ಬೆಳಗಾವಿ: ಬೆಳಗಾವಿ ಮತ್ತು ಚಿಕ್ಕೋಡಿ ವಿಭಾಗದ ವ್ಯಾಪ್ತಿಯ ರಾಜ್ಯ ಹೆದ್ದಾರಿ ಗಳ ಮೇಲ್ದರ್ಜೆಗಿರಿಸಲು ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಲೋಕೋಪಯೋಗಿ ಅಧಿಕಾರಿಗಳಿಗೆ ಸಂಸದ ಜಗದೀಶ್ ಶೆಟ್ಟರ್ ಹೇಳಿದರು.

ನಗರದ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ಸ ಬೆಳಗಾವಿ ಮತ್ತು ಚಿಕ್ಕೋಡಿ ವಿಭಾಗದ ಲೋಕೋಪಯೋಗಿ ಇಲಾಖೆಯ ಕಾರ್ಯ ನಿರ್ವಾಹಕ ಅಭಿಯಂತರರು, ಅಧೀಕ್ಷಕ ಅಭಿಯಂತರು ಮತ್ತು ರಾಷ್ಟೀಯ ಹೆದ್ದಾರಿ ಕಾರ್ಯಪಾಲಕ ಅಭಿಯಂತರರ ಸಭೆಯಲ್ಲಿ ಮಾತನಾಡಿದ ಅವರು,ವಾಹನ ಸಂಚಾರ ದಟ್ಟಣೆಯನ್ನು ಗಮನದಲ್ಲಿ ಇರಿಸಿ ಈ ಕೆಳಕಾಣಿಸಿದ 4 ಮುಖ್ಯ ರಸ್ತೆಗಳನ್ನು 4 ಅಥವಾ 6 ಲೇನ್ ಮಾಡುವ ಅವಶ್ಯಕತೆ ಬಗ್ಗೆತಿಳಿಸಿದರು.ಸಂಕೇಶ್ವರ – ಹುಕ್ಕೇರಿ ಗೋಕಾಕ – ಯರಗಟ್ಟಿ ಮಾರ್ಗ – ಮುನ್ನೊಳ್ಳಿ – ನರಗುಂದ ರಾಮದುರ್ಗ, ಗೋಕಾಕ – ಯರಗಟ್ಟಿ – ಸವದತ್ತಿ – ಧಾರವಾಡ, ಬೆಳಗಾವಿ – ಸಾವಾಂತವಾದಿ – ಮಾಪುಸ (ಗೋವಾ), ರಬಕವಿ -ಗೋಕಾಕ – ಜಂಬೂತಿ ರಸ್ತೆ, ಈ ಬಗ್ಗೆ ಪ್ರಸ್ತಾವನೆಗಳನ್ನು ತಯಾರಿಸಿ, ರಾಜ್ಯ ಸರ್ಕಾರಕ್ಕೆ ಸಲ್ಲಿಸಲು ಅಧಿಕಾರಿಗಳಿಗೆ ಲೋಕಸಭಾ ಸದಸ್ಯರಾದ ಶ್ರೀ ಜಗದೀಶ ಶೆಟ್ಟರ್ ಅವರು
ಸೂಚಿಸುತ್ತಾ ಮುಂಬರುವ ದಿನಗಳಲ್ಲಿ ಮತ್ತು ರಾಜ್ಯ ಸರ್ಕಾರದಿಂದ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಕಳುಹಿಸಿದಾಗ ತಾವು ಖುದ್ದಾಗಿ ಕೇಂದ್ರ ಹೆದ್ದಾರಿ ಮತ್ತು ಸಾರಿಗೆ ಸಚಿವರಾದ ಶ್ರೀ ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡಿ ಅನುಮೋದನೆ ಪಡೆಯಲು ಪ್ರಯತ್ನಿಸುವುದಾಗಿ ತಿಳಿಸಿದರು.
ಅದರಂತೆ ಕೇಂದ್ರ ರಸ್ತೆ ನಿಧಿ ಯೋಜನೆಯಡಿಯಲ್ಲಿ ಸಹ ತೆಗೆದುಕೊಳ್ಳಬಹುದಾದ ರಸ್ತೆ ಸುಧಾರಣೆ ಕಾಮಗಾರಿಗಳ ಪ್ರಸ್ತಾವನೆ ತಯಾರಿಸಲು ತಿಳಿಸಿದರು ಮತ್ತು ಜಿಲ್ಲೆಯ ರಾಜ್ಯ ಹೆದ್ದಾರಿಗಳ ಸ್ಥಿತಿಗತಿಗಳ ಬಗ್ಗೆ ಮಾಹಿತಿ ಪಡೆದರು. ಸಭೆಯ ಕೂನೆಯಲ್ಲಿ ಇಲ್ಲಿನ ಕೆಲವು ರಾಜ್ಯ ಹೆದ್ದಾರಿ ರಸ್ತೆಗಳ ಸ್ಥಿತಿಗತಿ ಬಗ್ಗೆಯೂ ಸಹ ಅವರು ಚರ್ಚಿಸಿದರು.
ಅಧೀಕ್ಷಕ ಅಭಿಯಂತರರಾದ ಶ್ರೀ ಅರುಣ್ ಪಾಟೀಲ, ಕಾರ್ಯನಿರ್ವಾಹಕ ಅಭಿಯಂತರರು ಲೋಕೋಪಯೋಗಿ ಇಲಾಖೆ ಬೆಳಗಾವಿ ಹಾಗೂ ಚಿಕ್ಕೂಡಿಯ ಶ್ರೀ ಗಿರೀಶ್ ದೇಸಾಯಿ, ಶ್ರೀ ಸಬರದ್, ಕಾರ್ಯನಿರ್ವಾಹಕ ಅಭಿಯಂತರರು ರಾಷ್ಟ್ರೀಯ ಹೆದ್ದಾರಿ ಶ್ರೀ ರಾಜೇಂದ್ರ ಪಾಟೀಲ್ ಸೇರಿದಂತೆ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.