More

  ಆಮಿಷಗಳಿಗೆ ಒಳಗಾಗದೆ ಹಕ್ಕು ಚಲಾಯಿಸಿ

  ಸಿದ್ದಾಪುರದಲ್ಲಿ ಹೆಬ್ಬಾಳ ಬೃಹನ್ಮಠದ ನಾಗಭೂಷಣ ಶಿವಾಚಾರ್ಯರು ಸಲಹೆ

  ಸಿದ್ದಾಪುರ: ಮತದಾರರು ಯಾವುದೇ ಆಸೆ, ಆಮಿಷಕ್ಕೆ ಒಳಗಾಗದೆ ಮತದಾನ ಮಾಡಬೇಕು ಎಂದು ಹೆಬ್ಬಾಳ ಬೃಹನ್ಮಠದ ನಾಗಭೂಷಣ ಶಿವಾಚಾರ್ಯರು ಹೇಳಿದರು.

  ಗ್ರಾಮದ ಎಪಿಎಂಸಿ ಕಲ್ಯಾಣ ಮಂಟಪದಲ್ಲಿ ನಡೆದ ಚಿಕ್ಕಖೇಡೆದ್ ಬಂಧುಗಳ ಮದುವೆ ಸಮಾರಂಭದಲ್ಲಿ ತಾಲೂಕು ಸ್ವೀಪ್ ಸಮಿತಿಯಿಂದ ಶುಕ್ರವಾರ ಹಮ್ಮಿಕೊಂಡಿದ್ದ ಮತದಾನ ಜಾಗೃತಿ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದರು. ಮೇ 7ರ ಲೋಕಸಭಾ ಚುನಾವಣೆಯಲ್ಲಿ ಪ್ರತಿಯೊಬ್ಬರೂ ತಪ್ಪದೇ ಮತದಾನಮಾಡಬೇಕು. ಭಾರತ ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿದೆ. ಇಲ್ಲಿ ಎಲ್ಲರಿಗೂ ಮತದಾನದ ಹಕ್ಕಿದೆ. ದೇಶದ ಸುಭದ್ರ ಭವಿಷ್ಯಕ್ಕಾಗಿ ಪ್ರತಿಯೊಬ್ಬರ ಮತ ಅಗತ್ಯವಾಗಿದ್ದು, ತಪ್ಪದೇ ಚಲಾಯಿಸಬೇಕು ಎಂದರು.

  ನಂತರ ಜಿಲ್ಲಾ ಸ್ವೀಪ್ ರಾಯಭಾರಿ ಡಾ. ಶಿವಕುಮಾರ್ ಮಾಲಿ ಪಾಟೀಲ್, ಮತದಾನದ ಪ್ರತಿಜ್ಞಾವಿಧಿ ಬೋಧಿಸಿದರು. ಜಿಲ್ಲಾ ಸ್ವೀಪ್ ರಾಯಭಾರಿ ಮಹೆಬೂಬ್ ಕಿಲ್ಲೇದಾರ್, ಗ್ರಾಪಂ ಕಾರ್ಯದರ್ಶಿ ಮಹೆಬೂಬ್ ಸಾಬ್, ತಾಲೂಕು ಸ್ವೀಪ್ ಸಮಿತಿ ಸದಸ್ಯ ಸೋಮನಾಥ, ಗ್ರಾಪಂ ಸಿಬ್ಬಂದಿ, ಅಂಗನವಾಡಿ, ಆಶಾ ಕಾರ್ಯಕರ್ತೆಯರು ಇದ್ದರು.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts