More

    ಪಾಕ್​ ವಿರುದ್ಧದ ಪಂದ್ಯದಲ್ಲಿ ಕಣಕ್ಕಿಳಿಯುತ್ತಾರಾ ಶುಭಮನ್ ಗಿಲ್; ಮಹತ್ವದ ಸುಳಿವು ನೀಡಿದ ಕ್ಯಾಪ್ಟನ್ ರೋಹಿತ್ ಶರ್ಮಾ

    ಅಹಮದಬಾದ್: ಡೆಂಗ್ಯೂ ಜ್ವರದಿಂದ ಈ ಬಾರಿಯ ವಿಶ್ವಕಪ್​ ಆವೃತ್ತಿಯ ಮೊದಲೆರಡು ಪಂದ್ಯ ತಪ್ಪಿಸಿಕೊಂಡಿದ್ದ ಭಾರತದ ಬ್ಯಾಟ್ಸ್​ಮನ್​ ಶುಭಮನ್​ ಗಿಲ್​ ಪಾಕ್​ ವಿರುದ್ಧದ ಪಂದ್ಯಕ್ಕೆ ಲಭ್ಯವಿರಲಿದ್ದಾರೆ ಎಂದು ಟೀಂ ಇಂಡಿಯಾದ ನಾಯಕ ರೋಹಿತ್​ ಶರ್ಮಾ ತಿಳಿಸಿದ್ದಾರೆ.

    ಪಂದ್ಯಕ್ಕೂ ಮುನ್ನ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ನಾಯಕ ರೋಹಿತ್​ ಶರ್ಮಾ, ಡೆಂಗ್ಯೂ ಜ್ವರ ಕಾಣಿಸಿಕೊಂಡ ಕಾರಣ ಗಿಲ್​ ಆಸ್ಟ್ರೇಲಿಯಾ ಹಾಗೂ ಅಫ್ಘಾನಿಸ್ತಾನ ವಿರುದ್ಧದ ಪಂದ್ಯದಿಂದ ಹೊರಗುಳಿಯಬೇಕಾಯಿತು. ಡೆಂಗ್ಯೂನಿಂದ ಸಂಪೂರ್ಣವಾಗಿ ಚೇತರಿಸಿಕೊಂಡಿರುವ ಗಿಲ್ ಪಾಕಿಸ್ತಾನದ ವಿರುದ್ಧದ ಪಂದ್ಯಕ್ಕೆ ಲಭ್ಯವಿರುವುದು 99% ಪಕ್ಕಾ ಎಂದು ಹೇಳಿದ್ದಾರೆ.

    ಇದನ್ನೂ ಓದಿ: ಅಂಗಲ್ಲು ಹಿಂಸಾಚಾರ ಪ್ರಕರಣ; ಮಾಜಿ ಸಿಎಂ ಚಂದ್ರಬಾಬು ನಾಯ್ಡುಗೆ ಜಾಮೀನು

    ಡಂಗ್ಯೂನಿಂದ ಚೇತರಿಸಿಕೊಂಡಿರುವ ಶುಭಮನ್ ಗಿಲ್ ನೆಟ್ಸ್​ನಲ್ಲಿ ಅಭ್ಯಾಸ ನಡೆಸಿದ್ದು, ಪಾಕಿಸ್ತಾನದ ವಿರುದ್ಧದ ಪಂದ್ಯದಲ್ಲಿ ಅವರನ್ನು ಕಣಕ್ಕಿಳಿಸುವ ಬಗ್ಗೆ ಟೀಂ ಮ್ಯಾನೇಜ್​ಮೆಂಟ್​ ನಿರ್ಧರಿಸಲಿದೆ. ಒಂದು ವೇಳೆ ಅವರು ಪಾಕಿಸ್ತಾನದ ವಿರುದ್ಧದ ಪಂದ್ಯದಲ್ಲಿ ಕಣಕ್ಕಿಳಿದರೆ ಇದು ಏಕದಿನ ವಿಶ್ವಕಪ್​ನಲ್ಲಿ ಅವರ ಪಾದಾರ್ಪಣೆ ಪಂದ್ಯವಾಗಲಿದೆ ಎಂದು ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ತಿಳಿಸಿದ್ದಾರೆ.

    ಅಕ್ಟೋಬರ್‌ 14ರಂದು (ಶನಿವಾರ) ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನದ ಎದುರು ಟೀಂ ಇಂಡಿಯಾ ಪೈಪೋಟಿ ನಡೆಸಲಿದೆ. ಅಹಮದಬಾದಿನಲ್ಲಿರುವ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಹೈವೋಲ್ಟೇಜ್​ ಪಂದ್ಯ ನಡೆಯಲಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts