ಪ್ರಧಾನಿ ನಮ್ಮ ಮೇಲೆ ಜೆಡಿಎಸ್​ನವರನ್ನು ಎತ್ತಿಕಟ್ಟುವ ಕೆಲಸ ಮಾಡ್ತಿದ್ದಾರೆ: ಸಿದ್ದರಾಮಯ್ಯ

ಹುಬ್ಬಳ್ಳಿ: ಪ್ರಧಾನಿ ನರೇಂದ್ರ ಮೋದಿ ಅವರು ಜೆಡಿಎಸ್​ನವರನ್ನು ನಮ್ಮ ವಿರುದ್ಧ ಎತ್ತಿಕಟ್ಟುವ ಕೆಲಸ ಮಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು ಇದು ಕಾಂಗ್ರೆಸ್​ ಮತ್ತು ಜೆಡಿಎಸ್​ಗೆ ಸಂಬಂಧಪಟ್ಟ ವಿಚಾರ. ಪ್ರಧಾನಿ ಮೋದಿ ಅವರಿಗೂ ಇದಕ್ಕೂ ಏನು ಸಂಬಂಧ. ಈ ಬಗ್ಗೆ ಮಾತಾಡೋದಕ್ಕೆ ಮೋದಿ ಅವರು ಯಾರು? ಜೆಡಿಎಸ್​-ಕಾಂಗ್ರೆಸ್​ ಮೈತ್ರಿಯಲ್ಲಿ ಮೋದಿ ಅವರು ಇದ್ದಾರಾ? ಪ್ರಧಾನಿಗೆ ಈ ವಿಷಯದಲ್ಲಿ ಯಾವುದೇ ಮಾಹಿತಿ ಇಲ್ಲ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ಸಿಎಂ ಕಿಡಿ

ಕರ್ನಾಟಕದ ಸಿಎಂ ರನ್ನು ಕಾಂಗ್ರೆಸ್​ ಕ್ಲರ್ಕ್​ ರೀತಿ ನಡೆಸಿಕೊಳ್ಳುತ್ತಿದೆ ಎಂದು ಮೋದಿ ತಮ್ಮ ಭಾಷಣದಲ್ಲಿ ತಿಳಿಸಿರುವುದಕ್ಕೆ ಟ್ವೀಟ್​ ಮೂಲಕ ಮುಖ್ಯಮಂತ್ರಿ ಎಚ್​.ಡಿ. ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದು, ಮೋದಿ ಅವರು ಎರಡನೇ ಬಾರಿ ತಪ್ಪು ಮಾಹಿತಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಈ ಹಿಂದೆ ರೈತರ ಸಾಲಮನ್ನಾ ಬಗ್ಗೆ ಸರಿಯಾದ ಮಾಹಿತಿ ಇಲ್ಲದೆ ಪ್ರತಿಕ್ರಿಯೆ ನೀಡಿದ್ದಾರೆ. ಈಗ ನಾನು ಹೇಳಿಕೆ ನೀಡದ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಈ ರೀತಿಯ ಹೇಳಿಕೆಗಳು ಮೈತ್ರಿ ಸರ್ಕಾರದ ಅಭಿವೃದ್ಧಿ ಕೆಲಸಗಳಿಗೆ ತಡೆ ನೀಡಲು ಸಾಧ್ಯವಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Leave a Reply

Your email address will not be published. Required fields are marked *