ಶ್ರೀನಿವಾಸ ವಿಶ್ವವಿದ್ಯಾಲಯದಲ್ಲಿ ಸಾಂಸ್ಕೃತಿಕ ಉತ್ಸವ

mng-31aug-shrinivas (1)
Published on



ಮಂಗಳೂರು : ನಗರದ ಪಾಂಡೇಶ್ವರದಲ್ಲಿರುವ ಶ್ರೀನಿವಾಸ ವಿಶ್ವವಿದ್ಯಾಲಯದ ಇನ್‌ಸ್ಟಿಟ್ಯೂಟ್ ಆಫ್ ಹೋಟೆಲ್ ಮ್ಯಾನೇಜ್‌ಮೆಂಟ್ ಹಾಗೂ ಟೂರಿಸಂ ಮತ್ತು ಇಂಟೀರಿಯರ್ ಡಿಸೈನ್ ವಿಭಾಗದ ವತಿಯಿಂದ ಸಿಟಿ ಕ್ಯಾಂಪಸ್‌ನಲ್ಲಿ ಶನಿವಾರ ಸಾಂಸ್ಕೃತಿಕ ಉತ್ಸವ ನಡೆಯಿತು.
ಶ್ರೀನಿವಾಸ ಟೈಗರ್ಸ್ ಇದರ 10ನೇ ವಾರ್ಷಿಕೋತ್ಸವದ ಪ್ರಯುಕ್ತ ಅದ್ದೂರಿ ಹುಲಿ ಕುಣಿತ ನಡೆಯಿತು. ಕೇರಳದ ನೃತ್ಯ ಪ್ರಕಾರವಾದ ತಿರುವಾದಿರ ಪ್ರದರ್ಶನಗೊಂಡಿತು. ವಿದ್ಯಾರ್ಥಿಗಳು ತಯಾರಿಸಿದ ರುಚಿಕರವಾದ ಆಹಾರ ತಿನಿಸು ಗಮನ ಸೆಳೆಯಿತು.
ಇನ್‌ಸ್ಟಿಟ್ಯೂಟ್ ಆಫ್ ಹೋಟೆಲ್ ಮ್ಯಾನೇಜ್ಮೆಂಟ್ ಮತ್ತು ಟೂರಿಸಂ ಡೀನ್ ಪ್ರೊ.ಪ್ರಶಾಂತ್ ಪ್ರಭು, ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಮತ್ತು ಕಾಮರ್ಸ್‌ನ ಡೀನ್ ಡಾ. ವೆಂಕಟೇಶ್ ಅಮೀನ್, ಇನ್‌ಸ್ಟಿಟ್ಯೂಟ್ ಆಫ್ ಪೋರ್ಟ್, ಶಿಪ್ಪಿಂಗ್ ಮತ್ತು ಲಾಜಿಸ್ಟಿಕ್ ಮ್ಯಾನೇಜ್ಮೆಂಟ್‌ನ ಡೀನ್ ಡಾ. ಸೋನಿಯಾ ನೊರೊನ್ಹಾ, ಇನ್‌ಸ್ಟಿಟ್ಯೂಟ್ ಆಫ್ ಫಿಸಿಯೋಥೆರಪಿಯ ಡೀನ್ ಡಾ. ರಾಜಶೇಖರ್.ಎಸ್., ಇನ್‌ಸ್ಟಿಟ್ಯೂಟ್ ಆಫ್ ಎಜುಕೇಶನ್‌ನ ಡೀನ್ ಡಾ. ಪದ್ಮನಾಭ ಸಿ.ಎಚ್., ಇನ್‌ಸ್ಟಿಟ್ಯೂಟ್ ಆಫ್
ಕಂಪ್ಯೂಟರ್ ಸೈನ್ಸ್ ಮತ್ತು ಇನ್‌ಫಾರ್ಮೇಷನ್ ಸೈನ್ಸ್‌ನ ಡೀನ್ ಡಾ. ಸುಬ್ರಹ್ಮಣ್ಯ ಭಟ್ ಉಪಸ್ಥಿತರಿದ್ದರು.
ವಿದ್ಯಾರ್ಥಿ ಜೋಶುವಾ ಸ್ವಾಗತಿಸಿದರು. ಅಖೀಫಾ ಕಾರ್ಯಕ್ರಮ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net