25.9 C
Bengaluru
Wednesday, January 22, 2020

ಸಿದ್ದರಾಮಯ್ಯ ವಿದೇಶಕ್ಕೆ ದೋಸ್ತಿಗಳು ಸಂಕಷ್ಟಕ್ಕೆ!

Latest News

ಆರೋಪಿ ಆದಿತ್ಯರಾವ್​ನನ್ನು ಮಾನಸಿಕ ಅಸ್ವಸ್ಥ ಎಂದು ಹೇಳಿಲ್ಲ: ಗೃಹ ಸಚಿವ ಬಸವರಾಜ ಬೊಮ್ಮಾಯಿ

ಹುಬ್ಬಳ್ಳಿ: ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್​ ಇಟ್ಟಿದ್ದ ಆರೋಪಿ ಆದಿತ್ಯರಾವ್​ನನ್ನು ಮಾನಸಿಕ ಅಸ್ವಸ್ಥ ಎಂದು ಹೇಳಿಕೆ ನೀಡಿದ್ದ ಗೃಹ ಸಚಿವ ಬಸವರಾಜ ಬೊಮ್ಮಾಯಿ...

ತಾಪಂ ಆಡಳಿತ ಶೀಘ್ರ ಕಾರ್ಯಾರಂಭ

ಅಜ್ಜಂಪುರ: ತಾಪಂ ಆಡಳಿತ ಕಾರ್ಯ ಶೀಘ್ರ ಆರಂಭಿಸಲಾಗುವುದು. ಇದಕ್ಕೆ ಪೂರಕವಾಗಿ ಅಜ್ಜಂಪುರ ವ್ಯಾಪ್ತಿಯ ತಾಲೂಕು ಪಂಚಾಯಿತಿ ಸದಸ್ಯರನ್ನು ತರೀಕೆರೆಯಿಂದ ಪ್ರತ್ಯೇಕಿಸುವ ಕಾರ್ಯ ಪ್ರಗತಿಯಲ್ಲಿದೆ...

ಪ್ರಮುಖ ಸ್ಥಳಗಳಲ್ಲಿ ಪೊಲೀಸ್ ಬಿಗಿ ಭದ್ರತೆ

ಚಿಕ್ಕಮಗಳೂರು: ಮಂಗಳೂರಿನಲ್ಲಿ ಬಾಂಬ್ ಪತ್ತೆಯಾದ ಘಟನೆ ಹಿನ್ನೆಲೆಯಲ್ಲಿ ಪ್ರಮುಖ ಧಾರ್ವಿುಕ ಕ್ಷೇತ್ರಗಳಾದ ಶೃಂಗೇರಿ, ಹೊರನಾಡು, ಬಾಬಾಬುಡನ್​ಗಿರಿ, ಮುಳ್ಳಯ್ಯನಗಿರಿ, ಭದ್ರಾ ಅಣೆಕಟ್ಟೆ ಪ್ರದೇಶದಲ್ಲಿ ಪೊಲೀಸ್...

ದೊರೆತ ಉದ್ಯೋಗದಲ್ಲೇ ನಿಷ್ಠೆ ತೋರಿ: ಉದ್ಯೋಗ ಮೇಳದಲ್ಲಿ ಅಭ್ಯರ್ಥಿಗಳಿಗೆ ಶಾಸಕ ಎಸ್.ವಿ ರಾಮಚಂದ್ರ ಸಲಹೆ

ಜಗಳೂರು: ಸರ್ಕಾರಿ ಕೆಲಸಕ್ಕೆ ಅಲಂಬಿತರಾಗದೇ ಸಿಕ್ಕ ಉದ್ಯೋಗವನ್ನು ನಿಷ್ಠೆಯಿಂದ ಮಾಡಿದರೆ ಮುಂದೆ ಅವಕಾಶದ ಬಾಗಿಲುಗಳು ತೆರೆಯುತ್ತವೆ ಎಂದು ಶಾಸಕ ಎಸ್.ವಿ. ರಾಮಚಂದ್ರ ಹೇಳಿದರು. ಇಲ್ಲಿನ...

ಕೋತಿ ಹಾವಳಿಗೆ ಹಣ್ಣಿನ ಗಿಡ ಮದ್ದು

ಚಿಕ್ಕಮಗಳೂರು: ಕಡೂರಿನ ಹಲವೆಡೆ ತಲೆದೋರಿರುವ ಮಂಗಗಳ ಹಾವಳಿ ತಡೆಗೆ ಗ್ರಾಮಗಳ ಹೊರಭಾಗದಲ್ಲಿ ಹಣ್ಣಿನ ಸಸಿಗಳನ್ನು ನೆಟ್ಟು ಬೆಳೆಸುವ ಮೂಲಕ ಅವುಗಳನ್ನು ಆಕರ್ಷಿಸಬಹುದು. ಈ...

ಬೆಂಗಳೂರು: ದೋಸ್ತಿ ಸರ್ಕಾರ ಕೆಡವಲು ಪ್ರತಿಪಕ್ಷ ಬಿಜೆಪಿ ಕಾರ್ಯತಂತ್ರ ರೂಪಿಸುತ್ತಿರುವ ನಡುವೆ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ದಿಢೀರ್ ವಿದೇಶ ಪ್ರವಾಸ ಹೊರಟಿರುವುದು ಮಿತ್ರಪಕ್ಷಗಳಲ್ಲಿ ಆತಂಕದ ಕಾಮೋಡ ಕವಿಯುವಂತೆ ಮಾಡಿದೆ.

ಸಿದ್ದರಾಮಯ್ಯ ಅಧಿವೇಶನ ಆರಂಭ ದಿನದಂದೇ ಆಪ್ತರೊಬ್ಬರ ಕುಟುಂಬದ ಮದುವೆಯಲ್ಲಿ ಭಾಗಿಯಾಗಲು ಮಲೇಷ್ಯಾ ಪ್ರವಾಸಕ್ಕೆ ತೆರಳುತ್ತಿದ್ದು, ಶುಕ್ರವಾರ ವಾಪಸ್ ಬರುತ್ತಾರೆ. ಇದರಿಂದಾಗಿ ಮೊದಲ ವಾರ ಅಧಿವೇಶನಕ್ಕೆ ಗೈರಾಗಲಿದ್ದಾರೆ. ಡಿ.17ರಿಂದ ಐದು ದಿನಗಳ ಕಾಲ ಅಧಿವೇಶನದಲ್ಲಿ ಭಾಗವಹಿಸುತ್ತಿದ್ದಾರೆ.

ಶಾಸಕರನ್ನು ಸೆಳೆಯುವ ಮೂಲಕ ಸಮ್ಮಿಶ್ರ ಸರ್ಕಾರ ಬೀಳಿಸಲು ಬಿಜೆಪಿ ಸಾಕಷ್ಟು ಪ್ರಯತ್ನ ನಡೆಸಿದೆ ಎಂಬ ಮಾತನ್ನು ಮಿತ್ರ ಪಕ್ಷಗಳ ಮುಖಂಡರೇ ಹೇಳುತ್ತಿದ್ದಾರೆ. ಕಾಂಗ್ರೆಸ್ ಶಾಸಕರು ಅತೃಪ್ತಿ ಹೊರ ಹಾಕಿದಾಗಲೆಲ್ಲ ಅವರನ್ನು ಸಮಾಧಾನ ಮಾಡುವ ಜವಾಬ್ದಾರಿಯನ್ನು ಸಿದ್ದರಾಮಯ್ಯ ನಿರ್ವಹಿಸಿದ್ದಾರೆ. ಬೆಳಗಾವಿ ಅಧಿವೇಶನ ಸಂದರ್ಭದಲ್ಲಿ ಕಾಂಗ್ರೆಸ್​ನ ಅತೃಪ್ತ ಶಾಸಕರು ಸಭೆ ನಡೆಸುವ ನಿರ್ಧಾರಕ್ಕೆ ಬಂದಿದ್ದಾರೆ. ಸಂಪುಟ ವಿಸ್ತರಣೆ ಮುಂದಕ್ಕೆ ಹೋಗಿದೆ ಎಂಬ ಕಾರಣಕ್ಕೆ ಅತೃಪ್ತರು ಅಧಿವೇಶನದಲ್ಲಿ ಸರ್ಕಾರಕ್ಕೆ ಕೈಕೊಟ್ಟರೆ ಅವರನ್ನು ಸಮಾಧಾನ ಮಾಡುವ ಬಗೆ ಹೇಗೆ ಎಂಬ ಚರ್ಚೆ ಕಾಂಗ್ರೆಸ್ ಮುಖಂಡರಲ್ಲಿ ನಡೆದಿದೆ. ಶಾಸಕರು ಅಧಿವೇಶನಕ್ಕೆ ಗೈರು ಹಾಜರಾಗುವ ಬಗ್ಗೆಯೂ ಕೆಲ ದಿನಗಳ ಹಿಂದೆ ಚರ್ಚೆ ನಡೆದಿತ್ತು. ಇದೇ ಅವಕಾಶ ಬಳಸಿ ಬಿಜೆಪಿ ಏನಾದರೂ ಮಹತ್ವದ ಸಂದರ್ಭದಲ್ಲಿ ಮತಕ್ಕೆ ಹಾಕಿಸಿ ಸರ್ಕಾರ ಮುಜುಗರ ಅನುಭವಿಸಿದರೆ ಎಂಬ ಪ್ರಶ್ನೆ ಎರಡು ಪಕ್ಷದ ಮುಖಂಡರಲ್ಲಿದೆ. ಸರ್ಕಾರ ಸಂಕಷ್ಟಕ್ಕೆ ಒಳಗಾದ ಸಂದರ್ಭ ಸಿದ್ದರಾಮಯ್ಯ ಪ್ರವಾಸಕ್ಕೆ ಹೋಗುವುದು ಕಾಂಗ್ರೆಸ್​ನಲ್ಲಿ ಚರ್ಚೆ ಹಾಗೂ ಟೀಕೆಗೂ ಒಳಗಾಗಿದೆ. ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಕುಮಾರಸ್ವಾಮಿ ಬಂದು ಶಾಸಕರ ಅಹವಾಲು ಕೇಳುವ ಕಾರ್ಯಕ್ರಮವಿತ್ತು. ಸಿದ್ದರಾಮಯ್ಯ ಪ್ರವಾಸದ ಹಿನ್ನೆಲೆಯಲ್ಲಿ ಅದು ಮುಂದಕ್ಕೆ ಹೋಗಿದೆ. ವಿಧಾನಪರಿಷತ್ ಸಭಾಪತಿ ಸ್ಥಾನಕ್ಕೆ ಡಿ.12ರಂದು ಚುನಾವಣೆ ನಿಗದಿಯಾಗಿದೆ. ಯಾವ ಪಕ್ಷಕ್ಕೆ ಈ ಹುದ್ದೆ ಎಂಬ ಚರ್ಚೆಯೇ ಆಗಿಲ್ಲ. ಇಂತಹ ಸಂದರ್ಭದಲ್ಲಿ ಅಭ್ಯರ್ಥಿ ಯಾರಾಗಬೇಕು ಎಂಬುದನ್ನು ನಿರ್ಧರಿಸುವುದು ಸಮನ್ವಯ ಸಮಿತಿ ಅಧ್ಯಕ್ಷರ ಜವಾಬ್ದಾರಿ, ಈ ಪ್ರಮುಖ ಹುದ್ದೆ ಎಲ್ಲಿ ಕೈ ತಪು್ಪವುದೋ ಎಂಬುದು ಕಾಂಗ್ರೆಸ್ ಮುಖಂಡರಲ್ಲಿರುವ ಆತಂಕವಾಗಿದೆ.


ಬಿಎಸ್​ವೈ ಕನಸು ಈಡೇರಲ್ಲ

ಮೈಸೂರು/ಚಾಮರಾಜನಗರ: ಯಡಿಯೂರಪ್ಪ ಅವರಿಗೆ ವಯಸ್ಸಾಗಿದೆ. ಮುಂದಿನ ಲೋಕಸಭಾ ಚುನಾವಣೆ ಒಳಗೆ ಮತ್ತೊಮ್ಮೆ ಸಿಎಂ ಆಗಬೇಕೆಂದು ಕನಸು ಕಾಣುತ್ತಿದ್ದಾರೆ. ಆದರೆ, ಅದು ಈಡೇರುವುದಿಲ್ಲ ಎಂದು ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಮೈಸೂರಿನಲ್ಲಿ ಲೇವಡಿ ಮಾಡಿದರು. ‘ಪ್ರತ್ಯೇಕ ಲಿಂಗಾಯತ ಧರ್ಮದ ವಿಚಾರವಾಗಿ ನನ್ನ ಬಗ್ಗೆ ಅಪಪ್ರಚಾರ ಮಾಡಿದ್ದರಿಂದ ಈಗ ಧರ್ಮದ ಬಗ್ಗೆ ಎಚ್ಚರಿಕೆಯಿಂದ ಮಾತನಾಡುತ್ತಿದ್ದೇನೆ’ ಎಂದು ಸಿದ್ದರಾಮಯ್ಯ ಚಾಮರಾಜನಗರದಲ್ಲಿ ಹೇಳಿದರು.

ವಿದೇಶಕ್ಕೆ ಹೋಗೋದು ಅಪರಾಧ ಏನ್ರಿ? ನಮಗೂ ವೈಯಕ್ತಿಕ ಬದುಕು ಇದೆ ಅಲ್ವಾ? ಎಲ್ಲವನ್ನೂ ಮಾಧ್ಯಮದವರ ಮುಂದೆ ಹೇಳಿ ಹೋಗಬೇಕಾ? ಸ್ನೇಹಿತರ ಮನೆಯಲ್ಲಿ ಮದುವೆ ಇದೆ. ಅದಕ್ಕಾಗಿ ವಿದೇಶಕ್ಕೆ ಹೋಗುತ್ತಿದ್ದೇನಷ್ಟೇ.

| ಸಿದ್ದರಾಮಯ್ಯ ಮಾಜಿ ಸಿಎಂ

ವಿಡಿಯೋ ನ್ಯೂಸ್

VIDEO: ಮಾವುತನ ಊಟದ ಎಲೆಯಿಂದ ತುತ್ತು ಅನ್ನ ತಿಂದು, ನೆಟ್ಟಿಗರ...

ತಿರುವನಂತಪುರ: ಆನೆಗಳ ಆಟ, ದಾಳಿ, ಮರ ಹತ್ತುವುದು ಹೀಗೆ ಹಲವು ವಿಡಿಯೋಗಳು ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿವೆ. ಆದರೆ ಈಗ ವೈರಲ್​ ಆಗಿರುವ ಆನೆಯ ವಿಡಿಯೋ ಸಾಮಾಜಿಕ ಬಳಕೆದಾರರ ಮನಸ್ಸು ಗೆದ್ದಿದೆ. ಹಸಿದ...

VIDEO| ರಾಷ್ಟ್ರಪತಿ ರಾಮನಾಥ್​ ಕೋವಿಂದ್​ರಿಂದ ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ...

ನವದೆಹಲಿ: ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ರಾಮನಾಥ್​ ಕೋವಿಂದ್​ ಅವರು ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿ ಪ್ರದಾನ ಮಾಡಿದರು. ವಿವಿಧ ಕ್ಷೇತ್ರಗಳಲ್ಲಿ ಅದ್ವಿತೀಯ ಸಾಧನೆ ಮಾಡಿದ...

VIDEO| ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ...

ಲಖನೌ: ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ ಪೂರಕವಾದ ಘಟನೆ ಇದಾಗಿದೆ. ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನೋಯ್ಡಾದಲ್ಲಿ ಅಂಗಡಿ ಹೊರಭಾಗದಲ್ಲಿ ಇಟ್ಟಿದ್ದ ಬಾಕ್ಸ್​ನಿಂದ...

VIDEO| ನಟಿಯಾಗಿರೋ ಆಲಿಯಾ ಇದೀಗ ಶೆಫ್​: ಬಾಲಿವುಡ್​ ಬ್ಯೂಟಿಯ ಅಡುಗೆ...

ಮುಂಬೈ: ಬಾಲಿವುಡ್​ ಬ್ಯೂಟಿ ಆಲಿಯಾ ಭಟ್ ನಟನೆ ಜತೆಗೆ ಹೊಸ ಸಾಹಸಕ್ಕೆ ಕೈಹಾಕಿದ್ದಾರೆ. ನಟಿಯಾಗಿರುವ ಆಲಿಯಾ ಇದೀಗ ಶೆಫ್ ಆಗಿದ್ದು, ಹೊಸ ಬಗೆಯ ಅಡುಗೆ ಪರಿಚಯಿಸಲು ಮುಂದಾಗಿದ್ದಾರೆ. ಯೂಟ್ಯೂಬ್​ನಲ್ಲಿ ಆಲಿಯಾ ಭಟ್...

VIDEO| ಅತಿವೇಗದ ಎಸೆತ, ಮಥೀಶಾ ಪಥಿರಣ ವಿಶ್ವದಾಖಲೆ!

ಬ್ಲೂಮ್​ಫಾಂಟೆನ್: ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 19 ವಯೋಮಿತಿ ಏಕದಿನ ವಿಶ್ವಕಪ್ ಟೂರ್ನಿಯ ಮುಖಾಮುಖಿಯಲ್ಲಿ ಭಾರತ ತಂಡ 90 ರನ್​ಗಳಿಂದ ಗೆಲುವು ಸಾಧಿಸಿತು. ಆದರೆ, ಲಂಕಾ ಕಡೆಯಿಂದಲೂ ಸ್ಮರಣೀಯ ದಾಖಲೆಯೊಂದು...

VIDEO| ತಮಿಳಿನ ಕೌನ್​ ಬನೇಗಾ ಕರೋಡ್​ಪತಿ ಶೋನಲ್ಲಿ 1 ಕೋಟಿ...

ಚೆನ್ನೈ: ತಮಿಳು ಆವೃತ್ತಿಯ ಕೌನ್​ ಬನೇಗಾ ಕರೋಡ್​ಪತಿ(ಕೊಡೀಶ್ವರಿ) ರಿಯಾಲಿಟಿ ಶೋನಲ್ಲಿ ವಿಕಲಾಂಗ ಮಹಿಳೆಯೊಬ್ಬಳು ಬರೋಬ್ಬರಿ 1 ಕೋಟಿ ರೂ. ಬಹುಮಾನ ಮೊತ್ತವನ್ನು ಗೆದ್ದು ಎಲ್ಲರ ಗಮನ ಸೆಳೆದಿದ್ದಾಳೆ.ಮದುರೈ ನಿವಾಸಿಯಾಗಿರುವ ಕೌಶಲ್ಯ...