ಸಿದ್ಧಗಂಗಾ ಶ್ರೀಗಳ ಆರೋಗ್ಯದಲ್ಲಿ ಚೇತರಿಕೆ: ಇಂದು ಮಠಕ್ಕೆ ಮುಖ್ಯಮಂತ್ರಿ ಎಚ್.​ಡಿ.ಕುಮಾರಸ್ವಾಮಿ ಭೇಟಿ

ತುಮಕೂರು: ನಿನ್ನೆ ಒಂದು ಗಂಟೆಗೂ ಹೆಚ್ಚುಕಾಲ ವೆಂಟಿಲೇಟರ್​ ಇಲ್ಲದೆ ಸಹಜವಾಗಿ ಉಸಿರಾಡಿದ್ದ ಸಿದ್ಧಗಂಗಾ ಸ್ವಾಮೀಜಿಗಳಿಗೆ ಇಂದು ಮಠದಲ್ಲಿಯೇ ಚಿಕಿತ್ಸೆ ಮುಂದುವರಿದಿದೆ.

ಮುಂಜಾನೆ 5ಗಂಟೆಗೆ ರಕ್ತಪರೀಕ್ಷೆ ಮಾಡಲಾಗಿದೆ. ಬಿ.ಎಸ್​.ಯಡಿಯೂರಪ್ಪ ಇಂದು ಬೆಳಗ್ಗೆಯೇ ಮಠಕ್ಕೆ ಆಗಮಿಸಲಿದ್ದು ಸಂಜೆವರೆಗೂ ಶ್ರೀಗಳ ಜತೆಯಲ್ಲಿಯೇ ಇರಲಿದ್ದಾರೆ ಎನ್ನಲಾಗಿದೆ. ಮಧ್ಯಾಹ್ನ 1.50ಕ್ಕೆ ಮುಖ್ಯಮಂತ್ರಿ ಕುಮಾರಸ್ವಾಮಿ ಭೇಟಿ ನೀಡಿ ಶ್ರೀಗಳ ಆರೋಗ್ಯ ವಿಚಾರಿಸಲಿದ್ದಾರೆ.

ನಿನ್ನೆ ಸಿದ್ಧಗಂಗಾ ಶ್ರೀಗಳ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದ ಹಿನ್ನೆಲೆಯಲ್ಲಿ ಕಿರಿಯ ಶ್ರೀಗಳು ಬೆಟ್ಟದ ಮೇಲಿನ ಸಿದ್ಧಲಿಂಗೇಶ್ವರ ಸ್ವಾಮಿಗೆ ಪೂಜೆ ಸಲ್ಲಿಸಿದರು. ಇತರ ಮಠಗಳ ಶ್ರೀಗಳೂ ಪಾಲ್ಗೊಂಡಿದ್ದರು.

Leave a Reply

Your email address will not be published. Required fields are marked *