More

    ಮದುವೆ ಮನೆಯ ಡ್ರಾಮಾ, ಎಮೋಷನ್​ ಚಿತ್ರವಾದಾಗ … ‘ಶುಭಮಂಗಳ’ ಟ್ರೇಲರ್ ಬಿಡುಗಡೆ

    ಬೆಂಗಳೂರು: ಕ್ಲಾಸಿಕ್​ ಚಿತ್ರಗಳ ಶೀರ್ಷಿಕೆಗಳನ್ನು ಮರುಬಳಕೆ ಮಾಡುವುದು ಹೊಸ ವಿಷಯವೇನಲ್ಲ. ಪುಟ್ಟಣ್ಣ ಕಣಗಾಲ್​ ನಿರ್ದೇಶನದ ‘ಶುಭಮಂಗಳ’ ಚಿತ್ರದ ಟೈಟಲ್ ಇಟ್ಟುಕೊಂಡು, ಈಗ ಹೊಸ ತಂಡವೊಂದು ಇನ್ನೊಂದು ಚಿತ್ರವನ್ನು ಸದ್ದಿಲ್ಲದೆ ಮಾಡಿ ಮುಗಿಸಿದೆ. ಮೊದಲ ಹಂತವಾಗಿ ಇತ್ತೀಚೆಗೆ ಚಿತ್ರದ ಟ್ರೇಲರ್​ ಬಿಡುಗಡೆಯಾಗಿದ್ದು, ಚಿತ್ರವು ಅಕ್ಟೋಬರ್​ 14ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.

    ಇದನ್ನೂ ಓದಿ: ರಂಗಭೂಮಿಯ ಮೇರು ಪ್ರತಿಭೆ- ಅಮರಚೇತನ: ಬಿವಿ ಕಾರಂತ ಜನ್ಮದಿನ 

    ಸಾಕಷ್ಟು ಕಿರುಚಿತ್ರಗಳನ್ನು ನಿರ್ಮಿಸಿರುವ ಸಂತೋಷ್ ಗೋಪಾಲ್ ಈ ಸಿನಿಮಾ ಮೂಲಕ ನಿರ್ದೇಶಕರಾಗಿ ಮೊದಲ ಹೆಜ್ಜೆ ಇಟ್ಟಿದ್ದು, ಮದುವೆ ಮನೆಯಲ್ಲಿ ನಡೆಯುವ ಕಾಮಿಡಿ, ಲವ್, ಸೆಂಟಿಮೆಂಟ್ ಎಳೆಯನ್ನು ಇಟ್ಟುಕೊಂಡು ಸಿನಿಮಾ ರೂಪಿಸಿದ್ದಾರೆ.

    ಈ ಚಿತ್ರದ ಕುರಿತು ಮಾತನಾಡುವ ಅವರು, ‘ಮದುವೆ ಮನೆಯಲ್ಲಿ ನಡೆಯುವ ಕಥೆ ಇದು. ಮದುವೆ ಮನೆಗೆ ಹೋದರೆ ಅಲ್ಲಿ ಹಲವು ಕಥೆಗಳು ಸಿಗುತ್ತವೆ. ಆ ಕಥೆಗಳಲ್ಲಿ ಐದನ್ನು ಆಯ್ಕೆ ಮಾಡಿ ಸಿನಿಮಾ ಮಾಡಿದ್ದೇನೆ. ಈ ಚಿತ್ರದಲ್ಲಿ ಪುರುಷರು ಹಾಗೂ ಮಹಿಳೆಯರಿಗೆ ಇಬ್ಬರಿಗೂ ಹೆಚ್ಚಿನ ಪ್ರಾಮುಖ್ಯತೆ ಇದೆ. ಎಲ್ಲರಿಗೂ ಇಷ್ಟವಾಗುತ್ತದೆ ಎಂದು ಭಾವಿಸಿದ್ದೇವೆ’ ಎನ್ನುತ್ತಾರೆ.

    ‘ಶುಭಮಂಗಳ’ದಲ್ಲಿ ಮೇಘನಾ ಗಾಂವ್ಕರ್, ಹಿತಾ ಚಂದ್ರಶೇಖರ್, ರಾಕೇಶ್ ಮಯ್ಯ, ಅದಿತಿ ರಾಮ್, ದೀಪ್ತಿ ನಾಗೇಂದ್ರ, ಅರುಣ್ ಬಲಾಜಿ ಮುಂತಾದವರು ನಟಿಸಿದ್ದು, ಜೂಡಾ ಸ್ಯಾಂಡಿ ಸಂಗೀತ, ರಾಕೇಶ್ ಬಿ ರಾಜ್ ಛಾಯಾಗ್ರಹಣವಿದೆ. ನಿರ್ದೇಶನದ ಜೊತೆಗೆ ಸಂಕಲನದ ಜವಾಬ್ದಾರಿಯನ್ನೂ ಸಂತೋಷ್​ ನಿರ್ವಹಿಸಿದ್ದಾರೆ.

    ಇದನ್ನೂ ಓದಿ: ಮಾನ್ಸೂನ್​ನಲ್ಲೊಂದು ಪ್ರೇಮರಾಗ…; ವಿಜಯವಾಣಿ ಸಿನಿಮಾ ವಿಮರ್ಶೆ

    ಅವ್ಯಕ್ತ ಫಿಲಂಸ್​ನಡಿ ಸಂತೋಷ್ ತಮ್ಮ ಸ್ನೇಹಿತರ ಜೊತೆಗೂಡಿ ಈ ಸಿನಿಮಾ ನಿರ್ಮಾಣ ಮಾಡಿದ್ದಾರೆ. ಮದುವೆಗೆ ಮನೆಗೆ ತೆರಳಿ ವಿಭಿನ್ನವಾಗಿ ಪ್ರಮೋಷನ್ ನಡೆಸುತ್ತಿರುವ ಚಿತ್ರತಂಡ ಬರುವ ಅಕ್ಟೋಬರ್ 14ಕ್ಕೆ ಚಿತ್ರವನ್ನು ತೆರೆಗೆ ತರಲಿದೆ.

    ಯೂಟ್ಯೂಬ್​ನಲ್ಲಿ ಉಪ್ಪಿ ಹವಾ: ‘ಕಬ್ಜ’ ಟೀಸರ್​ ನಂ. 1 ಟ್ರೆಂಡಿಂಗ್​; 24 ಗಂಟೆಗಳಲ್ಲಿ 1 ಕೋಟಿಗೂ ಅಧಿಕ ವ್ಯೂಸ್..

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts