More

    ಸೋಲಬಾರದೆಂಬ ಕಾರಣಕ್ಕೆ ಸಿದ್ದರಾಮಯ್ಯ ಅವರಿಗೆ ಎರಡು ಕಡೆ ಕಾಂಗ್ರೆಸ್ ಟಿಕೆಟ್

    ತುಮಕೂರು: ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸುವ ಪರಿಸ್ಥಿತಿ ನಮಗ್ಯಾರಿಗೂ ಬಂದಿಲ್ಲ, ಹಿರಿಯ ಮುಖಂಡರು ಯಾವ ಕಾರಣಕ್ಕೂ ಸೋಲಬಾರದು ಎಂಬ ಕಾರಣಕ್ಕೆ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಅವಕಾಶ ನೀಡಿದೆ ಎಂದು ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ್ ಪ್ರತಿಕ್ರಿಯಿಸಿದರು.


    ನಗರದಲ್ಲಿ ಸೋಮವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಎರಡೂ ಕಡೆ ಸ್ಪರ್ಧಿಸುವ ಅನಿವಾರ್ಯತೆ ನನಗಾಗಲಿ ಅಥವಾ ಶಿವಕುಮಾರ್ ಅವರಿಗಾಗಲಿ ಬಂದಿಲ್ಲ. ಆದರೆ, ರಾಜ್ಯದಲ್ಲಿ ಸಿಎಂ ಆಗಿ ಕೆಲಸ ಮಾಡಿದವರಿಗೆ ತೊಂದರೆಯಾಗಬಾರದು ಎಂದು ಅವರಿಗೆ ಆ ಸನ್ನಿವೇಶ ನಿರ್ಮಾಣವಾಗಿದೆ ಎಂದರು.


    ಸೋಲುವ ಭೀತಿಯಿಂದ ಎರಡೂ ಕ್ಷೇತ್ರದಲ್ಲಿ ಸ್ಪರ್ಧಿಸುತ್ತಿಲ್ಲ, ಸಿದ್ದರಾಮಯ್ಯ ಮತ ಪ್ರಚಾರಕ್ಕೆ ರಾಜ್ಯ ಸುತ್ತಬೇಕಿದ್ದು ಬಾದಾಮಿ ಕ್ಷೇತ್ರ ದೂರವಾಗುತ್ತದೆ ಎಂಬ ಕಾರಣಕ್ಕೆ ಕೋಲಾರ ಕ್ಷೇತ್ರದಲ್ಲಿ ಸ್ಫರ್ಧಿಸಲು ಸಿದ್ಧತೆ ಮಾಡಿಕೊಂಡಿದ್ದರು, ನಂತರ ವರುಣಾದಲ್ಲಿಯೂ ಒತ್ತಡ ಬಂದಿರುವ ಹಿನ್ನೆಲೆಯಲ್ಲಿ ಮೊದಲ ಪಟ್ಟಿಯಲ್ಲಿ ಟಿಕೆಟ್ ಘೋಷಣೆಯಾಗಿದೆ ಎಂದರು.


    ವರುಣಾ ಕ್ಷೇತ್ರದ ಜತೆಗೆ ಕೋಲಾರದಲ್ಲಿಯೂ ಸ್ಪರ್ಧೆ ಮಾಡಬೇಕು ಎಂದು ಮತ್ತೆ ಮುಖಂಡರಿಂದ ಒತ್ತಡ ಬಂದಿರುವ ಹಿನ್ನೆಲೆಯಲ್ಲಿ ಎರಡೂ ಕಡೆ ಸ್ಪರ್ಧಿಸುವ ಬಗ್ಗೆ ಸಿದ್ದರಾಮಯ್ಯ ಅವರೇ ಮಾತನಾಡಿದ್ದಾರೆ, ಹೈಕಮಾಂಡ್ ನಿರ್ಧಾರಕ್ಕೆ ನಮ್ಮ ಪಕ್ಷದಲ್ಲಿ ಯಾರೂ ವಿರೋಧ ವ್ಯಕ್ತಪಡಿಸುವುದಿಲ್ಲ ಎಂದರು.
    ಸಿದ್ದರಾಮಯ್ಯ ಅವರ ಸ್ಪರ್ಧೆಯಿಂದ ಸುತ್ತಮುತ್ತಲ ಕ್ಷೇತ್ರದಲ್ಲಿ ಪಕ್ಷದ ಅಭ್ಯರ್ಥಿಗಳಿಗೆ ಅನುಕೂಲವಾಗಲಿದೆ ಎಂಬ ಕಾರಣಕ್ಕೆ ಒತ್ತಡ ಸಹಜವಾಗಿದ್ದು (ಇಂದು) ಏ.4ರಂದು ಕೇಂದ್ರ ಚುನಾವಣಾ ಸಮಿತಿಯಲ್ಲಿ ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದರು.


    ಚುನಾವಣೆಗಳಲ್ಲಿ ಬಳಸುತ್ತಿರುವ ಇವಿಎಂ ಬಗ್ಗೆ ಮೊದಲಿನಿಂದಲೂ ಅನುಮಾನವಿದೆ, ದೇಶದ ಎಲ್ಲ ರಾಜಕೀಯ ಪಕ್ಷಗಳಿಗೂ ಈ ಬಗ್ಗೆ ಅನುಮಾನವಿದ್ದು ನಮ್ಮ ದೂರುಗಳನ್ನು ಚುನಾವಣಾ ಆಯೋಗ ಪದೇಪದೆ ವಜಾಗೊಳಿಸಿದೆ ಎಂದರು.


    ಇವಿಎಂ ದುರ್ಬಳಕೆ ಸಾಧ್ಯ ಎಂದು ಸಾಕಷ್ಟು ತಂತ್ರಜ್ಞರು ಹೇಳುತ್ತಲೇ ಇದ್ದಾರೆ. ಆದರೆ, ಎಲೆಕ್ಷನ್ ಕಮಿಷನ್ ಇದನ್ನು ಒಪ್ಪುತ್ತಿಲ್ಲ. ಹಾಗಾಗಿ, ನಾವೂ ಬೇರೆ ದಾರಿ ಇಲ್ಲದೆ ಒಪ್ಪಿಕೊಳ್ಳುವಂತಾಗಿದೆ ಎಂದರು.


    ಬಿಜೆಪಿ, ಜೆಡಿಎಸ್ ತೊರೆದು ಕಾಂಗ್ರೆಸ್ ಸೇರ್ಪಡೆಯಾಗುವವರನ್ನು ಸ್ವಾಗತಿಸಿದ್ದೇವೆ, ಕಾಂಗ್ರೆಸ್ ಅಧಿಕಾರಕ್ಕೇರಲಿದೆ ಎಂಬ ಸೂಚನೆ ಹಿನ್ನೆಲೆಯಲ್ಲಿ ಹೆಚ್ಚು ಜನರು ಪಕ್ಷಕ್ಕೆ ಬರುತ್ತಿದ್ದಾರೆ. ಸಿದ್ದರಾಮಯ್ಯ ಅವರೇ ಜೆಡಿಎಸ್‌ನಿಂದ ಬಂದಿದ್ದು ಕಾಂಗ್ರೆಸ್‌ನವರಾಗಿದ್ದಾರೆ. | ಡಾ.ಜಿ.ಪರಮೇಶ್ವರ್, ಮಾಜಿ ಡಿಸಿಎಂ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts