

ಮಂಗಳೂರು : ಶ್ರೀನಿವಾಸ್ ಯುನಿವರ್ಸಿಟಿ ಇನ್‌ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಆಂಡ್ ಟೆಕ್ನಾಲಜಿಯಲ್ಲಿ ಅಂತಿಮ ವರ್ಷದ ಇಂಜಿನಿಯರಿಂಗ್ ವಿಭಾಗಗಳ ವಿದ್ಯಾರ್ಥಿಗಳು ಸಿದ್ಧಪಡಿಸಿದ ಪ್ರಾಜೆಕ್ಟ್ ಮಾದರಿಗಳ ಪ್ರಾತ್ಯಕ್ಷಿಕೆ ಕಾರ್ಯಕ್ರಮ ಕಾಲೇಜಿನ
ಸಭಾಂಗಣದಲ್ಲಿ ನಡೆಯಿತು.
ಕಾರ್ಯಕ್ರಮವನ್ನು ಉದ್ಘಾಟಿಸಿದ ರೋಬೋಸಾಫ್ಟ್ ಟೆಕ್ನಾಲಜೀಸ್ ಸಂಸ್ಥೆಯ ಮಾನವ ಸಂಪನ್ಮೂಲ ಮತ್ತು ಪ್ರತಿಭಾನ್ವೇಷಣಾ ಅಧಿಕಾರಿ ಲಕ್ಷ್ಮಿ ಶೆಟ್ಟಿ ಮಾತನಾಡಿ ಇಂದಿನ ಕಂಪ್ಯೂಟರ್ ಯುಗದಲ್ಲಿ ಲಭ್ಯವಿರುವ ಮುಕ್ತ ಮೂಲ ಪರಿಕರಗಳನ್ನು ಸಮರ್ಪಕವಾಗಿ ಬಳಸಿ ಕೌಶಲ ಅಭಿವೃದ್ಧಿ ಪಡಿಸಿದರೆ ಯಶಸ್ಸಿಗೆ ಕಾರಣವಾಗುತ್ತದೆ. ಇಂದಿನ ಯೋಜನೆಗಳಿಗೆ ನವೀನತೆಯ ಅಗತ್ಯವಿದೆ. ವಿದ್ಯಾರ್ಥಿಗಳು
ನೈಜ ಸಮಯದ ಸಮಸ್ಯೆಗಳನ್ನು ಪರಿಹರಿಸಲು ಪ್ರಯತ್ನಿಸಿ, ಸಂವಹನ ಕೌಶಲಗಳನ್ನು ಸುಧಾರಿಸಿಕೊಳ್ಳಬೇಕು ಎಂದರು.
ಅಧ್ಯಕ್ಷತೆ ವಹಿಸಿದ್ದ ಶ್ರೀನಿವಾಸ್ ವಿಶ್ವವಿದ್ಯಾಲಯದ ಉಪ ಕುಲಪತಿ ಡಾ. ಕೆ.ಸತ್ಯನಾರಾಯಣ ರೆಡ್ಡಿ ಮಾತನಾಡಿ ವಿದ್ಯಾರ್ಥಿಗಳ
ಪ್ರತಿಭೆಯನ್ನು ಗುರುತಿಸಲು ಮತ್ತು ನವೀನ ವಿಚಾರಗಳನ್ನು ಪ್ರದರ್ಶಿಸಲು ಇಂತಹ ಪ್ರಾಜೆಕ್ಟ್ ಮಾದರಿಗಳ ಪ್ರಾತ್ಯಕ್ಷಿಕೆ
ಕಾರ್ಯಕ್ರಮವು ಉತ್ತಮ ಅವಕಾಶ ನೀಡುತ್ತದೆ ಎಂದರು.
ಪ್ರೊ.ಕೆ.ಶ್ರೀನಾಥ್ ರಾವ್ ಮುಖ್ಯ ಅತಿಥಿಯನ್ನು ಪರಿಚಯಿಸಿದರು. ಕಾರ್ಯಕ್ರಮದ ಸಂಚಾಲಕ ಪ್ರೊ.ಮಹೇಶ್ ಕುಮಾರ್
ಪ್ರಾಜೆಕ್ಟ್ ಮಾದರಿಗಳ ಕಿರು ಚಿತ್ರಣ ನೀಡಿದರು. ಕಾಲೇಜಿನ ಮುಖ್ಯಸ್ಥ ಡಾ. ರಾಮಕೃಷ್ಣ ಎನ್.ಹೆಗಡೆ ಸ್ವಾಗತಿಸಿ, ಪ್ರೊ. ವರ್ಷಾ ಬಂಗೇರ ವಂದಿಸಿದರು. ವಿದ್ಯಾರ್ಥಿಗಳಾದ ಇವಾನ್ ಆಂಟೋ ಮತ್ತು ಅನಾಮಿಕ ಕುವರ್ ರಾವ್ ಕಾರ್ಯಕ್ರಮ ನಿರೂಪಿಸಿದರು.
ಇಂಜಿನಿಯರಿಂಗ್‌ನ ವಿವಿಧ ವಿಭಾಗದ ವಿದ್ಯಾರ್ಥಿಗಳು ಸಿದ್ಧಪಡಿಸಿದ 81 ನವೀನ ರೀತಿಯ ಪ್ರಾಜೆಕ್ಟ್ ಮಾದರಿಗಳನ್ನು ಪ್ರದರ್ಶಿಸಲಾಯಿತು.