

ಬೆಂಗಳೂರು: ಕರೆಂಟ್ ಫ್ರೀ, ಬಸ್ ಫ್ರೀ ಅಂತ ಯೋಚನೆ ಮಾಡುತ್ತಿರುವ ಜನರಿಗೆ ಬೆನ್ನಲ್ಲೇ ಗ್ರಾಹಕರಿಗೆ ಹಾಲಿನ ದರ ಏರಿಕೆಯ ಬಿಸಿ ತಟ್ಟುವ ಸಾಧ್ಯತೆಯಿದೆ.
ಇದನ್ನೂ ಓದಿ: ಸೀಮಾ ಪಾಕ್ಗೆ ಮರಳದಿದ್ದರೆ ಮತ್ತೊಂದು ಮುಂಬೈ ಮಾದರಿ ದಾಳಿ: ಬೆದರಿಕೆ ಕರೆ, ಮುಂಬೈ ಪೊಲೀಸರು ಅಲರ್ಟ್
ಹಾಲಿನ ದರ ಏರಿಕೆ ಕುರಿತು ಕೆಎಂಎಫ್ ಅಧ್ಯಕ್ಷರು ಮತ್ತು ಹಾಲು ಒಕ್ಕೂಟದ ನಿಯೋಗದೊಂದಿಗೆ ಸಂಜೆ 5-30ಕ್ಕೆ ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಸಭೆ ನಡೆಸಲಿದ್ದು, ಲೀಟರ್ ಹಾಲಿಗೆ 5 ರೂ.ನಷ್ಟು ಹೆಚ್ಚಿಸಬೇಕೆಂಬ ಬೇಡಿಕೆಗೆ ಸಂಬಂಧಿಸಿದಂತೆ ಇಂದು ತೀರ್ಮಾನ ಕೈಗೊಳ್ಳುವ ಸಾಧ್ಯತೆಯಿದೆ. ಹೈನು ರಾಸುಗಳ ನಿರ್ವಹಣಾ ವೆಚ್ಚ, ಪಶು ಆಹಾರ ಉತ್ಪಾದನೆಗೆ ಬಳಸುವ ಮೆಕ್ಕೆಜೋಳ, ಅಕ್ಕಿ ತೌಡು, ಪದಾರ್ಥಗಳ ಬೆಲೆ ಹೆಚ್ಚಳ, ಪಶು ಆಹಾರದಲ್ಲಿ ಶೇ.30ಕ್ಕಿಂತಲೂ ಅಧಿಕ ಏರಿಕೆಯಾಗಿದೆ. ಹೀಗಾಗಿ ಹಾಲಿನ ದರ ಏರಿಕೆಯ ಬೇಡಿಕೆಯನ್ನು ಕೆಎಂಎಫ್ ಸಿಎಂ ಮುಂದಿಟ್ಟಿವೆ.
ಹಾಲಿನ ದರ ಪರಿಷ್ಕರಿಸಲು ಸರ್ಕಾರ ಮುಂದಾಗಿದೆ ಎನ್ನಲಾಗಿದ್ದು, ರಾಜ್ಯದಲ್ಲಿ ಕಳೆದ ಎರಡು ವರ್ಷದಿಂದ ಹಾಲಿದ ದರ ಪರಿಷ್ಕರಣೆ ಮಾಡಿಲ್ಲ. ಹೀಗಾಗಿ ರಾಜ್ಯದ 15 ಒಕ್ಕೂಟಗಳು ನಷ್ಟದ ಪರಿಸ್ಥಿತಿಯಲ್ಲಿವೆ ಎಂದು ಹೇಳಲಾಗಿದೆ. ಸದ್ಯ ಪ್ರತಿ ಲೀ ಟೋನ್ಡ್ ಹಾಲಿಗೆ 39 ರೂಪಾಯಿ ಇದೆ. ಇದರಲ್ಲಿ ಹಾಲು ಉತ್ಪಾದಕರ ಸಂಘಕ್ಕೆ 35.50 ಪೈಸೆ ಹೋಗುತ್ತಿದ್ದು, ಮಾರಾಟಗಾರರಿಗೆ ಪ್ರತಿ ಲೀ.ಗೆ 2 ರೂ ಕಮೀಷನ್ ನೀಡಲಾಗುತ್ತಿದೆ. ಬಾಕಿ ಅಂತರ ಕೇವಲ 1.50 ರೂ.ಇದ್ದು, ಇಷ್ಟು ಲಾಭದಿಂದ ವ್ಯವಹಾರ ಮಾಡಲು ಸಾಧ್ಯವಾಗುತ್ತಿಲ್ಲ ಎಂದು ಒಕ್ಕೂಟಗಳು ಹೇಳಿವೆ.
ಇದನ್ನೂ ಓದಿ: 45 ವರ್ಷಗಳ ಬಳಿಕ ದಿಲ್ಲಿಯಲ್ಲಿ ಯಮುನೆಯ ರುದ್ರನರ್ತನ; ಜನಜೀವನ ಸಂಪೂರ್ಣ ಅಸ್ತವ್ಯಸ್ತ
ಅಲ್ಲದೇ, ಪ್ರತಿದಿನ ಬೆಂಗಳೂರಿನಲ್ಲಿ 13 ಲಕ್ಷ ಲೀ ಹಾಲು ಮಾರಾಟವಾಗುತ್ತಿದ್ದು, ಇದಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ 15 ರಿಂದ 16 ಲಕ್ಷ ಪ್ರತಿನಿತ್ಯ ನಷ್ಟವಾಗುತ್ತಿದೆ. ಪ್ರತಿ ಲೀಟರ್ ಮಾರಾಟ ದರದ ಮೇಲೆ 5 ರುಪಾಯಿ ಹೆಚ್ಚಳ ಮಾಡಲು ಅವಕಾಶ ಕೊಡಬೇಕು. ಹೆಚ್ಚಳ ಮಾಡದಿದ್ದರೆ ಒಕ್ಕೂಟಗಳು ಸಾಲದ ಸುಳಿಯಲ್ಲಿ ಸಿಲುಕುತ್ತವೆ ಎಂದು ಒಕ್ಕೂಟಗಳು ತಿಳಿಸಿದ್ದು. ಈ ಬಾರಿ ಹಾಲಿನ ದರ ಪರಿಷ್ಕರಣೆ ಮಾಡುವಂತೆ ಒತ್ತಾಯ ಮಾಡುತ್ತಿವೆ.(ಏಜೆನ್ಸೀಸ್)