More

    ನೀತಿ ಸಂಹಿತೆ ಉಲ್ಲಂಘನೆ; ರೋಡ್ ಶೋ ವೇಳೆ ತಮಟೆ ಬಡಿಯುವವರಿಗೆ 1 ಸಾವಿರ ರೂ. ಕೊಟ್ಟ ಸಿದ್ದರಾಮಯ್ಯ

    ಮೈಸೂರು: ದೇಶದಲ್ಲಿ ಯಾವುದೇ ಚುನಾವಣೆ ಘೋಷಣೆಯಾದಾಗ ಅದರೊಂದಿಗೆ ಚುನಾವಣಾ ನೀತಿ ಸಂಹಿತೆಯೂ ಘೋಷಣೆಯಾಗುತ್ತದೆ. ಯಾವುದೇ ಪಕ್ಷದ ಅಭ್ಯರ್ಥಿಯು ಮತದಾರರಿಗೆ ಯಾವುದೇ ಆಮಿಷಗಳನ್ನು ಒಡ್ಡುವಂತಿಲ್ಲ. ಆದರೆ ಮಾಜಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು ಈ ನಿಯಮವನ್ನು ಉಲ್ಲಂಘನೆ ಮಾಡಿದ್ದಾರೆ.

    ಚುನಾವಣೆ ಘೋಷಣೆಯಾಗುತ್ತಿದಂತೆ ಸಿದ್ದರಾಮಯ್ಯ ಅವರು ವರುಣ ಕ್ಷೇತ್ರ ಪ್ರವಾಸ ಕೈಗೊಂಡಿದ್ದಾರೆ. ವರುಣ ಕ್ಷೇತ್ರದ ಬಿಳುಗುಳಿ ಗ್ರಾಮದಲ್ಲಿ ಡಾ.ಬಿ.ಆರ್ ಅಂಬೇಡ್ಕರ್ ಪುತ್ಥಳಿ ಅನಾವರಣ ಮಾಡಿದ್ದಾರೆ. ಬಳಿಕ ಕಪಿಲಾ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಸೇತುವೆ ಉದ್ಘಾಟನೆ ಸಮಾರಂಭವು ನೇರವೇರಿದೆ.

    ಇದನ್ನೂ ಓದಿ:  ಮುದ್ದು ಅಜ್ಜಿಯರಿಗಾಗಿ ಮುಂದಿನ ಬಾರಿ ಕನ್ನಡದಲ್ಲಿಯೇ ಮಾತನಾಡುತ್ತೇನೆ: ನಟಿ ರಮ್ಯಾ

    ಈ ಬೃಹತ್ ಸಮಾವೇಶದಲ್ಲಿ ಅತ್ಯಂತ ಉತ್ಸಾಹದಿಂದ ಬೃಹತ್ ಸಮಾವೇಶದಲ್ಲಿ ಭಾಗಿಯಾದ್ದರು ಸಿದ್ದರಾಮಯ್ಯ. ರೋಡ್ ಶೋ ವೇಳೆ ತಮಟೆ ಬಡಿಯುವವರಿಗೆ ಒಂದು ಸಾವಿರ ರೂಪಾಯಿ ಹಣ ಕೊಟ್ಟಿದ್ದಾರೆ. ಈ ಮೂಲಕವಾಗಿ ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಮಾಡಿದ್ದಾರೆ. ಮೈಸೂರಿನ ವರುಣ ಕ್ಷೇತ್ರದ ಬಿಳುಗುಲಿ ಗ್ರಾಮದಲ್ಲಿ ಈ ಘಟನೆ ನಡೆದಿದೆ.

    ಕಾರ್ಯಕ್ರಮದಲ್ಲಿ ಮಾಜಿ ಸಚಿವ ಡಾ.ಎಚ್.ಸಿ ಮಹದೇವಪ್ಪ, ಶಾಸಕ ಯತೀಂದ್ರ ಸಿದ್ದರಾಮಯ್ಯ, ವಿಧಾನ ಪರಿಷತ್ ಸದಸ್ಯ ಡಾ. ತಿಮ್ಮಯ್ಯ, ಸುನೀಲ್ ಬೋಸ್ ಸೇರಿದಂತೆ ಹಲವು ಕೈ ನಾಯಕರು ಸಮಾವೇಶದಲ್ಲಿ ಭಾಗಿಯಾಗಿದ್ದರು.

    ಆಶ್ಲೀಲ ಸಂಭಾಷಣೆ ಆಡಿಯೋ ಲೀಕ್ ಬೆನ್ನಲೇ ವಿಷ ಸೇವಿಸಿದ ಕ್ರಿಕೆಟ್‌ ಕೋಚ್!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts