More

    ನಾನು ಕ್ಷೇತ್ರ ಹುಡುಕುತ್ತಿಲ್ಲ… ನಮ್ಮ ಕ್ಷೇತ್ರಕ್ಕೆ ಬನ್ನಿ ಎಂದು ಆಹ್ವಾನಿಸುತ್ತಿರುವವರ ಸಂಖ್ಯೆ ಹೆಚ್ಚಾಗಿದೆಯಷ್ಟೇ; ಸಿದ್ದರಾಮಯ್ಯ

    ಮೈಸೂರು: ನಾಳೆ ಒಂದೇ ಹೆಸರು ಇರುವ ಕ್ಷೇತ್ರಗಳ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗುತ್ತಿದೆ. ಅದರಲ್ಲಿ ನನ್ನ ಹೆಸರು ಇರುತ್ತದೆಯೋ, ಇಲ್ಲವೋ ಗೊತ್ತಿಲ್ಲ. ವರುಣ ಕ್ಷೇತ್ರದಿಂದ ಯತೀಂದ್ರ ಹೆಸರು ಅಂತಿಮವಾಗಿದೆ. ಆದರೆ ಹೈಕಮಾಂಡ್ ಏನು ಮಾಡುತ್ತೋ ಗೊತ್ತಿಲ್ಲ. ನಾನು ಎಲ್ಲಾ ಆಯ್ಕೆಯನ್ನು ಹೈಕಮಾಂಡ್​ಗೆ ಬಿಟ್ಟಿದ್ದೇನೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

    ಇದನ್ನೂ ಓದಿ: ಈ ದೇಶದಲ್ಲಿ ಇನ್ಮುಂದೆ ಮಕ್ಕಳ ಫೋಟೋಗಳನ್ನು ಜಾಲತಾಣಗಳಲ್ಲಿ ಶೇರ್ ಮಾಡಬಾರದಂತೆ!

    ಹೈಕಮಾಂಡ್ ನಿರ್ಧಾರವೇ ನನ್ನ ನಿರ್ಧಾರ. ನಾನು ಎಲ್ಲೇ ಸ್ಪರ್ಧೆಸಿದರು ಗೆಲ್ಲುವ ವಿಶ್ವಾಸ ಇದೆ. ನಾನು ಕ್ಷೇತ್ರಗಳನ್ನು ಹುಡುಕುತ್ತಿಲ್ಲ. ನನನ್ನು ಈ ಕ್ಷೇತ್ರಕ್ಕೆ ಬನ್ನಿ ಎಂದು ಕರೆಯುವವರ ಸಂಖ್ಯೆ ಹೆಚ್ಚಾಗಿದೆ ಅಷ್ಟೇ.ನಾನು ಕ್ಷೇತ್ರ ಹುಡಿಕುತ್ತಿದ್ದೇನೆ ಎಂಬುದೆಲ್ಲಾ ತಪ್ಪು ಗ್ರಹಿಕೆ. ಕ್ಷೇತ್ರ ಕೂತುಹಲಕ್ಕೆ ನಾಳೆ ಅಥವಾ ನಾಡಿದ್ದು ಬೀಳಬಹುದು. ಅದು ಹೈಕಮಾಂಡ್​ಗೆ ಬಿಟ್ಟ ವಿಚಾರ ಎಂದು ಹೇಳಿದರು.

    ಇದೇ ವೇಳೆ ರಾಜ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಬರುತ್ತಿರುವ ವಿಚಾರದ ಬಗ್ಗೆ ಪ್ರತಿಕ್ರಿಯಿಸಿ, ಅಡುಗೆ ಮಾಡಿದ್ದು ನಾವು, ಅದನ್ನು ಬಡಿಸಲು ಈಗ ಪ್ರಧಾನಿ ಬರುತ್ತಿದ್ದಾರೆ ಅಷ್ಟೇ. ಬೆಕ್ಕು ಕಣ್ಣು ಮುಚ್ಚಿಕೊಂಡು ಹಾಲು ಕುಡಿದರೆ ಜಗತ್ತೆ ಕಣ್ಣು ಮುಚ್ಚಿಕೊಂಡಂತೆ ಆಗುವುದಿಲ್ಲ. ಪ್ರಧಾನಿ ಮಾತುಗಳೆನ್ನೆಲ್ಲ ಜನ ನಂಬುವುದಿಲ್ಲ. ದಶಪಥ ರಸ್ತೆ ಮಾಡಿದ್ದು ನಾವು, ಐಐಟಿಗ ಜಾಗ ಕೊಟ್ಟು ಗುದ್ದಲಿ ಪೂಜೆ ಮಾಡಿದ್ದು ನಾನು. ಇವರು ಈಗ ಬರಿ ಉದ್ಘಾಟನೆಗೆ ಬರುತ್ತಿದ್ದಾರೆ. ಇದು ಜನರಿಗೆ ಅರ್ಥವಾಗುತ್ತದೆ ಬಿಡಿ ಎಂದು ಸಿದ್ದರಾಮಯ್ಯ ಹೇಳಿದರು. ಇದನ್ನೂ ಓದಿ: ಐಫೋನ್ ಬಳಕೆದಾರರೇ ಎಚ್ಚರ; ನಿಮ್ಮ ಬೆಲೆಬಾಳುವ ಫೋನ್​ಗಳೇ ಇವರ ಟಾರ್ಗೆಟ್

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts