25.8 C
Bangalore
Monday, December 9, 2019

ಚೀರಾಟ, ಕೂಗಾಟದಲ್ಲಿ ಮುಗಿದ ಗ್ರಾಮಸಭೆ

Latest News

ಅತಂತ್ರದಿಂದ ಸುತಂತ್ರದೆಡೆಗೆ ಬಿಎಸ್​ವೈ ಸರ್ಕಾರ : 2018 ಮತ್ತು 19ರ ವಿಧಾನಸಭೆ ಸದಸ್ಯ ಬಲ ಬದಲಾವಣೆಯ ಚಿತ್ರಣ ಇಲ್ಲಿದೆ..

ಬೆಂಗಳೂರು: ಕಳೆದ ವಿಧಾನಸಭೆಯಲ್ಲಿ ಅತಂತ್ರ ಜನಾದೇಶ ಬಂದ ಕಾರಣ ಒಂದೂವರೆ ವರ್ಷ ಕಾಲ ರಾಜ್ಯವನ್ನು ರಾಜಕೀಯ ಅಸ್ಥಿರತೆ ಕಾಡಿತ್ತು. ಇದಕ್ಕೆ ಪರಿಹಾರ ಕಾಣಲು...

ಚಿತ್ರದುರ್ಗ,ಕಾಡಾನೆಗೆ ಡಾಂಟಿಂಗ್

ಚಿತ್ರದುರ್ಗ: ಕೊನೆಗೂ ಡಾಂಟಿಂಗ್ ಆದ ಕಾಡಾನೆ. ಜೋಗಿಮಟ್ಟಿ ಅರಣ್ಯದಲ್ಲಿ ಮೂರ್ನಾಲ್ಕು ದಿನಗಳಿಂದ ಬೀಡುಬಿಟ್ಟಿದ್ದ ಸಲಗ. ಅಭಿಮನ್ಯು ನೇತೃತ್ವದಲ್ಲಿ ಕಾರ್ಯಾಚರಣೆ. ನಂದಿಪುರ ವಡಗಟ್ಟೆ ಅರಣ್ಯದಲ್ಲಿ ಅರವಳಿಕೆ ಕೊಟ್ಟು ಹಗ್ಗ...

ಬೈ ಎಲೆಕ್ಷನ್​ ರಿಸಲ್ಟ್​| ಶಿವಾಜಿನಗರ ‘ಕೈ’ ಪಾಲಿಗೆ; ರಿಜ್ವಾನ್​ ಅರ್ಷಾದ್​ಗೆ 13,520ಮತಗಳ ಅಂತರದಿಂದ ಗೆಲುವು

ಬೆಂಗಳೂರು: ಶಿವಾಜಿನಗರ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್​ ಅಭ್ಯರ್ಥಿ ರಿಜ್ವಾನ್​ ಅರ್ಷದ್​ 49,887 ಮತ ಗಳಿಸಿ, ಸಮೀಪದ ಸ್ಪರ್ಧಿ ಬಿಜೆಪಿಯ ಎಂ. ಶರವಣ ವಿರುದ್ಧ 13520 ಮತಗಳ...

ಕೊಟ್ಟ ಮಾತು ಉಳಿಸಿಕೊಂಡ ಸವದಿ

ಐಗಳಿ: ಅಥಣಿ ವಿಧಾನಸಭೆ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಮಹೇಶ ಕುಮಠಳ್ಳಿ ಭರ್ಜರಿ ಗೆಲುವು ಸಾಧಿಸಿದ ಹಿನ್ನೆಲೆ ಗ್ರಾಮದಲ್ಲಿ ಪಕ್ಷದ ಕಾರ್ಯಕರ್ತರು ಹಾಗೂ...

ಅರಟಾಳದಲ್ಲಿ ಸಂಭ್ರಮಾಚರಣೆ

ಅರಟಾಳ: ಬಿಜೆಪಿ ಸರ್ಕಾರದಿಂದ ತಾಲೂಕಿನಲ್ಲಿ ಹಲಾವಾರು ಅಭಿವೃದ್ಧಿ ಕೆಲಸಗಳಾಗಿವೆ. ಡಿಸಿಎಂ ಲಕ್ಷ್ಮಣ ಸವದಿ ಅವರು ಮತಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ. ಉಪಚುನಾವಣೆಯಲ್ಲಿ ಲಕ್ಷ್ಮಣ ಸವದಿ ಪ್ರಭಾವ...

ಸಿದ್ದಾಪುರ: ಸಿದ್ದಾಪುರ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಅಧ್ಯಕ್ಷ ಎಂ.ಕೆ.ಮಣಿ ಅಧ್ಯಕ್ಷತೆಯಲ್ಲಿ ಸೋಮವಾರ ಆಯೋಜಿಸಿದ್ದ ಗ್ರಾಮ ಸಭೆ ಚೀರಾಟ, ಕಿರುಚಾಟ, ಗೊಂದಲದೊಂದಿಗೆ ಅಂತ್ಯ ಕಂಡಿತು.

25 ಗ್ರಾಪಂ ಸದಸ್ಯರಲ್ಲಿ 13 ಸದಸ್ಯರು ಮಾತ್ರ ಸಭೆಯಲ್ಲಿ ಪಾಲ್ಗೊಂಡಿದ್ದರು. ಇದಕ್ಕೆ ಗ್ರಾಮಸ್ಥ ಚಂದ್ರಕುಮಾರ್ ಆರಂಭದಲ್ಲೇ ಆಕ್ಷೇಪ ವ್ಯಕ್ತಪಡಿಸಿ ಗೈರಾದವರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದರು. ದಶಕಗಳಿಂದ ಇರುವ ಕಸದ ವಿಲೇವಾರಿ ಸಮಸ್ಯೆ ಬಗೆಹರಿಸದಿರುವ ಬಗ್ಗೆ ಅಸಮಾಧಾನ ವ್ಯಕ್ತವಾಯಿತು. ಮುರಿದು ಬೀಳುವ ಹಂತದಲ್ಲಿರುವ ಸಭಾಂಗಣದ ಛಾವಣಿಯನ್ನು ಸರಿಪಡಿಸುವಂತೆ ಒತ್ತಾಯಿಸಿದಾಗ ಮುಂದಿನ ಹಣಕಾಸು ಯೋಜನೆಯಲ್ಲಿ ಸರಿಪಡಿಸುವ ಭರವಸೆಯನ್ನು ಪಿಡಿಒ ನೀಡಿದರು.

ಗುಹ್ಯ ಗ್ರಾಮದಲ್ಲಿ ನಿರಂತರ ವಿದ್ಯುತ್ ಸಮಸ್ಯೆ ಇದ್ದು, ಕೂಡಲೇ ಸರಿಪಡಿಸಬೇಕೆಂದು ಬಶೀರ್ ಮತ್ತು ಗಿರೀಶ್ ಒತ್ತಾಯಿಸಿದರು. ಸಿದ್ದಾಪುರದ ಕೆಲ ಶಾಲೆಗಳು ಮಡಿಕೇರಿ ಮತ್ತು ವಿರಾಜಪೇಟೆ ಶಿಕ್ಷಣ ಕ್ಷೇತ್ರಕ್ಕೆ ಬರುವುದರಿಂದ ಶಾಲಾಡಳಿತ ಮಂಡಳಿ ಹಾಗೂ ಪೋಷಕರಿಗೆ ತೊಂದರೆ ಉಂಟಾಗುತ್ತಿದೆ. ಆದ್ದರಿಂದ ಶಿಕ್ಷಣ ಕ್ಷೇತ್ರವನ್ನು ವಿರಾಜಪೇಟೆ ತಾಲೂಕಿಗೆ ಸೇರಿಸಬೇಕೆಂದು ರಮೇಶ್ ಗಮನ ಸೆಳೆದರು.

ಕರಡಿಗೋಡು ರಸ್ತೆ ಸಂಪೂರ್ಣ ಹಾಳಾಗಿದ್ದು, ಕಾಂಕ್ರೀಟ್ ರಸ್ತೆ ಅಳವಡಿಸಿ, ಜತೆಗೆ ರಸ್ತೆಗೆ ಇಂಟರ್‌ಲಾಕ್ ಅಳವಡಿಸಿರುವ ಕ್ರಮ ಸರಿಯಲ್ಲ ಎಂದು ಕರಡಿಗೋಡು ನಿವಾಸಿ ಕೆ.ಡಿ.ನಾಣಯ್ಯ ಆಕ್ಷೇಪ ವ್ಯಕ್ತಪಡಿಸಿದರು. ಕರಡಿಗೋಡಿನಲ್ಲಿ ಕೊಳವೆ ಬಾವಿ ನೀರಿನಲ್ಲಿ ಚರಂಡಿ ನೀರು ಮಿಶ್ರಣವಾಗುತ್ತಿದ್ದು ರೋಗ ಹರಡುವ ಭೀತಿ ಇದೆ ಎಂದು ಕೃಷ್ಣ ಆತಂಕ ವ್ಯಕ್ತಪಡಿಸಿದರು.

ಸಿದ್ದಾಪುರ ಪಟ್ಟಣದಲ್ಲಿ ಪಾರ್ಕಿಂಗ್ ವ್ಯವಸ್ಥೆ ಸರಿಯಿಲ್ಲ. ಪಟ್ಟಣದ ಎಲ್ಲೆಂದರಲ್ಲಿ ಗಾಡಿ ನಿಲ್ಲಿಸುತ್ತಿರುವುದರಿಂದ ಸಮಸ್ಯೆ ಆಗುತ್ತಿದೆ. ಆದ್ದರಿಂದ ಪೇ ಆ್ಯಂಡ್ ಪಾರ್ಕ್ ವ್ಯವಸ್ಥೆ ಮಾಡಬೇಕೆಂದು ಗ್ರಾಮಸ್ಥ ರಮೇಶ್ ತಿಳಿಸಿದರು.
ಸಿದ್ದಾಪುರ ಮಾರುಕಟ್ಟೆ ಸಮೀಪ ಇದ್ದ ಸಾರ್ವಜನಿಕ ಶೌಚಗೃಹವನ್ನು ತೆರವುಗೊಳಿಸಿದ್ದು ಏಕೆ ಎಂದು ಸುಬ್ರಮಣಿ ಅಧ್ಯಕ್ಷರನ್ನು ಪ್ರಶ್ನಿಸಿದರು. ಈ ಸಂದರ್ಭ ಅವರನ್ನು ಪೊಲೀಸರು ಕೂರುವಂತೆ ತಿಳಿಸಿದಾಗ ಸಭೆಯಲ್ಲಿ ಗೊಂದಲದ ವಾತಾವರಣ ಸೃಷ್ಟಿಯಾಯಿತು. ನನ್ನ ಪ್ರಶ್ನೆಗೆ ಅಧ್ಯಕ್ಷರು ಏಕೆ ಉತ್ತರಿಸುತ್ತಿಲ್ಲ ಎಂದು ಹರಿಹಾಯ್ದರು. ಇದಕ್ಕೆ ಅಧ್ಯಕ್ಷರು ಉತ್ತರ ನೀಡಿದ್ದರಿಂದ ಸಭೆಯಲ್ಲಿ ಕಿರುಚಾಟ, ಕೂಗಾಟ ಪ್ರಾರಂಭವಾಗಿ ಗಂಭೀರ ಚರ್ಚೆಗೆ ಅವಕಾಶ ಇಲ್ಲದೇ ಅಂತ್ಯ ಕಂಡಿತು.

ಡಾ.ನವೀನ್‌ಕುಮಾರ್ ಸಭೆಯ ನೋಡಲ್ ಅಧಿಕಾರಿಯಾಗಿದ್ದರು. ಸೆಸ್ಕ್, ಆರೋಗ್ಯ, ಅರಣ್ಯ, ಕಂದಾಯ ಸೇರಿ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.

Stay connected

278,751FansLike
584FollowersFollow
622,000SubscribersSubscribe

ವಿಡಿಯೋ ನ್ಯೂಸ್

VIDEO: ಏರ್​ಪೋರ್ಟ್​ನಲ್ಲಿ ಬ್ಯಾಗೇಜ್​ಗಳ ಸಭ್ಯ ನಡತೆ ನೋಡಿ ಮನಸೋತ ನೆಟ್ಟಿಗರು;...

ಯಾವುದಾದರೂ ಕ್ಯೂದಲ್ಲಿ ನಿಂತರೂ ನೂಕುನುಗ್ಗಲು ಮಾಡುವ ಮನುಷ್ಯರಗಿಂತ ಈ ಬ್ಯಾಗೇಜ್​ಗಳು ಸಾವಿರ ಪಾಲು ಉತ್ತಮ ! ಅರೆ, ಇದೇನು? ಮನುಷ್ಯರಿಗೂ, ಬ್ಯಾಗೇಜ್​ಗಳಿಗೂ ಎಲ್ಲಿಯ ಹೋಲಿಕೆ ಎನ್ನುತ್ತೀರಾ? ಹಾಗಾದರೆ ಈ ಸುದ್ದಿ ಓದಿ, ವಿಡಿಯೋ ನೋಡಿದರೆ...

VIDEO| ಕೇಸ್ರಿಕ್ ವಿರುದ್ಧ ಸೇಡು ತೀರಿಸಿಕೊಂಡ ಕೊಹ್ಲಿ!

ಹೈದರಾಬಾದ್: ಮೊದಲ ಟಿ20 ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮೂಲಕ ಭಾರತ ತಂಡವನ್ನು ಗೆಲ್ಲಿಸಿದ ನಾಯಕ ವಿರಾಟ್ ಕೊಹ್ಲಿ, ಹಳೆಯ ಲೆಕ್ಕವೊಂದನ್ನೂ ಚುಕ್ತಾ ಮಾಡಿದರು. ಭಾರತದ ಚೇಸಿಂಗ್ ವೇಳೆ ಇನಿಂಗ್ಸ್​ನ 16ನೇ...

VIDEO| ವಿಚಾರಣೆಗೆಂದು ನ್ಯಾಯಾಲಯಕ್ಕೆ ಕರೆತಂದಿದ್ದ ಅತ್ಯಾಚಾರ ಆರೋಪಿಯ ಮೇಲೆ ಮುಗಿಬಿದ್ದ...

ಇಂದೋರ್​: ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿ ಮೇಲೆ ನ್ಯಾಯಾಲಯದ ಆವರಣದಲ್ಲೇ ವಕೀಲರ ಗುಂಪು ಹಲ್ಲೆ ನಡೆಸಲು ಯತ್ನಿಸಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ಶನಿವಾರ ನಡೆದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ...

ಸಶಸ್ತ್ರ ಪಡೆಗಳ ಧ್ವಜ ದಿನ; ಭೂ, ವಾಯು, ನೌಕಾ ಪಡೆಗಳ...

ನವದೆಹಲಿ: ಸಶಸ್ತ್ರ ಪಡೆಗಳ ಧ್ವಜ ದಿನವಾದ ಇಂದು ಪ್ರಧಾನಿ ನರೇಂದ್ರ ಮೋದಿಯವರು ಭೂ, ವಾಯು ಹಾಗೂ ನೌಕಾಪಡೆಗಳ ಸಿಬ್ಬಂದಿಗೆ ಶುಭಾಶಯ ತಿಳಿಸಿದರು. ಟ್ವೀಟ್​ ಮೂಲಕ ಶುಭ ಹಾರೈಸಿದ ಅವರು, ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆಯ...

ಇಂದಿನ ಬಿಗ್​ಬಾಸ್ ಕನ್ನಡ ​ಶೋನಲ್ಲಿ ಕಿಚ್ಚ ಸುದೀಪ್​ ಜತೆ ಇರಲಿದ್ದಾರೆ...

ಬೆಂಗಳೂರು: ಇಂದು ಬಿಗ್​ಬಾಸ್​ನ ವಾರದ ಕತೆ ಕಿಚ್ಚ ಸುದೀಪ್​ ಜತೆ ಎಪಿಸೋಡ್​ನಲ್ಲಿ ಬಾಲಿವುಡ್​ ನಟ ಸಲ್ಮಾನ್​ ಖಾನ್​ ಕೂಡ ಜತೆಯಾಗಲಿದ್ದಾರೆ !ಇದು ಕಿರುತೆರೆ ಇತಿಹಾಸದಲ್ಲಿಯೇ ಪ್ರಥಮ ಎನ್ನಲಾಗಿದ್ದು ಸದ್ಯ ಕಲರ್ಸ್​ ಕನ್ನಡ ಬಿಡುಗಡೆ...

VIDEO| ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯ ಜೀವ ಉಳಿಸಿದ ಯೋಧ:...

ಥಾಣೆ: ರೈಲ್ವೆ ರಕ್ಷಣಾ ಪಡೆಯ ಯೋಧರೊಬ್ಬರು ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯೊಬ್ಬನನ್ನು ರಕ್ಷಣೆ ಮಾಡುವ ಮೂಲಕ ಸಮಯಪ್ರಜ್ಞೆ ಮರೆದಿರುವ ಘಟನೆ ಮಹಾರಾಷ್ಟ್ರದ ಥಾಣೆ ರೈಲ್ವೆ ನಿಲ್ದಾಣದಲ್ಲಿ ಬುಧವಾರ ನಡೆದಿದ್ದು, ಇದಕ್ಕೆ...