More

    ಮಠ, ಮಾನ್ಯಗಳಿಗೆ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆ ಮಾದರಿ : ಶಾಸಕ ಜಿ.ಬಿ.ಜ್ಯೋತಿಗಣೇಶ್

    ತುಮಕೂರು: ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆಯು ಜನೋಪಯೋಗಿ ಕಾರ್ಯಗಳ ಮೂಲಕ ಇತರ ಮಠ, ಮಾನ್ಯಗಳಿಗೆ ಮಾದರಿಯಾಗಿದೆ ಎಂದು ನಗರ ಶಾಸಕ ಜಿ.ಬಿ.ಜ್ಯೋತಿಗಣೇಶ್ ಹೇಳಿದರು.

    ನಗರದ 26ನೇ ವಾರ್ಡ್‌ನಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ದಿ ಸಂಸ್ಥೆ ಹಾಗೂ ಪಾಲಿಕೆ ಸಹಯೋಗದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಶುದ್ಧಗಂಗಾ ಕುಡಿಯುವ ನೀರಿನ ಘಟಕಕ್ಕೆ ಗುರುವಾರ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, ಜನಜಾಗೃತಿ ಕಾರ್ಯಕ್ರಮಗಳ ಜತೆಗೆ, ಕುಡಿಯುವ ನೀರು ಘಟಕ, ಮಹಿಳಾ ಸಬಲೀಕರಣ, ಸ್ವಯಂ ಉದ್ಯೋಗ ಸೇರಿ ಹಲವು ಕ್ಷೇತ್ರಗಳಲ್ಲಿ ಗ್ರಾಮೀಣಾಭಿವೃದ್ಧಿ ಸಂಸ್ಥೆ ತೊಡಗಿಸಿಕೊಂಡಿರುವುದು ಮಾದರಿ ಎಂದರು.

    ನಗರದಲ್ಲಿ ಸುಮಾರು 8 ಶುದ್ಧಗಂಗಾ ಕುಡಿಯುವ ನೀರಿನ ಘಟಕಗಳನ್ನು ಶ್ರೀಧರ್ಮಸ್ಥಳ ಗ್ರಾಮಾಭಿವೃದ್ದಿ ಸಂಸ್ಥೆ ನಿರ್ಮಿಸಲು ಉದ್ದೇಶಿಸಿದೆ. ಇವುಗಳಲ್ಲಿ ಶೇ.30 ಪ್ರತಿಷ್ಠಿತ ಬಡಾವಣೆಗಳಲ್ಲಿ, ಶೇ 70 ನ್ನು ಕೊಳೆಗೇರಿಗಳಲ್ಲಿ ಸ್ಥಾಪಿಸುವಂತೆ ಸಂಸ್ಥೆಯ ನಿರ್ದೇಶಕರ ಜತೆಗೆ ಮಾತನಾಡಿದ್ದು, ಅವರು ಸಹ ಒಪ್ಪಿಗೆ ಸೂಚಿಸಿದ್ದಾರೆ. ಜನರಿಗೆ ಶುದ್ಧ ಕುಡಿಯುವ ನೀರು ಪೂರೈಸುವುದು ನಮ್ಮ ಗುರಿ ಎಂದು ತಿಳಿಸಿದರು.

    ಮೇಯರ್ ಫರೀಧಾ ಬೇಗಂ, ಉಪಮೇಯರ್ ಶಶಿಕಲಾ, ಆಯುಕ್ತೆ ರೇಣುಕಾ, ಸ್ಥಳೀಯ ಕಾರ್ಪೋರೇಟರ್ ಎಚ್.ಮಲ್ಲಿಕಾರ್ಜುನಯ್ಯ, ವೆಂಕಟೇಶಯ್ಯ, ಕೊಪ್ಪಲ್‌ನಾಗರಾಜು, ಡಾ.ಸಂಜಯ್‌ನಾಯಕ್, ಗ್ರಾಮಾಭಿವೃದ್ಧಿ ಸಂಸ್ಥೆ ನಿರ್ದೇಶಕರಾದ ದಯಶೀಲಾ, ಪ್ರವೀಣ್‌ಕುಮಾರ್, ಚನ್ನಕೇಶವ, ಜನಜಾಗೃತಿ ವೇದಿಕೆಯ ವಿಜಯಭಾಸ್ಕರ್ ಇದ್ದರು.

    ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆಯನ್ನು ಕೆಲವರು ರಾಜಕೀಯ ಉದ್ದೇಶಕ್ಕಾಗಿ ದುರುಪಯೋಗ ಪಡಿಸಿಕೊಳ್ಳುವ ಸಾಧ್ಯತೆ ಇದೆ. ಸಂಸ್ಥೆ ರಾಜಕಾರಣದಿಂದ ದೂರ ಉಳಿಯಬೇಕು. ಸಂಸ್ಥೆಯ ಎಲ್ಲ ಜನೋಪಕಾರಿ ಕಾರ್ಯಗಳಿಗೂ ನಮ್ಮ ಬೆಂಬಲವಿದೆ.
    ಜಿ.ಬಿ.ಜ್ಯೋತಿಗಣೇಶ್ ನಗರ ಶಾಸಕ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts