More

    ಸರ್ಕಾರದಲ್ಲಿ ಆರ್ಥಿಕ ಶಿಸ್ತು ಪಾಲನೆಯಾಗುತ್ತಿಲ್ಲ : ಸಿದ್ದರಾಮಯ್ಯ

    ಯಾದಗಿರಿ: ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ಸಕರ್ಾರದಲ್ಲಿ ಆಥರ್ಿಕ ಶಿಸ್ತು ಪಾಲನೆಯಾಗುತ್ತಿಲ್ಲ ಎಂದು ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯ ಆರೋಪಿಸಿದರು. ಸೋಮವಾರ ಜಿಲ್ಲೆಯಲ್ಲಿ ಪ್ರವಾಹ ಪರಸ್ಥಿತಿ ಅಧ್ಯಯನ ನಡೆಸಿದ ನಂತರ ಇಲ್ಲಿನ ಜಿಲ್ಲಾ ಕಾಂಗ್ರೆಸ್ನಲ್ಲಿ ಸುದ್ದಿಗೋಷ್ಠಿ ಮಾತನಾಡಿದ ಅವರು, ರಾಜ್ಯದ ಹಣಕಾಸು ಸ್ಥಿತಿ ಸಂಪೂರ್ಣ ಹದಗೆಟ್ಟು ಹೋಗಿದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬಜೆಟ್ನಲ್ಲಿ 1.30 ಸಾವಿರ ಕೋಟಿ ಸಾಲ ಮಾಡಿದ್ದಾರೆ. ಇದು ಹೀಗೆ ಮುಂದುವರೆದರೆ ಮುಂದಿನ ಆಥರ್ಿಕ ವರ್ಷದಲ್ಲಿ ಸರ್ಕಾರಿ ನೌಕರರಿಗೆ ಸಾಲ ಮಾಡಿಯೇ ಸಂಬಳ ನೀಡುವ ಸಮಯ ಬಂರುತ್ತದೆ ಎಂದು ಆತಂಕ ವ್ಯಕ್ತಪಡಿಸಿದರು.

    ಜಿಲ್ಲೆಯಲ್ಲಿ ನೆರೆ ಪ್ರವಾಹ ಮತ್ತು ಭಾರಿ ಮಳೆಯಿಂದ ಜಿಲ್ಲೆಯಲ್ಲಿ 24 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿಯಾಗಿದೆ. ನಾನು ಬೆಂಗಳೂರಿಗೆ ಹೋದ ತಕ್ಷಣ ಮುಖ್ಯಮಂತ್ರಿಗಳಿಗೆ ಪತ್ರ ಬರೆದು ಪ್ರವಾಹ ಪರಸ್ಥಿತಿಯ ಕುರಿತಾಗಿ ಅಧಿವೇಶನ ಕರೆಯುವಂತೆ ಮುಖ್ಯಮಂತ್ರಿಗಳಿಗೆ ಪತ್ರ ಬರೆದು ಆಗ್ರಹಿಸುತ್ತೇನೆ ಎಂದರು.

    ಕಲ್ಯಾಣ ಕರ್ನಾಟಕ, ದ ಬೀದರ್, ಯಾದಗಿರಿ ಮತ್ತು ಕಲಬುರಗಿ ಜಿಲ್ಲೆಗಳಲ್ಲಿ ಪ್ರವಾಹದ ಬಗ್ಗೆ ಸಿಎಂ ಯಡಿಯೂರಪ್ಪ ವೈಮಾನಿಕ ಸಮೀಕ್ಷೆ ನಡೆಸಿದ್ದಾರೆ. ಆದರೆ ಇದರಿಂದ ಯಾವುದೇ ಪ್ರಯೋಜನವಿಲ್ಲ. ಕಂದಾಯ ಸಚಿವರು ಕಾಟಾಚಾರಕ್ಕೆ ಭೇಟಿ ನೀಡಿದ್ದಾರೆ. ಇನ್ನು ಜಿಲ್ಲಾ ಉಸ್ತುವಾರಿ ಸಚಿವರಂತೂ ಆಯಾ ಜಿಲ್ಲೆಗಳಿಗೆ ಭೇಟಿ ನೀಡುತ್ತಿಲ್ಲ ಎಂದು ಹರಿಹಾಯ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts