ಮೇಲ್ವರ್ಗದ ಬಡವರಿಗೆ ಮೀಸಲಾತಿ ಬಿಜೆಪಿ ಚುನಾವಣಾ ಗಿಮಿಕ್: ಮಾಜಿ ಸಿಎಂ ಸಿದ್ದರಾಮಯ್ಯ

ಮೈಸೂರು: ಮೇಲ್ವರ್ಗದವರಿಗೆ ಶೇ.10ರಷ್ಟು ಮೀಸಲಾತಿ ನೀಡಬೇಕೆಂಬ ಮಸೂದೆ ಮಂಡನೆ ಮಾಡಿರುವುದು ಬಿಜೆಪಿಯ ಚುನಾವಣಾ ಗಿಮಿಕ್ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಟೀಕಾ ಪ್ರಹಾರ ನಡೆಸಿದರು.

ಮೈಸೂರಿನಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮೇಲ್ವರ್ಗದ ಬಡವರಿಗೆ ಮೀಸಲಾತಿ ನೀಡಬೇಕೆನ್ನುವುದು ಸ್ವಾಗತಾರ್ಹ ವಿಚಾರ. ಆದರೆ, ಮೀಸಲಾತಿಯನ್ನು ವಿರೋಧಿಸುತ್ತಿದ್ದ ಬಿಜೆಪಿಯವರೇ ಮೀಸಲಾತಿ ಕುರಿತು ಮಸೂದೆ ಮಂಡನೆಗೆ ಮುಂದಾಗಿರುವುದು ಕೇವಲ ಚುನಾವಣಾ ಗಿಮಿಕ್ ಎಂದು ವ್ಯಂಗ್ಯವಾಡಿದರು.

ಸಚಿವ ಸಿ. ಪುಟ್ಟರಂಗಶೆಟ್ಟಿ ಟೈಪಿಸ್ಟ್ ಬಳಿ ಹಣ ಸಿಕ್ಕ ವಿಚಾರವಾಗಿ ಪ್ರತಿಕ್ರಿಯಿಸಿ, ಪ್ರಕರಣ ಎಸಿಬಿಯಲ್ಲಿ ತನಿಖೆ ಆಗುತ್ತಿದೆ. ತನಿಖೆ ಮುಗಿದು ವರದಿ ಬರಲಿ. ನಂತರ ಆ ಬಗ್ಗೆ ಮಾತನಾಡುತ್ತೇನೆ ಎಂದು ಹೇಳಿದರು. (ದಿಗ್ವಿಜಯ ನ್ಯೂಸ್​)

One Reply to “ಮೇಲ್ವರ್ಗದ ಬಡವರಿಗೆ ಮೀಸಲಾತಿ ಬಿಜೆಪಿ ಚುನಾವಣಾ ಗಿಮಿಕ್: ಮಾಜಿ ಸಿಎಂ ಸಿದ್ದರಾಮಯ್ಯ”

  1. Siddu himself is a gimmick. Neechananthe vartisabeda. Neenu tippu jayanthi maduvaga gimmick enndu ninage enisalilavve

Comments are closed.