25.7 C
Bangalore
Sunday, December 15, 2019

ಅನಾರೋಗ್ಯದಿಂದ ಪೌರ ಕಾರ್ಮಿಕ ಸಾವು

Latest News

ತುಳು ಶಿವಳ್ಳಿ ಬ್ರಾಹ್ಮಣರ ಪ್ರಥಮ ವಿಶ್ವ ಸಮ್ಮೇಳನ

ಉಡುಪಿ: ತುಳು ಭಾಷಿಗ ತುಳು ಶಿವಳ್ಳಿ ಬ್ರಾಹ್ಮಣರು ಮಾತೃಭಾಷೆ ಮರೆಯುತ್ತಿದ್ದಾರೆ. ಅದು ಸಲ್ಲದು. ನಮ್ಮ ಸಂಸ್ಕೃತಿ-ಸಂಸ್ಕಾರಗಳ ಉಳಿವಿಗಾಗಿ ಶ್ರಮಿಸುವುದು ಗಾಯತ್ರಿ ಮಂತ್ರವನ್ನು ನಿತ್ಯವೂ...

ಕ್ರಿಕೆಟ್ ಪಂದ್ಯಾವಳಿ, ಡಿಎಆರ್ ಮೈದಾನದಲ್ಲಿ ಲಾಠಿಗೆ ಮಣಿದ ಲೇಖನಿ

ಬಳ್ಳಾರಿ: ಪೊಲೀಸ್ ವಾರ್ಷಿಕ ಕ್ರೀಡಾಕೂಟ ಹಿನ್ನೆಲೆಯಲ್ಲಿ ನಗರದ ಜಿಲ್ಲಾ ಪೊಲೀಸ್ ಕ್ರೀಡಾಂಗಣದಲ್ಲಿ ಭಾನುವಾರ ಪೊಲೀಸರು ಮತ್ತು ಪತ್ರಕರ್ತರ ಮಧ್ಯೆ ನಡೆದ ಕ್ರಿಕೆಟ್ ಪಂದ್ಯಾವಳಿಯಲ್ಲಿ...

ಹೆಚ್ಚುವರಿ ಡಿಸಿಎಂ ಹುದ್ದೆ ಸೃಷ್ಟಿ ಉಹಾಪೋಹ – ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ

ರಾಯಚೂರು: ಇನ್ನೆರಡು ಉಪ ಮುಖ್ಯಮಂತ್ರಿ ಹುದ್ದೆ ಸೃಜಿಸಲಾಗುತ್ತಿದೆ ಎನ್ನುವುದು ಮಾಧ್ಯಮಗಳ ಸೃಷ್ಟಿ. ಮುಂದಿನ ಸಚಿವ ಸಂಪುಟದ ವಿಸ್ತರಣೆ, ಬದಲಾವಣೆಯನ್ನು ವರಿಷ್ಠರು ತೀರ್ಮಾನಿಸಲಿದ್ದಾರೆ ಎಂದು...

ಮೊಬೈಲ್ ಹಾಳು ಮಾಡಿದ್ದಕ್ಕೆ ಸೋದರ ಮಾವನೇ ಬಾಲಕಿಗೆ ಚಾಕು ಇರಿದು ಹತ್ಯೆ

ಶಿವಮೊಗ್ಗ: ಮೊಬೈಲ್ ವಿಚಾರದಲ್ಲಿ ಭಾನುವಾರ ಸೋದರ ಮಾವನೇ ಬಾಲಕಿಯನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಗಾಡಿಕೊಪ್ಪದಲ್ಲಿ ನಡೆದಿದೆ.5 ವರ್ಷದ ರಂಜನಿ ಹತ್ಯೆಯಾದ...

ಮಸ್ಕಿ ಕ್ಷೇತ್ರಕ್ಕೆ ಇನ್ನೆರಡು ತಿಂಗಳಲ್ಲಿ ಉಪಚುನಾವಣೆ ಸಾಧ್ಯತೆ – ಅನರ್ಹ ಶಾಸಕ ಪ್ರತಾಪಗೌಡ ಪಾಟೀಲ್

ಮಸ್ಕಿ: ಬಿಜೆಪಿ ಸೇರಿದ ಮೇಲೆ ಸಿಎಂ ಬಿ.ಎಸ್.ಯಡಿಯೂರಪ್ಪ ಕ್ಷೇತ್ರಕ್ಕೆ 100 ಕೋಟಿ ರೂ. ಅನುದಾನ ಕೊಡಲು ಒಪ್ಪಿದ್ದಾರೆ. ಈಗಾಗಲೇ 50 ಕೋಟಿ ರೂ....

ಬೆಳಗಾವಿ: ಅನಾರೋಗ್ಯದಿಂದ ಬಳಲುತ್ತಿದ್ದ ಮಹಾನಗರ ಪಾಲಿಕೆಯ ಹೊರ ಗುತ್ತಿಗೆ ಪೌರ ಕಾರ್ಮಿಕ, ವಂಟಮೂರಿ ಕಾಲನಿ ನಿವಾಸಿ ಅನಿಲ ಕಾಂಬಳೆ (29) ಸೋಮವಾರ ಬೆಳಗ್ಗೆ ಬೆಳಗಾವಿ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಅನಿಲ ಡೆಂೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ. ಚಿಕಿತ್ಸೆಗೆ ದಾಖಲಾಗಿದ್ದ ಅನಿಲ ಕಾಂಬಳೆ ಮೃತಪಟ್ಟ ಸುದ್ದಿ ತಿಳಿಯುತ್ತಿದ್ದಂತೆಯೇ ಪೌರಕಾರ್ಮಿಕರು ಆಸ್ಪತ್ರೆ ಎದುರು ಪ್ರತಿಭಟನೆ ಮಾಡಿ ಪಾಲಿಕೆ ವಿರುದ್ಧ ಆಕೋಶ ವ್ಯಕ್ತಪಡಿಸಿದರು. ಪೌರ ಕಾರ್ಮಿಕರಿಗೆ ಕಳೆದ 4 ತಿಂಗಳಿನಿಂದ ಸಂಬಳ ಆಗಿರಲಿಲ್ಲ.

ಅನಿಲ ಅನಾರೋಗ್ಯದ ನಡುವೆಯೂ ಗಣೇಶ ಹಬ್ಬದ ಸಂದರ್ಭ ಕೆಲಸ ಮಾಡಿದ್ದರು. ಆದರೆ, ಕಳೆದ ಎರಡು ದಿನಗಳಿಂದ ಜ್ವರದಿಂದ ಬಳಲುತ್ತಿದ್ದರಿಂದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸರಿಯಾದ ಸಮಯಕ್ಕೆ ಸಂಬಳ ದೊರೆಯದಿದ್ದರಿಂದ ಕುಟುಂಬಕ್ಕೆ ಹೆಚ್ಚಿನ ಚಿಕಿತ್ಸೆ ನೀಡಲು ಸಾಧ್ಯವಾಗಿರಲಿಲ್ಲ ಎಂದು ಪೌರ ಕಾರ್ಮಿಕರ ಸೂಪರ್‌ವೈಸರ್ ಕರೆಪ್ಪ ಮೇತ್ರಿ ಆರೋಪಿಸಿದ್ದಾರೆ. ಮೃತ ಅನಿಲಗೆ ಪತ್ನಿ ಹಾಗೂ ಎರಡೂವರೆ ವರ್ಷದ ಮಗು ಇದೆ. ಪ್ರತಿಭಟನಾಕಾರರು ಅನಿಲ ಕಾಂಬಳೆ ಅವರ ಶವವನ್ನು ಪಾಲಿಕೆ ಕಚೇರಿ ಎದುರು ಇಟ್ಟು ಪ್ರತಿಭಟನೆ ನಡೆಸಲು ನಿರ್ಧರಿಸಿದ್ದರು. ಆದರೆ, ಪಾಲಿಕೆಯ ಕೆಲ ಅಕಾರಿಗಳು ಮನವೊಲಿಸಿದ್ದರಿಂದ ಪ್ರತಿಭಟನೆ ಕೈ ಬಿಟ್ಟು ಮಧ್ಯಾಹ್ನ ಅಂತ್ಯ ಸಂಸ್ಕಾರ ನೆರವೇರಿಸಿದರು. ಈ ಕುರಿತು ವಿಜಯವಾಣಿಯೊಂದಿಗೆ ಮಾತನಾಡಿದ ಪಾಲಿಕೆ ಆಯುಕ್ತ ಅಶೋಕ ದುಡಗುಂಟಿ, ಅನಿಲ ಕಾಂಬಳೆ ರಕ್ತದಲ್ಲಿ ಪ್ಲೇಟ್‌ಲೇಟ್‌ಗಳ ಕೊರತೆಯಿಂದ ಮೃತ ಪಟ್ಟಿರುವ ಬಗ್ಗೆ ತಿಳಿದು ಬಂದಿದೆ.

ವೈದ್ಯಕೀಯ ವರದಿ ಇನ್ನೂ ಕೈಸೇರಿಲ್ಲ. ಅವರು ಅನಾರೋಗ್ಯದಿಂದ ಮೃತಪಟ್ಟಿದ್ದು, ಸಂಬಳ ಆಗಿಲ್ಲ ಎನ್ನುವುದನ್ನು ಇದಕ್ಕೆ ಜೋಡಿಸುವುದು ಸೂಕ್ತವಲ್ಲ. 2 ತಿಂಗಳಿನಿಂದ ಸಂಬಳ ಆಗದ ಬಗ್ಗೆ ನನ್ನ ಗಮನಕ್ಕೆ ಇರಲಿಲ್ಲ. ಸೋಮವಾರ ಮಾಹಿತಿ ತಿಳಿದ ತಕ್ಷಣ ಸಂಬಳ ಪೌರ ಕಾರ್ಮಿಕರ ಖಾತೆಗೆ ಹಾಕಲಾಗಿದೆ. ಅನಿಲ ಕಾಂಬಳೆ ಅನಾರೋಗ್ಯದಿಂದ ಬಳಲುತ್ತಿರುವ ಮಾಹಿತಿ ಇರಲಿಲ್ಲ. ಆತ ಶುಕ್ರವಾರದವರೆಗೆ ಕರ್ತವ್ಯಕ್ಕೆ ಹಾಜರಾಗಿದ್ದರು. ಆದರೆ, ಮೊದಲೇ ನಮಗೆ ತಿಳಿಸಿದ್ದರೆ ಇಎಸ್‌ಐ ಆಸ್ಪತ್ರೆಯಲ್ಲಿ ಉಚಿತ ಚಿಕಿತ್ಸೆ ಸೌಲಭ್ಯ ಕೊಡಿಸಬಹುದಿತ್ತು. ಬೇರೆ ರೀತಿಯ ನೆರವೂ ನೀಡಬಹುದಿತ್ತು ಎಂದು ತಿಳಿಸಿದ್ದಾರೆ.

ಆನ್‌ಲೈನ್ ಮೂಲಕ ಸಂಬಳ

ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ 216 ಕಾಯಂ ಪೌರ ಕಾರ್ಮಿಕರಿದ್ದು, ಇವರಿಗೆ ಪಾಲಿಕೆಯಿಂದ ನೇರವಾಗಿ ಸಂಬಳ ದೊರಕುತ್ತದೆ. ಆದರೆ, 548 ಹೊರಗುತ್ತಿಗೆ ಪೌರ ಕಾರ್ಮಿಕರಿಗೆ ಆನ್‌ಲೈನ್ ಮೂಲಕ ಹಾಗೂ 551 ಹೊರಗುತ್ತಿಗೆ ಪೌರ ಕಾರ್ಮಿಕರಿಗೆ ಗುತ್ತಿಗೆದಾರರ ಮೂಲಕ ಪಾಲಿಕೆಯಿಂದ ಸಂಬಳ ನೀಡಲಾಗುತ್ತಿದೆ. ಅನಿಲ ಕಾಂಬಳೆ ಹೊರ ಗುತ್ತಿಗೆ ಪೌರ ಕಾರ್ಮಿಕರಾಗಿದ್ದರಿಂದ ಅವರಿಗೆ ಆನ್‌ಲೈನ್ ಮೂಲಕ ಸಂಬಳ ನೀಡಲಾಗುತ್ತಿತ್ತು.

Stay connected

278,751FansLike
588FollowersFollow
628,000SubscribersSubscribe

ವಿಡಿಯೋ ನ್ಯೂಸ್

VIDEO| ಕ್ರಿಕೆಟ್​​ ಮೈದಾನಕ್ಕೆ ಎಂಟ್ರಿ ಕೊಟ್ಟು ಪಂದ್ಯವನ್ನೇ ಕೆಲಕಾಲ ನಿಲ್ಲಿಸಿದ...

ಹೈದರಾಬಾದ್​: ಮಳೆಯ ಕಾರಣದಿಂದಾಗಿ ಕ್ರಿಕೆಟ್​ ಪಂದ್ಯಗಳು ಕೆಲಕಾಲ ಸ್ಥಗಿತಗೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ, ಹಾವಿನಿಂದಾಗಿ ಪಂದ್ಯ ಕೆಲಕಾಲ ನಿಲ್ಲುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲ ಎಂದಾದಲ್ಲಿ ನಾವು ತೋರಿಸುತ್ತೇವೆ ನೋಡಿ.... ಡಿಸೆಂಬರ್​ 9ರ...

VIDEO: ನಮಾಮಿ ಗಂಗಾ ಯೋಜನೆ ಪ್ರಗತಿ ಪರಿಶೀಲನೆ ಮುಗಿಸಿ ವಾಪಸ್​...

ಲಖನೌ: ಪ್ರಧಾನಿ ನರೇಂದ್ರ ಮೋದಿಯವರು ನ್ಯಾಷನಲ್ ಗಂಗಾ ಕೌನ್ಸಿಲ್​ನ ಮೊದಲ ಸಭೆಯನ್ನು ಇಂದು ಕಾನ್ಪುರದಲ್ಲಿ ನಡೆಸಿದ್ದಾರೆ. ಸಭೆಯಲ್ಲಿ ನಮಾಮಿ ಗಂಗಾ ಯೋಜನೆಯ ಮುಂದಿನ ಹಂತಗಳು, ನದಿ ಸ್ವಚ್ಛತೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ನರೇಂದ್ರ ಮೋದಿ...

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...