ಉದ್ಯಮಿಗಳಿಗೆ ಶಕ್ತಿ ತುಂಬುವ ಸಿಡ್ಬಿ:ಬಿ.ವೈ.ರಾಘವೇಂದ್ರ

byr

ಶಿವಮೊಗ್ಗ: ವಿನೋಬನಗರದಲ್ಲಿ ನೂತನ ಸಿಡ್ಬಿ (ಎಸ್‌ಐಡಿಬಿಐ) ಶಾಖೆಯನ್ನು ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಶನಿವಾರ ಉದ್ಘಾಟಿಸಿದರು. ಇದೇ ಸಂದರ್ಭದಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ದೇಶದ ವಿವಿಧೆಡೆ ಸಿಡ್ಬಿ ನೂತನ ಶಾಖೆಗಳಿಗೆ ವರ್ಚುವಲ್ ಮೂಲಕ ಚಾಲನೆ ನೀಡಿದರು.
ಉದ್ಘಾಟನೆ ಬಳಿಕ ಮಾತನಾಡಿದ ಬಿ.ವೈ.ರಾಘವೇಂದ್ರ, ಸ್ಥಳೀಯ ವ್ಯವಹಾರಗಳು, ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ವರ್ಗದ ಉದ್ಯಮಿಗಳಿಗೆ ಶಕ್ತಿ ತುಂಬಲು ನೂತನ ಶಾಖೆ ಮಹತ್ವದ ಹೆಜ್ಜೆಯಾಗಿದೆ. ಸ್ಟಾರ್ಟ್‌ಅಪ್‌ಗಳಿಗೆ ಅನುಕೂಲವಾಗಲಿದೆ. ಪ್ರಧಾನಿ ನರೇಂದ್ರ ಮೋದಿ ಅವರ ವೈಬ್ರಂಟ್ ಇಂಡಿಯಾ ಮತ್ತು ಆತ್ಮನಿರ್ಭರ ಭಾರತ್ ಸಾಕಾರಕ್ಕೆ ಪೂರಕವಾಗಿದೆ ಎಂದರು.
ಕನಿಷ್ಟ ಬಡ್ಡಿದರದಲ್ಲಿ ಸಾಲ ನೀಡಲಾಗುತ್ತದೆ. ವಿಶೇಷ ಯೋಜನೆಗಳ ಮೂಲಕ ಹೊಸ ಮತ್ತು ಮಹಿಳಾ ಮಾಲೀಕತ್ವದ ಸಂಸ್ಥೆಗಳಿಗೆ ಅಗತ್ಯವಿರುವ ಆರ್ಥಿಕ ಸಂಪನ್ಮೂಲ ಒದಗಿಸಲಾಗುತ್ತದೆ. ಸ್ಥಳೀಯವಾಗಿ ಉದ್ಯೋಗ ಸೃಷ್ಟಿಗೆ ಅನುಕೂಲವಾಗಲಿದೆ. ನಮ್ಮ ಜಿಲ್ಲೆಯ ಅಭಿವೃದ್ಧಿಯಲ್ಲಿ ಮಹತ್ವದ ಪಾತ್ರ ವಹಿಸಲಿದೆ ಎಂದು ತಿಳಿಸಿದರು.
ಶಾಸಕ ಎಸ್.ಎನ್.ಚನ್ನಬಸಪ್ಪ, ವಿಧಾನ ಪರಿಷತ್ ಸದಸ್ಯ ಡಾ. ಧನಂಜಯ ಸರ್ಜಿ, ಮಾಜಿ ಎಂಎಲ್‌ಸಿ ಎಸ್.ರುದ್ರೇಗೌಡ, ಸಿಡ್ಬಿ ಡಿಜಿಎಂ ಕುಲಶೇಖರನ್, ಶಾಖಾ ವ್ಯವಸ್ಥಾಪಕ ಶಿವಕುಮಾರ್ ಬಿಲ್ಲು, ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಬಿ.ಗೋಪಿನಾಥ್, ಜಿಲ್ಲಾ ವಾಣಿಜ್ಯ ಸಂಘದ ಅಧ್ಯಕ್ಷ ಜೋಯಿಸ್ ರಾಮಾಚಾರ್, ಸಂಘದ ಪದಾಧಿಕಾರಿಗಳು, ಕೈಗಾರಿಕೋದ್ಯಮಿಗಳು ಉಪಸ್ಥಿತರಿದ್ದರು.

Share This Article

Kurukshetra | ಕುರುಕ್ಷೇತ್ರ ಯುದ್ಧದ ಕೊನೆಯಲ್ಲಿ ರಣಭೂಮಿಗೆ ದ್ರೌಪದಿಯನ್ನು ಶ್ರೀಕೃಷ್ಣ ಕರೆತಂದಿದ್ದೇಕೆ; ಪರಮಾತ್ಮ ಹೇಳಿದ್ದೇನು?

ಕುರುಕ್ಷೇತ್ರ(Kurukshetra) ಯುದ್ಧದಲ್ಲಿ ಎಲ್ಲಾರೂ ಮರಣ ಹೊಂದಲು ಕಾರಣ ಪಾಂಡವರಲ್ಲ ದ್ರೌಪದಿಯ ಕಣ್ಣೀರು. ಕುರುಕ್ಷೇತ್ರ ಯುದ್ಧ ಮುಗಿದ…

ನಿಮ್ಮ ಮಕ್ಕಳಿಗೆ ಪ್ರತಿನಿತ್ಯ ಟೀ ಕೊಡ್ತಿದ್ದೀರಾ? ಹೌದು ಎಂದಾದರೆ ಈ ವಿಚಾರಗಳು ನಿಮಗೆ ತಿಳಿದಿರಲೇಬೇಕು! Tea

Tea : ಜಗತ್ತಿನ ಬಹುತೇಕ ಜನರ ದಿನ ಆರಂಭವಾಗುವುದೇ ಟೀ ಅಥವಾ ಕಾಫಿಯಿಂದ. ದಿನಕ್ಕೆ ಒಂದು…

ನಿಮಗೆ ದೃಷ್ಟಿ ದೋಷವಾಗಿದ್ರೆ..ನಿಂಬೆ ಹಣ್ಣಿನಿಂದ ಹೀಗೆ ಮಾಡಿದರೆ ಸಾಕು! Drishti Dosha

Drishti Dosha: ಸಾಮಾನ್ಯವಾಗಿ ಕೆಟ್ಟ ದೃಷ್ಟಿ ಬಿದ್ದಿದೆ ಎಂಬ ಪದವನ್ನು ನಾವು ಸಾಮಾನ್ಯವಾಗಿ ಕೇಳುತ್ತಿರುತ್ತೇವೆ. ಮನೆ ವ್ಯವಹಾರ,…