ಸರ್ಕಾರವೇ ಭರಿಸಲಿದೆ ಸಿದ್ದಗಂಗಾ ಶ್ರೀಗಳ ವೈದ್ಯಕೀಯ ವೆಚ್ಚ

ಬೆಂಗಳೂರು: ಸಿದ್ದಗಂಗಾ ಶ್ರೀಗಳ ವೈದ್ಯಕೀಯ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ.

ಸಿದ್ದಗಂಗಾ ಮಠದ ಕಿರಿಯ ಶ್ರೀಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದೇನೆ. ಶ್ರೀಗಳ ಆರೋಗ್ಯದ ಬಗ್ಗೆ ಕ್ಷಣ ಕ್ಷಣದ ಮಾಹಿತಿ ಪಡೆಯುತ್ತಿದ್ದೇನೆ. ಇದಲ್ಲದೆ ಚೆನ್ನೈನ ಆಸ್ಪತ್ರೆಯ ವೈದ್ಯರೊಂದಿಗೂ ನಾನು ಮಾತನಾಡಿದ್ದೇನೆ ಎಂದು ಮುಖ್ಯಮಂತ್ರಿ ತಿಳಿಸಿದ್ದು, ಶ್ರೀಗಳು ಶೀಘ್ರವೇ ಗುಣಮುಖರಾಗಲಿ ಎಂದು ಅವರು ಹಾರೈಸಿದ್ದಾರೆ.

ಇನ್ನೊಂದೆಡೆ ಶ್ರೀಗಳ ಆರೋಗ್ಯದ ಕುರಿತು ಚೆನ್ನೈನ ರೆಲಾ ವೈದ್ಯಕೀಯ ಶಿಕ್ಷಣ ಸಂಸ್ಥೆ ಪ್ರಕಟಣೆ ಹೊರಡಿಸಿದೆ. ಲಿವರ್​ ಮತ್ತು ಪಿತ್ತರಸ ನಾಳದ ಸಮಸ್ಯೆ ಹಿನ್ನೆಲೆಯಲ್ಲಿ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ತಜ್ಞ ವೈದ್ಯರು ಶ್ರೀಗಳ ಆರೋಗ್ಯವನ್ನು ಅತ್ಯಂತ ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ. ಲಿವರ್​ನ ಸೋಂಕಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಸಂಸ್ಥೆ ತಿಳಿಸಿದೆ.

ಈ ನಡುವೆ, ಸಿದ್ಧಗಂಗಾ ಶ್ರೀಗಳ ಆರೋಗ್ಯ ವಿಚಾರಿಸಲು ಸುತ್ತೂರಿನ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಚೆನ್ನೈ ಆಸ್ಪತ್ರೆಗೆ ತೆರಳಿದ್ದಾರೆ.

Leave a Reply

Your email address will not be published. Required fields are marked *