ಬೆಂಗಳೂರು: ವಕ್ಫ್ ಆಸ್ತಿಗಳ ಸಂರಕ್ಷಣೆ ಹಾಗೂ ಅಭಿವೃದ್ಧಿಗೆ 100 ಕೋಟಿ ರೂ ಮೀಸಲಿಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಬಜೆಟ್ ಭಾಷಣದಲ್ಲಿ ಘೋಷಿಸಿದ್ದಾರೆ.
ಇಂದು ದಾಖಲೆಯ 15ನೇ ಬಜೆಟ್ ಮಂಡಿಸಿದ ಸಿಎಂ ಸಿದ್ದರಾಮಯ್ಯ, ಜೈನ್ ಅಭಿವೃದ್ಧಿಗಾಗಿ 50 ಕೋಟಿ ರೂಪಾಯಿ ಅನುದಾನ ನೀಡಲಾಗುವುದು ಎಂದು ತಿಳಿಸಿದ್ದಾರೆ.
ಇದನ್ನೂ ಓದಿ: ನಟ ದರ್ಶನ್ ಹುಟ್ಟುಹಬ್ಬಕ್ಕೆ ಟ್ರ್ಯಾಕ್ಟರ್ ಗಿಫ್ಟ್ ಕೊಟ್ಟ ಅಭಿಮಾನಿಗಳು
ವಕ್ಫ್ ಆಸ್ತಿಗಳ ಸಂರಕ್ಷಣೆ ಹಾಗೂ ಅಭಿವೃದ್ಧಿಗೆ 100 ಕೋಟಿ ರೂ., ಜೈನ್ ಅಭಿವೃದ್ಧಿಗಾಗಿ 50 ಕೋಟಿ ರೂ. ಅನುದಾನ, ಕ್ರಿಶ್ಚಿಯನ್ ಸಮುದಾಯದ ಅಭಿವೃದ್ಧಿಗೆ 200 ಕೋಟಿ ರೂ. ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ನಿಗಮಗಳಿಂದ 2024-25ನೇ ವರ್ಷದಲ್ಲಿ ಒಟ್ಟಾರೆಯಾಗಿ 1,600 ಕೋಟಿ ರೂ.ಗಳ ಕಾರ್ಯಕ್ರಮಗಳನ್ನು ರೂಪಿಸಿ ಅನುಷ್ಠಾನಗೊಳಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಮ್ಮ ಬಜೆಟ್ ಭಾಷಣದ ವೇಳೆ ಘೋಷಿಸಿದ್ದಾರೆ.