ಪರಮ ಶಿವ, ಅರ್ಥವಾಯ್ತ...?" ಎಂದು ಅತ್ಯಾಚಾರದ ಆರೋಪಿ ನಿತ್ಯಾನಂದ ವಿಡಿಯೋಂದರಲ್ಲಿ ಹೇಳಿದ್ದಾನೆ. ಯಾವ ಕೋರ್ಟ್​ ಕೂಡ ನನ್ನ ಬಗ್ಗೆ ತೀರ್ಪು ನೀಡಲಾರದು. ಯಾರೂ...

VIDEO| ಮದುವೆ ಸಮಾರಂಭದಲ್ಲಿ ಡ್ಯಾನ್ಸ್​ ನಿಲ್ಲಿಸುತ್ತಿದ್ದಂತೆ ಯುವತಿ ಮೇಲೆ ಫೈರಿಂಗ್​:...

ಲಖನೌ: ಮದುವೆ ಸಂಭ್ರಮದಲ್ಲಿ ಡ್ಯಾನ್ಸ್​ ಮಾಡುವುದನ್ನು ನಿಲ್ಲಿಸುತ್ತಿದ್ದಂತೆ ನೃತ್ಯಗಾರ್ತಿಯ ಮುಖಕ್ಕೆ ಫೈರಿಂಗ್​ ಮಾಡಿರುವ ಘಟನೆ ಉತ್ತರ ಪ್ರದೇಶದ ಚಿತ್ರಕೂಟದಲ್ಲಿ ಕಳೆದ ವಾರ ನಡೆದಿರುವುದಾಗಿ ವರದಿಯಾಗಿದೆ. ಘಟನೆಯಲ್ಲಿ ಗಾಯಗೊಂಡ ಯುವತಿಯನ್ನು ಕಾನ್ಪುರ ಆಸ್ಪತ್ರೆಗೆ...

VIDEO: ಎನ್​ಕೌಂಟರ್ ನಡೆಸಿದ ಪೊಲೀಸರನ್ನು ಹೆಗಲ ಮೇಲೆ ಹೊತ್ತು ಸಂಭ್ರಮಿಸಿದ...

ಹೈದರಾಬಾದ್​​: ಪಶುವೈದ್ಯೆ ದಿಶಾ ಅತ್ಯಾಚಾರ ಮತ್ತು ಕೊಲೆ ಆರೋಪಿಗಳನ್ನು ಎನ್​ಕೌಂಟರ್​​ನಲ್ಲಿ ಹತ್ಯೆಗೈದ ಪೊಲೀಸರನ್ನು ಹೈದರಾಬಾದ್​​ ಜನತೆ ಹೆಗಲ ಮೇಲೆ ಹೊತ್ತು ಜಯಘೊಷ ಕೂಗಿ ಸಂಭ್ರಮಿಸಿದ್ದಾರೆ. ಶುಕ್ರವಾರ ಬೆಳಗ್ಗೆ ಆರೋಪಿಗಳ ಎನ್​ಕೌಂಟರ್​ ಸುದ್ಧಿ...

ಉಪಚುನಾವಣೆ ಮತದಾನ ಅಂತ್ಯ: ಮತಗಟ್ಟೆ ಸಮೀಕ್ಷೆಯಲ್ಲಿ ಬಿಜೆಪಿಯದ್ದೇ ಮೇಲುಗೈ

ಬೆಂಗಳೂರು: ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆಯ ಮತದಾನ ಪ್ರಕ್ರಿಯೆ ಗುರುವಾರ ಸಂಜೆ 6 ಗಂಟೆಗೆ ಪೂರ್ಣಗೊಂಡಿತು. ಸಣ್ಣಪುಟ್ಟ ಗಲಾಟೆಗಳು ಹಾಗೂ ಅಲ್ಲಲ್ಲಿ ಕೆಲ ಇವಿಎಂಗಳ ದೋಷ ಹೊರತುಪಡಿಸಿದರೆ ಉಪಚುನಾವಣೆಯ ಮತದಾನ...

VIDEO| ವಿಕೆಟ್​ ಕಿತ್ತ ಖುಷಿಯಲ್ಲಿ ಕರವಸ್ತ್ರವನ್ನು ಕಡ್ಡಿಯನ್ನಾಗಿಸಿ ಸಂಭ್ರಮ: ಬೌಲರ್​ನ...

ನವದೆಹಲಿ: ಯಾವುದೇ ಆಟವಾಗಿರಲಿ ಆಟಗಾರರಿಗೆ ತಮ್ಮ ಸಂಭ್ರಮದ ಕ್ಷಣ ಸ್ಮರಣೀಯವಾಗಿರುತ್ತದೆ. ಹಲವರು ವಿಭಿನ್ನ ರೀತಿಯಲ್ಲಿ ಸಂಭ್ರಮಿಸುವ ಪ್ರಯತ್ನವನ್ನು ಮೈದಾನದಲ್ಲಿ ಮಾಡುತ್ತಿರುತ್ತಾರೆ. ಇದೀಗ ದಕ್ಷಿಣ ಆಫ್ರಿಕಾ ಬೌಲರ್​ ಒಬ್ಬರು ವಿಕೆಟ್​ ಪಡೆದ...