ನನಗೆ ಈಗಲೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ!

ದಾವಣಗೆರೆ: ಜೆಡಿಎಸ್‌-ಕಾಂಗ್ರೆಸ್‌ ಮೈತ್ರಿ ಸರ್ಕಾರದಲ್ಲಿ ಮುಖ್ಯಮಂತ್ರಿಯಾಗಿ ಎಚ್‌.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿರುವುದು ಎಲ್ಲರಿಗೂ ಹಳೇ ಸುದ್ದಿ. ಆದರೆ ಈಗಲೂ ನನಗೆ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ ಎಂದು ಸಚಿವ ಪುಟ್ಟರಂಗಶೆಟ್ಟಿ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಚ್​​ಡಿಕೆ ಸಿಎಂ ಆಗಿದ್ರೂ ನನಗೆ ಈಗಲೂ ಸಿದ್ದರಾಮಯ್ಯ ಅವರೇ ಸಿಎಂ. ಸಿದ್ದರಾಮಯ್ಯ ಟಿಕೆಟ್ ಕೊಟ್ಟು ನನ್ನನ್ನು ಗೆಲ್ಲಿಸಿದರು. ಉಪ್ಪಾರ ಜನಾಂಗಕ್ಕೆ ಸಿದ್ದರಾಮಯ್ಯ ಅವರು ಹಲವು ಸೌಲಭ್ಯ ಕಲ್ಪಿಸಿದ್ದಾರೆ ಎಂದು ಹೇಳಿದರು.

ನಾನು ಜಿಪಂ ಅಧ್ಯಕ್ಷನಾದರೆ ಸಾಕು ಎಂದುಕೊಂಡಿದ್ದೆ. ಆದರೆ ಸಚಿವನಾಗಿ ಮಾಡಿದ ಕೀರ್ತಿ ಸಿದ್ದರಾಮಯ್ಯರಿಗೆ ಸಲ್ಲುತ್ತದೆ. ಹಿಂದುಳಿದ ಜನಾಂಗದವರು ಮುಂದುವರಿಯುತ್ತಿರುವುದಕ್ಕೆ ಹಿಂದುಳಿದ ವರ್ಗಗಳ ಮುಖ್ಯಮಂತ್ರಿಗಳೇ ಕಾರಣ ಎಂದು ಹಿಂದುಳಿದ ವರ್ಗಗಳ ಇಲಾಖೆ ಸಚಿವ ಪುಟ್ಟರಂಗಶೆಟ್ಟಿ ಹೇಳಿದ್ದಾರೆ.