17.8 C
Bengaluru
Wednesday, January 22, 2020

ಯಾಂತ್ರಿಕ ಬದುಕಿನಲ್ಲಿ ಸಂವೇದನೆ ಮರೆ

Latest News

ಕರ್ನಾಟಕ ಕುಸ್ತಿ ಹಬ್ಬಫೆ. 15ರಿಂದ

ಧಾರವಾಡ: ಫೆ. 15ರಿಂದ 18ರವರೆಗೆ ನಗರದಲ್ಲಿ ಕರ್ನಾಟಕ ಕುಸ್ತಿ ಹಬ್ಬ ಆಯೋಜಿಸಲಾಗುವುದು. ಅಂತಾರಾಷ್ಟ್ರೀಯ ಕುಸ್ತಿಪಟುಗಳು ಸೇರಿ ಸುಮಾರು 2,000ಕ್ಕೂ ಹೆಚ್ಚು ಕುಸ್ತಿಪಟುಗಳು, ತರಬೇತಿದಾರರು...

ಊರೆಲ್ಲ ಕೊಳ್ಳೆ ಹೊಡೆದ ಮೇಲೆ…

ಲಕ್ಷ್ಮೇಶ್ವರ: ‘ಊರೆಲ್ಲ ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಮುಚ್ಚಿದರು’ ಎಂಬಂತೆ ರೈತರೆಲ್ಲ ಮುಕ್ತ ಮಾರುಕಟ್ಟೆಯಲ್ಲಿ ಕಡಿಮೆ ಬೆಲೆಗೆ ಶೇಂಗಾ ಮಾರಾಟ ಮಾಡಿದ...

ಮುರುಘಾಮಠದ ಕಾರ್ಯ ನಾಡಿಗೆ ಮಾದರಿ

ಧಾರವಾಡ: ಜ್ಞಾನ, ದಾಸೋಹ ಸೇವೆಯಲ್ಲಿ ಮುರುಘಾಮಠದ ಮೃತ್ಯುಂಜಯ ಅಪ್ಪಗಳ ಹಾಗೂ ಮಹಾಂತಪ್ಪಗಳ ಕೊಡುಗೆ ಸ್ಮರಣೀಯ. ಅವರ ಆಶಯದಂತೆ ಶ್ರೀ ಮಲ್ಲಿಕಾರ್ಜುನ ಸ್ವಾಮೀಜಿ ಶ್ರೀಮಠವನ್ನು...

ಶರಣರಿಂದ ಸಾಮಾಜಿಕ ನ್ಯಾಯ

ಬ್ಯಾಡಗಿ: 12ನೇ ಶತಮಾನದಿಂದಲೂ ಶಿವಶರಣರು ಸಾಮಾಜಿಕ ಮೌಢ್ಯತೆ ಹಾಗೂ ಧೋರಣೆಗಳ ವಿರುದ್ಧ ಹೋರಾಟ ನಡೆಸಿದ ಪರಿಣಾಮ ಸರ್ವರಿಗೂ ಸಾಮಾಜಿಕ ನ್ಯಾಯ ಸಿಕ್ಕಿದೆ ಎಂದು...

ಗಾಳಿಪಟ ಉತ್ಸವಕ್ಕೆ ತೆರೆ

ಹುಬ್ಬಳ್ಳಿ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಪೋಷಿತ ಕ್ಷಮತಾ ಸೇವಾ ಸಂಸ್ಥೆ ಆಶ್ರಯದಲ್ಲಿ ನಗರದ ಕುಸುಗಲ್ಲ ರಸ್ತೆಯಲ್ಲಿ ಆಯೋಜಿಸಿದ್ದ ಎರಡು ದಿನಗಳ...

ಕಡೂರು: ಯಾಂತ್ರೀಕೃತ ಬದುಕಿನಲ್ಲಿ ಸಂವೇದನೆ ಕಳೆದುಕೊಂಡು ಮಾನವೀಯತೆ ಮರೆತಿದ್ದೇವೆ ಎಂದು ಪ್ರಾಧ್ಯಾಪಕ ಡಾ. ಮಲ್ಲೇಶ್ ಗೌಡ ವಿಷಾದಿಸಿದರು.

ಯಗಟಿಯಲ್ಲಿ ಗ್ರಾಮದೇವತೆ ಅರೇಕಲ್ಲಮ್ಮ ದೇಗುಲದ ಕಳಶಾರೋಹಣ ಕಾರ್ಯಕ್ರಮದ ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ‘ಹಳ್ಳಿಯ ಚಿತ್ರಗಳು ಅಂದು-ಇಂದು’ ಕುರಿತು ಉಪನ್ಯಾಸ ನೀಡಿದರು.

ಹಿಂದೆ ಗ್ರಾಮೀಣ ಬದುಕಿನಲ್ಲಿ ಶ್ರಮವಿತ್ತು. ಆತ್ಮೀಯತೆಯಿತ್ತು. ಅವಿಭಕ್ತ ಕುಟುಂಬಗಳಲ್ಲಿ ಸಾಮರಸ್ಯವಿತ್ತು. ಬಡತನವನ್ನೇ ಹೊದ್ದಿದ್ದರೂ ಬೆಲೆಕಟ್ಟಲಾಗದ ನೆಮ್ಮದಿಯಿತ್ತು. ಮಕ್ಕಳಿಗೆ ನೈತಿಕತೆ ಪರಿಚಯ ಸ್ವಾಭಾವಿಕವಾಗಿಯೇ ಆಗುತ್ತಿತ್ತು. ಬಹುಮುಖ್ಯವಾಗಿ ಮಕ್ಕಳಿಗೆ ಸಾಮಾನ್ಯ ಜ್ಞಾನದ ದೊಡ್ಡ ಭಂಡಾರ ಅವಿಭಕ್ತ ಕುಂಟುಂಬಗಳಲ್ಲಿದ್ದ ಹಿರಿಯರಿಂದ ದೊರೆಯುತ್ತಿತ್ತು. ಅಕ್ಷರಸ್ಥರಲ್ಲದಿದ್ದರೂ ಜೀವನಾನುಭವದಲ್ಲಿ ವಿದ್ಯಾವಂತರಾಗಿದ್ದ ಹಿರಿಯರು ಧರ್ಮ ಮಾರ್ಗದಲ್ಲಿ ನಡೆಯುತ್ತಿದ್ದರು. ಆದರೆ ಈಗ ಇವೆಲ್ಲವೂ ದೂರವಾಗುತ್ತಿವೆ. ಮಕ್ಕಳಿಗೆ ದೊಡ್ಡ ನಷ್ಟ ಉಂಟುಮಾಡುತ್ತಿದ್ದೇವೆ. ವಾತ್ಸಲ್ಯ ರಹಿತವಾಗಿ ಯಾಂತ್ರೀಕೃತ ಬದುಕಲ್ಲೇ ಮಕ್ಕಳನ್ನು ಬೆಳೆಸುತ್ತಿದ್ದೇವೆ ಎಂದರು.

ನಾವು ಬದುಕಿಗೊಂದು ಅರ್ಥರಹಿತ ಸಂಯೋಜನೆ ಕೊಟ್ಟು ಸಂವೇದನೆಯನ್ನೇ ಕಳೆದುಕೊಂಡಿದ್ದೇವೆ. ಪ್ರತಿಯೊಂದನ್ನೂ ಕಲಬೆರಕೆ ಮಾಡಿದ್ದೇವೆ. ಮಕ್ಕಳಿಗೆ ಆರೋಗ್ಯಕರ ಆಹಾರ ನೀಡಲಾಗದ ಸ್ಥಿತಿಯಿದೆ. ಕಲಬೆರಕೆಯಾಗದ ಜಗತ್ತಿನ ಏಕೈಕ ಆಹಾರ ತಾಯಿಹಾಲನ್ನೂ ಮಕ್ಕಳಿಗೆ ನೀಡಲು ಮೀನಮೇಷ ಎಣಿಸುವಂಥ ಸಂಕೀರ್ಣ ಕಾಲಘಟ್ಟದಲ್ಲಿದ್ದೇವೆ ಎಂದು ಹೇಳಿದರು.

ಮಾಜಿ ಶಾಸಕ ವೈಎಸ್​ವಿ ದತ್ತ ಮಾತನಾಡಿ, ಗ್ರಾಮ ಬದುಕಿನಲ್ಲಿ ಸಾಮರಸ್ಯ ಬಹುಮುಖ್ಯ. ಯಗಟಿ ಗ್ರಾಮದ ಪ್ರತಿಯೊಬ್ಬರ ಮತ್ತು ಗ್ರಾಮದೇವತೆ ಅರೇಕಲ್ಲಮ್ಮನ ನಡುವೆ ತಾಯಿ-ಮಗನ ನಡುವಿನ ಸಂಬಂಧವಿದೆ. ದೇಗುಲದ ಕಾಯಕವನ್ನು ಪ್ರತಿ ಸಮುದಾಯವೂ ಭಕ್ತಿಯಿಂದ ನಿರ್ವಹಿಸುತ್ತದೆ. ಗ್ರಾಮದ ಒಗ್ಗಟ್ಟಿನ ಶಕ್ತಿಯಿರುವುದೇ ಒಂಬತ್ತು ದೊಡ್ಡಿ ಗೌಡರಲ್ಲಿ ಎಂದು ಅಭಿಪ್ರಾಯಪಟ್ಟರು.

ಗ್ರಾಮದ ಕುಳುವಾಡಿ, ದಾಸಯ್ಯರು, ದೇಗುಲದಲ್ಲಿ ದೀವಟಿಗೆ ಸಲಾಂ ಮಾಡುವವರು, 9 ದೊಡ್ಡಿ ಗೌಡರು ಮತ್ತಿತರ ಕಾಯಕ ಮಾಡುವವರನ್ನು ಸನ್ಮಾನಿಸಲಾಯಿತು.

ಮಂಗಳೂರಿನ ಕಲಾವಿದೆ ಜ್ಞಾನಾ ಐತಾಳ್ ನಾದ ನೃತ್ಯ ಸಂಗೀತ ಕಾರ್ಯಕ್ರಮ ನಡೆಸಿಕೊಟ್ಟರು. ಕಸಾಪ ಅಧ್ಯಕ್ಷ ವೈ.ಎಸ್.ರವಿಪ್ರಕಾಶ್, ಯಗಟಿ ಸತೀಶ್ ಇತರರಿದ್ದರು.

ವಿಡಿಯೋ ನ್ಯೂಸ್

VIDEO| ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ...

ಲಖನೌ: ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ ಪೂರಕವಾದ ಘಟನೆ ಇದಾಗಿದೆ. ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನೋಯ್ಡಾದಲ್ಲಿ ಅಂಗಡಿ ಹೊರಭಾಗದಲ್ಲಿ ಇಟ್ಟಿದ್ದ ಬಾಕ್ಸ್​ನಿಂದ...

VIDEO| ನಟಿಯಾಗಿರೋ ಆಲಿಯಾ ಇದೀಗ ಶೆಫ್​: ಬಾಲಿವುಡ್​ ಬ್ಯೂಟಿಯ ಅಡುಗೆ...

ಮುಂಬೈ: ಬಾಲಿವುಡ್​ ಬ್ಯೂಟಿ ಆಲಿಯಾ ಭಟ್ ನಟನೆ ಜತೆಗೆ ಹೊಸ ಸಾಹಸಕ್ಕೆ ಕೈಹಾಕಿದ್ದಾರೆ. ನಟಿಯಾಗಿರುವ ಆಲಿಯಾ ಇದೀಗ ಶೆಫ್ ಆಗಿದ್ದು, ಹೊಸ ಬಗೆಯ ಅಡುಗೆ ಪರಿಚಯಿಸಲು ಮುಂದಾಗಿದ್ದಾರೆ. ಯೂಟ್ಯೂಬ್​ನಲ್ಲಿ ಆಲಿಯಾ ಭಟ್...

VIDEO| ಅತಿವೇಗದ ಎಸೆತ, ಮಥೀಶಾ ಪಥಿರಣ ವಿಶ್ವದಾಖಲೆ!

ಬ್ಲೂಮ್​ಫಾಂಟೆನ್: ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 19 ವಯೋಮಿತಿ ಏಕದಿನ ವಿಶ್ವಕಪ್ ಟೂರ್ನಿಯ ಮುಖಾಮುಖಿಯಲ್ಲಿ ಭಾರತ ತಂಡ 90 ರನ್​ಗಳಿಂದ ಗೆಲುವು ಸಾಧಿಸಿತು. ಆದರೆ, ಲಂಕಾ ಕಡೆಯಿಂದಲೂ ಸ್ಮರಣೀಯ ದಾಖಲೆಯೊಂದು...

VIDEO| ತಮಿಳಿನ ಕೌನ್​ ಬನೇಗಾ ಕರೋಡ್​ಪತಿ ಶೋನಲ್ಲಿ 1 ಕೋಟಿ...

ಚೆನ್ನೈ: ತಮಿಳು ಆವೃತ್ತಿಯ ಕೌನ್​ ಬನೇಗಾ ಕರೋಡ್​ಪತಿ(ಕೊಡೀಶ್ವರಿ) ರಿಯಾಲಿಟಿ ಶೋನಲ್ಲಿ ವಿಕಲಾಂಗ ಮಹಿಳೆಯೊಬ್ಬಳು ಬರೋಬ್ಬರಿ 1 ಕೋಟಿ ರೂ. ಬಹುಮಾನ ಮೊತ್ತವನ್ನು ಗೆದ್ದು ಎಲ್ಲರ ಗಮನ ಸೆಳೆದಿದ್ದಾಳೆ.ಮದುರೈ ನಿವಾಸಿಯಾಗಿರುವ ಕೌಶಲ್ಯ...

VIDEO| ಮಂಗಳೂರು ವಿಮಾನ ನಿಲ್ದಾಣ ಬಾಂಬ್​ ಪತ್ತೆ ಪ್ರಕರಣ: ಬಾಂಬ್​...

ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್​ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಂಜಾರು ಮೈದಾನದಲ್ಲಿ ಬಾಂಬ್​ ನಿಷ್ಕ್ರಿಯೆ ದಳದಿಂದ ನಡೆದ ಬಾಂಬ್​ ಸ್ಫೋಟ ಪ್ರಕ್ರಿಯೆ ಯಶಸ್ವಿಯಾಗಿದೆ. ಇಂದು ಬೆಳಗ್ಗೆ ಮಂಗಳೂರು ವಿಮಾನ...

VIDEO| ಮಂಡ್ಯದಲ್ಲಿ ಮತ್ತೆ ಜೋಡೆತ್ತು ಸದ್ದು: ಚುನಾವಣೆ ಮುಗಿದ ನಂತರ...

ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ರಾಜಕೀಯವಾಗಿ ಸದ್ದು ಮಾಡಿದ್ದ ಜೋಡೆತ್ತು ಎಂದು ಕರೆಸಿಕೊಂಡಿದ್ದ ನಟರಾದ ದರ್ಶನ್​ ಮತ್ತು ಯಶ್​ ಅವರು ಮತ್ತೆ ಸುದ್ದಿಯಲ್ಲಿದ್ದಾರೆ. ಮಾನವೀಯತೆ ಮೆರೆದ ಅವರು, ಚೈತ್ರಾ ಗೋಶಾಲೆಗೆ ಬೆಳಕಾಗಿದ್ದಾರೆ. ಗೋಮಾತೆ ಸೇವೆಗೆ ರಾಕಿಂಗ್...