More

    ಸಿದ್ದರಾಮಯ್ಯರಿಂದ ಬದ್ಧತೆ ಕಾರ್ಯ- ಶಾಸಕ ಬಸವರಾಜ ರಾಯರಡ್ಡಿ ಹೇಳಿಕೆ

    ಯಲಬುರ್ಗಾ: ರಾಜ್ಯದ ಮಹಿಳೆಯರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಕಾಂಗ್ರೆಸ್ ಸರ್ಕಾರ ಐದು ಗ್ಯಾರಂಟಿ ಯೋಜನೆಗಳ ಪೈಕಿ ಶಕ್ತಿ ಯೋಜನೆ ಮೂಲಕ ರಾಜ್ಯದೆಲ್ಲೆಡೆ ಸಂಚರಿಸಲು ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಕಲ್ಪಿಸಿದೆ ಎಂದು ಶಾಸಕ ಬಸವರಾಜ ರಾಯರಡ್ಡಿ ಹೇಳಿದರು.

    ಇದನ್ನೂ ಓದಿ: ಜೂ. 11ರಂದು ಶಕ್ತಿ ಯೋಜನೆಗೆ ಚಾಲನೆ: ಬಸ್ ಕಂಡಕ್ಟರ್ ಆಗಲಿದ್ದಾರೆ ಸಿಎಂ ಸಿದ್ದರಾಮಯ್ಯ!

    ಪಟ್ಟಣದ ಸಾರಿಗೆ ಬಸ್ ನಿಲ್ದಾಣದ ವೀಕ್ಷಣೆ ಹಾಗೂ ಶಕ್ತಿ ಗ್ಯಾರಂಟಿ ಯೋಜನೆ ಚಾಲನೆ ಕುರಿತು ಪೂರ್ವಭಾವಿ ಸಭೆ ನಡೆಸಿ ಮಾತನಾಡಿದರು. ಚುನಾವಣೆ ಪೂರ್ವದಲ್ಲಿ ರಾಜ್ಯ ಕಾಂಗ್ರೆಸ್ ಮತದಾರರಿಗೆ ಪ್ರಣಾಳಿಕೆಯಲ್ಲಿ ಐದು ಯೋಜನೆ ಈಡೇರಿಸುವ ಭರವಸೆ ನೀಡಿತ್ತು. ಅದರಂತೆ ಅವುಗಳ ಅನುಷ್ಠಾನಕ್ಕೆ ತರುವಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬದ್ಧತೆಯಿಂದ ಕೆಲಸ ಮಾಡುತ್ತಿದ್ದಾರೆ.

    ಮೊದಲನೆಯದಾಗಿ ಜೂ.11 ರಂದು ಸಾಂಕೇತಿಕವಾಗಿ ಪಟ್ಟಣದ ಬಸ್ ನಿಲ್ದಾಣದಲ್ಲಿ ಯಲಬುರ್ಗಾದಿಂದ ಧರ್ಮಸ್ಥಳಕ್ಕೆ ಮಹಿಳೆಯರು ಉಚಿತವಾಗಿ ಪ್ರಯಾಣ ಕೈಗೊಳ್ಳಲು ಚಾಲನೆ ನೀಡಲಾಗುವುದು. ಈ ಕಾರ್ಯಕ್ರಮ ರಾಜ್ಯಾದ್ಯಂತ ಏಕಕಾಲಕ್ಕೆ ಆರಂಭವಾಗಲಿದೆ. ರಾಜ್ಯದ 3.50 ಕೋಟಿ ಮಹಿಳೆಯರಿಗೆ ಯೋಜನೆ ಅನುಕೂಲವಾಗಲಿದೆ. ತೃತೀಯ ಲಿಂಗಿಗಳಿಗೂ ಇದು ಅನ್ವಯವಾಗಲಿದೆ. ಮಹಿಳೆಯರು ಇದನ್ನು ಸದುಪಯೋಗ ಪಡೆಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

    ವಿಭಾಗೀಯ ಸಂಚಲನಾಧಿಕಾರಿ ಆರ್.ಬಿ.ಜಾದವ್ ಮಾತನಾಡಿ, ರಾಜ್ಯ ಸರ್ಕಾರ ಮಹಿಳೆಯರಿಗಾಗಿ ಘೋಷಿಸಿರುವ ಶಕ್ತಿ ಯೋಜನೆ ಅನುಷ್ಠಾನಗೊಳ್ಳಲಿದ್ದು, ರಾಜ್ಯದ ನಾನಾ ಭಾಗಗಳಲ್ಲಿ ಮಹಿಳೆಯರು ಉಚಿತವಾಗಿ ಪ್ರಯಾಣಿಸಬಹುದು. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಆಯ್ದ ಗುರುತಿನ ಚೀಟಿ ತೋರಿಸಿ ಪ್ರಯಾಣ ಬೆಳೆಸಬಹುದು. ಸರ್ಕಾರ ಮೂರು ತಿಂಗಳ ಬಳಿಕ ಸ್ಮಾರ್ಟ್‌ಕಾರ್ಡ್ ವಿತರಿಸಲಿದೆ ಎಂದರು.

    ತಹಸೀಲ್ದಾರ್ ವಿಠ್ಠಲ್ ಚೌಗಲೆ, ಘಟಕ ವ್ಯವಸ್ಥಾಪಕರಾದ ರಮೇಶ ಚಿಣಗಿ, ಸುನಿಲ್ ಹೈದ್ರಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಸವರಾಜ ಉಳ್ಳಾಗಡ್ಡಿ, ಪ್ರಮುಖರಾದ ಶರಣಪ್ಪ ಗಾಂಜಿ, ಶಿವನಗೌಡ ದಾನರಡ್ಡಿ, ಕೆರಿಬಸಪ್ಪ ನಿಡಗುಂದಿ, ಸುಧೀರ ಕೊರ್ಲಹಳ್ಳಿ, ಹನುಮಂತಪ್ಪ ಭಜಂತ್ರಿ, ರಿಯಾಜ್ ಅಹ್ಮದ್‌ಖಾಜಿ, ಎಂ.ಎಫ್.ನದಫ್, ಶರಣಗೌಡ ಬಸಾಪುರ, ಕಳಕೇಶ ಸೂಡಿ, ಇಮಾಮ್ ಗುಳೇದಗುಡ್ಡ, ಪುನೀತ ಕೊಪ್ಪಳ, ಹುಲಗಪ್ಪ ಬಂಡಿವಡ್ಡರ್ ಸೇರಿದಂತೆ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts