

ಮೈಸೂರು: ನಾವು ಯಾವುದೇ ಪಕ್ಷದಲ್ಲಿ ಇದ್ದರೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಮ್ಮ ನಾಯಕರು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್ ಹೇಳಿದರು.
ಸುತ್ತೂರು ಶ್ರೀ ಕ್ಷೇತ್ರದಲ್ಲಿ ಮಂಗಳವಾರ ಆಯೋಜಿಸಿದ್ದ "ಮಾಸಿಕ ಸಾಮೂಹಿಕ ವಿವಾಹ-95' ಕಾರ್ಯಕ್ರಮದಲ್ಲಿ ಪಾಲ್ಗೊಂಡ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಸಿದ್ದರಾಮಯ್ಯ ನಮ್ಮ ಹಳೇ ನಾಯಕರು. ಕಾಂಗ್ರೆಸ್ ಬಿಟ್ಟ ಮೇಲೆ ಸಿದ್ದರಾಮಯ್ಯರ ಜತೆ ಮೊದಲ ಬಾರಿಗೆ ವೇದಿಕೆ ಹಂಚಿಕೊಂಡಿದ್ದೇನೆ. ಬಹಳ ಸಂತೋಷದಿಂದ ಮಾತನಾಡಿಸಿದರು ಎಂದರು. ಇದನ್ನೂ ಓದಿರಿ ಕಾಂಗ್ರೆಸ್ನ ಹಿರಿಯ ನಾಯಕ ಮತ್ತು ಅವರ ಪುತ್ರನಿಗೆ ಬೆದರಿಕೆ ಕರೆ!