

ಗಂಗೊಳ್ಳಿ: ಇಲ್ಲಿನ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜು ಗುಜ್ಜಾಡಿ ಗೋಪಾಲ ನಾಯಕ್ ರೋಟರಿ ಒಳಾಂಗಣದಲ್ಲಿ ಭಾನುವಾರ ನಡೆದ ಮುಕ್ತ ಷಟ್ಲ್ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಸಹರಾ ಗಂಗೊಳ್ಳಿ ತಂಡ ವಾರಿಯರ್ಸ್ ಗಂಗೊಳ್ಳಿ ತಂಡವನ್ನು ಸೋಲಿಸಿ ಪ್ರಶಸ್ತಿ ತನ್ನದಾಗಿಸಿಕೊಂಡಿತು.
ಸಮಾರೋಪದಲ್ಲಿ ಪತ್ರಕರ್ತ ಬಿ.ರಾಘವೇಂದ್ರ ಪೈ, ಗಂಗೊಳ್ಳಿ ಎಸ್.ವಿ. ಆಂಗ್ಲ ಮಾಧ್ಯಮ ಶಾಲೆ ಮುಖ್ಯಶಿಕ್ಷಕ ರಾಘವೇಂದ್ರ ಶೇರುಗಾರ್ ವಿಜೇತರಿಗೆ ಬಹುಮಾನ ವಿತರಿಸಿದರು.
6 ಎಎಂ ಬ್ಯಾಡ್ಮಿಂಟನ್ ಫ್ರೆಂಡ್ಸ್‌ನ ಮನೋಜ್ ಅಧ್ಯಕ್ಷತೆ ವಹಿಸಿದ್ದರು. ಎಸ್.ವಿ ಆಂಗ್ಲ ಮಾಧ್ಯಮ ಶಾಲೆ ದೈಹಿಕ ಶಿಕ್ಷಣ ಶಿಕ್ಷಕ ಸೂರಜ್ ಸಾರಂಗ್, ಎಸ್.ವಿ ಪದವಿ ಪೂರ್ವ ಕಾಲೇಜು ದೈಹಿಕ ಶಿಕ್ಷಣ ಉಪನ್ಯಾಸಕ ದೀಕ್ಷಿತ್ ಮೇಸ್ತ ಅವರನ್ನು ಗೌರವಿಸಲಾಯಿತು. ಸಂಘದ ಸದಸ್ಯರಾದ ಲಿಪ್ಟನ್ ಒಲಿವೇರಾ, ರಾಮ ಪೂಜಾರಿ, ನಿಶಾಕಾಂತ್, ಚೇತನ್ ಆರ್ಕಾಟಿ, ಶಶಿಕಾಂತ್ ಪೂಜಾರಿ, ಕೌಶಿಕ್ ಪೂಜಾರಿ, ಪ್ರಾರ್ಥನಾ ಪೈ, ಶ್ರಾವ್ಯ, ದೀಪ್ತಿ ಮೊದಲಾದವರು ಉಪಸ್ಥಿತರಿದ್ದರು.