More

    ಲಿಂಗಾಯತ ವಿರೋಧಿ ಎಂದು ಬಿಂಬಿಸಲು ಹೇಳಿಕೆ ತಿರುಚಿದ್ದಾರೆ; ವಿವಾದ ಬಳಿಕ ಸಿದ್ದರಾಮಯ್ಯ ಸ್ಪಷ್ಟನೆ

    ಬಾಗಲಕೋಟೆ: ‘ಈಗಾಗಲೆ ಲಿಂಗಾಯತರೇ ಇಲ್ಲಿ ಚೀಫ್ ಮಿನಿಸ್ಟರ್ ಇದ್ದಾರಲ್ಲ. ಅವರೇ ಎಲ್ಲ ಭ್ರಷ್ಟಾಚಾರ ಮಾಡಿ ರಾಜ್ಯವನ್ನು ಹಾಳು ಮಾಡಿರುವುದು’ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ವರುಣದಲ್ಲಿ ಪ್ರಚಾರದ ಸಂದರ್ಭದಲ್ಲಿ ಹೇಳಿಕೆ ನೀಡುವ ಮೂಲಕ ‘ಲಿಂಗಾಯತ ಸಮುದಾಯಕ್ಕೆ ಅವಮಾನ’ ಮಾಡಿದ್ದಾರೆ ಎಂದು ಬಿಜೆಪಿ ಅರೋಪಿಸಿದೆ. ಸಿದ್ದರಾಮಯ್ಯ ಲಿಂಗಾಯತ ಸಮುದಾಯ ಬಳಿ ಕ್ಷಮೆ ಕೇಳಬೇಕೆಂಬ ಕೂಗು ಕೇಳಿ ಬಂದಿದೆ.

    ಇದನ್ನೂ ಓದಿ: ಸೋಲಿನ ಭಯದ ನಡುವೆ ಸಿದ್ದರಾಮಯ್ಯ ಸಿಎಂ ಕನಸು ಕಾಣುತ್ತಿದ್ದಾರೆ; ಪ್ರತಾಪ್ ಸಿಂಹ

    ವಿವಾದ ಆಗುವ ಹೇಳಿಕೆ ಕೊಟ್ಟಿಲ್ಲ

    ಇದೀಗ ವಿವಾದದ ಸ್ವರೂಪ ಪಡೆದುಕೊಂಡಿರುವ ಮಾತಿನ ಬಗ್ಗೆ ಬಾಗಲಕೋಟೆಯಲ್ಲಿ ಸಿದ್ದರಾಮಯ್ಯ ಮಾತನಾಡುತ್ತಾ, ನಾನು ವಿವಾದ ಆಗುವ ಹೇಳಿಕೆ ಕೊಟ್ಟಿಲ್ಲ. ಲಿಂಗಾಯತ ಸಮಾಜದವರು ಬಹಳ ಒಳ್ಳೆಯ ಮುಖ್ಯಮಂತ್ರಿಗಳಾಗಿದ್ದಾರೆ. ಆದರೆ ಬಸವರಾಜ ಬೊಮ್ಮಾಯಿ ಭ್ರಷ್ಟರಾಗಿದ್ದಾರೆ ಎಂದು ನಾನು ಹೇಳಿರುವುದು. ಇದೀಗ ನನ್ನ ಹೇಳಿಕೆಯನ್ನು ತಿರುಚಲಾಗಿದೆ ಎಂದು ಹೇಳಿದ್ದಾರೆ.

    ಲಿಂಗಾಯತ ವಿರೋಧಿ ಎಂದು ಬಿಂಬಿಸಲು ಹೊರಟಿದ್ದಾರೆ

    ಹೇಳಿಕೆಯನ್ನು ತಿರುಚುವ ಮೂಲಕ ನಾನು ಲಿಂಗಾಯತ ವಿರೋಧಿ ಎಂದು ಬಿಂಬಿಸಲು ಹೊರಟಿದ್ದಾರೆ. ಅದು ಸಾಧ್ಯವಿಲ್ಲ. ನನಗೆ ಲಿಂಗಾಯತರ ಬಗ್ಗೆ, ಲಿಂಗಾಯತ ಧರ್ಮದ ಬಗ್ಗೆ ಅಪಾರ ಗೌರವ ಇದೆ ಎಂದು ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.

    ಇದನ್ನೂ ಓದಿ: ನೀವು ಬಾದಾಮಿಯಲ್ಲಿ ಹುಟ್ಟಿ ಗೋಲಿ ಆಡಿದ್ದೀರಾ? ಸಿದ್ದರಾಮಯ್ಯ ಟ್ವೀಟ್​ಗೆ ಪ್ರತಾಪ್ ಸಿಂಹ ಟಾಂಗ್

    ವಿಡಿಯೋ ವೈರಲ್

    ವರುಣ ಕ್ಷೇತ್ರದ ಪ್ರಚಾರದಲ್ಲಿದ್ದ ವೇಳೆ ಮಾಧ್ಯಮಕ್ಕೆ ಪತಿಕ್ರಿಯೆ ನೀಡುವಾಗ ಸಿದ್ದರಾಮಯ್ಯ ಲಿಂಗಾಯತ ಸಮುದಾಯಕ್ಕೆ ಅವಮಾನ ಮಾಡುವ ಮಾತುಗಳನ್ನಾಡಿದ್ದಾರೆ ಎನ್ನಲಾದ ವಿಡಿಯೋ ತುಣುಕು ವ್ಯಾಪಕವಾಗಿ ವೈರಲ್ ಆಗಿದ್ದು, ಈ ಮಾತಿನ ನಿರೂಪಣೆ ಬೇರೆ ಅರ್ಥದಲ್ಲಿ ಹೊರಹೊಮ್ಮಲು ಆರಂಭವಾಗಿ ಬಿಸಿ ತಟ್ಟಲು ಆರಂಭವಾಗುತ್ತಿದ್ದಂತೆ ಸಿದ್ದರಾಮಯ್ಯ ಸ್ಪಷ್ಟನೆಯನ್ನೂ ನೀಡಿದ್ದಾರೆ.

    https://www.vijayavani.net/demand-for-wholesale-garlanding-manufacturers-has-increased-in-election-time/

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts