More

    ಕರೊನಾದಿಂದ ಕವಿ ಡಾ. ಸಿದ್ದಲಿಂಗಯ್ಯ ವಿಧಿವಶ: ಕಳಚಿತು ಸಾಹಿತ್ಯ ಲೋಕದ ಮತ್ತೊಂದು ಕೊಂಡಿ

    ಬೆಂಗಳೂರು: ಕರೊನಾ ಸೋಂಕಿನಿಂದ ನಗರದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ದಲಿತ ಕವಿ ಡಾ. ಸಿದ್ದಲಿಂಗಯ್ಯ (67) ಇಂದು ಕೊನೆಯುಸಿರೆಳೆದಿದ್ದಾರೆ. ಅವರಿಗೆ ಹಳೆ ವಿಮಾನ ನಿಲ್ದಾಣ ರಸ್ತೆಯಲ್ಲಿರುವ ಮಣಿಪಾಲ್ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ (ಐಸಿಸಿ) ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿರುವುದಾಗಿ ಆಸ್ಪತ್ರೆ ಮೂಲಗಳು ಹೇಳಿವೆ.

    ಕಳೆದ ಕೆಲವು ದಿನಗಳಿಂದ ಇವರಿಗೆ ಉಸಿರಾಟದ ಸಮಸ್ಯೆ ಮತ್ತು ಕೆಮ್ಮು ಕಾಣಿಸಿಕೊಂಡಿತ್ತು. ಕೃತಕ ಉಸಿರಾಟದ ಮೂಲಕ ಚಿಕಿತ್ಸೆ ನೀಡಲಾಗಿತ್ತು. ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಇವರಿಗೂ ಕೂಡ ಆರಂಭದಲ್ಲಿ  ರಂಗದೊರೆ, ಅಪೋಲೋ ಆಸ್ಪತ್ರೆಗಳಲ್ಲಿ ಹಾಸಿಗೆ ಸಿಗದೇ ಸಮಸ್ಯೆ ಎದುರಿಸಿದ್ದರು. ನಂತರ ಉಪ ಮುಖ್ಯಮಂತ್ರಿ ಅಶ್ವಥ ನಾರಾಯಣ ಹಾಗೂ ಮುಖ್ಯಮಂತ್ರಿ ಕಚೇರಿಯಿಂದ ಕರೆ ಹೋದ ಬಳಿಕ ಇವರಿಗೆ ಆಸ್ಪತ್ರೆಯಲ್ಲಿ ಹಾಸಿಗೆಯ ವ್ಯವಸ್ಥೆ ಮಾಡಲಾಗಿತ್ತು.

    ಎರಡು ಬಾರಿ ವಿಧಾನಪರಿಷತ್ತಿನ ಸದಸ್ಯರಾಗಿದ್ದ ಸಿದ್ದಲಿಂಗಯ್ಯ ದಲಿತ ಹೋರಾಟ ಮತ್ತು ಸಾಮಾಜಿಕ ಸಮಾನತೆಗಾಗಿ ಕಾವ್ಯ ಸಾಹಿತ್ಯಗಳನ್ನು ರಚಿಸಿ ದಲಿತ ಕವಿ ಎಂದೇ ಹೆಸರು ಪಡೆದವರು. ಅಧ್ಯಾಪಕರಾಗಿ, ಕವಿಗಳಾಗಿ, ಹೋರಾಟಗಾರರಾಗಿ ಹಾಗೂ ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾಗಿ ಇವರು ಸಲ್ಲಿಸಿರುವ ಸೇವೆ ಅಪಾರ. ಶ್ರವಣಬೆಳಗೊಳದಲ್ಲಿ ನಡೆದ 81ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರು ಕೂಡ ಆಗಿದ್ದವರು ಇವರು. 1954ರಲ್ಲಿ ಮಾಗಡಿ ತಾಲ್ಲೂಕಿನ ಮಂಚನಬೆಲೆ ಗ್ರಾಮದಲ್ಲಿ ಹುಟ್ಟಿದ್ದ ಸಿದ್ದಲಿಂಗಯ್ಯನವರು, ಅಂಬೇಡ್ಕರ್, ಪೆರಿಯಾರ್, ವಸುದೇವಭೂಪಾಲ, ಲೋಹಿಯಾ ಮುಂತಾದವರ ವಿಚಾರಧಾರೆಗಳಿಂದ ಆಕರ್ಷಿತರಾದವರು. ಶಾಲಾ ದಿನಗಳಿಂದಲೇ ಕವಿತೆ ಬರೆಯುವ ಹವ್ಯಾಸವುಳ್ಳವಾಗಿದ್ದ ಇವರು, ಅಂದಿನಿಂದಲೇ ಉತ್ತಮ ಭಾಷಣಕಾರ ಕೂಡ.

    ‘ಹೊಲೆಮಾದಿಗರ ಹಾಡು’, ‘ಮೆರವಣಿಗೆ’, ‘ಸಾವಿರಾರು ನದಿಗಳು’, ‘ಕಪ್ಪು ಕಾಡಿನ ಹಾಡು’, ‘ನನ್ನ ಜನಗಳು’ ಸೇರಿದಂತೆ ಹಲವು ಕವನ ಸಂಕಲಗಳನ್ನು ಸಿದ್ದಲಿಂಗಯ್ಯ ಅವರು ಹೊರತಂದಿದ್ದಾರೆ. ‘ಊರು-ಕೇರಿ’ ಎಂಬ ಆತ್ಮಕಥನವನ್ನು ಅವರು ರಚಿಸಿದ್ದಾರೆ. ಪಂಪ ಪ್ರಶಸ್ತಿ, ಕರ್ನಾಟಕ ಸಾಹಿತ್ಯು ಅಕಾಡೆಮಿ ಪ್ರಶಸ್ತಿ, ನಾಡೋಜ, ನೃಪತುಂಗ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿ ಹಾಗೂ ಗೌರವಗಳು ಅವರಿಗೆ ದೊರೆತಿವೆ.

    ಬಿಎಸ್ಸಿ ಪದವೀಧರರಿಗೆ ರಸಗೊಬ್ಬರ ಸಂಸ್ಥೆಯಲ್ಲಿ ಆಪರೇಟರ್​ಗಳ ಹುದ್ದೆಗೆ ಅರ್ಜಿ ಆಹ್ವಾನ

    ಇಂಜಿನಿಯರಿಂಗ್‌ ಪದವೀಧರರಿಗೆ ಬ್ಯೂರೋ ಆಫ್‌​ ಇಂಡಿಯನ್​ ಸ್ಟ್ಯಾಂಡರ್ಡ್ಸ್​ನಲ್ಲಿವೆ 28 ಹುದ್ದೆಗಳು

    ನಟ ಅನುಪಮ್‌ ಖೇರ್‌ಗೆ ಬಿಗ್‌ ಶಾಕ್‌… ರಾತ್ರೋರಾತ್ರಿ 80 ಸಾವಿರ ಫಾಲೋವರ್ಸ್‌ ಮಿಸ್ಸಿಂಗ್‌!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts