More

    ಗೃಹಜ್ಯೋತಿ ಯೋಜನೆಗೆ ಸಾಂಕೇತಿಕವಾಗಿ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ

    ಕಲಬುರಗಿ: ಗೃಹ ಜ್ಯೋತಿ ಯೋಜನೆಗೆ ಇಂದು ಕಲಬುರಗಿಯ ಎನ್​ವಿ ಮೈದಾನದಲ್ಲಿ ಚಾಲನೆ ನೀಡುವ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಸಿಎಂ ಸಿದ್ದರಾಮಯ್ಯ , AICC ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ , ಉಪಮುಖ್ಯಮಂತ್ರಿ ಡಿಕೆಶಿ, ಕೆಜೆ ಜಾರ್ಜ್, ಪ್ರಿಯಾಂಕ್ ಖರ್ಗೆ, ಈಶ್ವರ ಖಂಡ್ರೆ, ರಹೀಮ್ ಖಾನ್, ಶರಣಪ್ಪ ದರ್ಶನಾಪೂರ್ ಸೇರಿದಂತೆ ಹಲವು ಸಚಿವರ ಆ ಸೇರಿದಂತೆ ಹಲವು ಸಚಿವರು ಭಾಗಿಯಾಗಿದ್ದಾರೆ.

    ಇದನ್ನೂ ಓದಿ: ಕರುನಾಡು ಬೆಳಗುವ ಗೃಹಜ್ಯೋತಿ ಯೋಜನೆ ಉದ್ಘಾಟನೆಗೆ ಕ್ಷಣಗಣನೆ : ಕಲಬುರಗಿಯಲ್ಲಿ ಸಕಲ ಸಜ್ಜು

    ಬೆಳಗ್ಗೆ 10 ಗಂಟೆಗೆ ಬೆಂಗಳೂರನಿಂದ ಹೊರಟ ಸಿಎಂ ಸಿದ್ದರಾಮಯ್ಯ, ಹೆಚ್ಎಎಲ್ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದ‌ ಮೂಲಕ ಸುಮಾರು 11 ಗಂಟೆಗೆ ಕಲಬುರಗಿಗೆ ಆಗಮಿಸಿದ್ದಾರೆ. ನಂತರ ಕಲಬುರಗಿ ವಿಮಾನ ನಿಲ್ದಾಣದಿಂದ ಎನ್​ವಿ ಮೈದಾನಕ್ಕೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗೆ ಚಾಲನೆ ನೀಡಿದರು.

    ಇದನ್ನೂ ಓದಿ: ಗೃಹಜ್ಯೋತಿ ಚಾಲನೆ ಕಾರ್ಯಕ್ರಮದಲ್ಲಿ ಭರ್ಜರಿ ಊಟ

    ಮುಖ್ಯಮಂತ್ರಿ ಸಿದ್ದರಾಮಯ್ಯ, ಪುಟ್ಟ ಗುಡಿಸಿಲಿನ ಪ್ರತಿಕೃತಿಯ ಲೈಟ್ ಸ್ವಿಚ್​ ಆನ್​ ಮಾಡುವ ಮೂಲಕ ಸಾಂಕೇತಿಕವಾಗಿ ಗೃಹ ಜ್ಯೋತಿ ಯೋಜನೆಗೆ ಚಾಲನೆ ನೀಡಿದ್ದಾರೆ. ಈ ಸಂದರ್ಭ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳಾದ ಹತ್ತು ಜನರಿಗೆ ಸಾಂಕೇತಿಕವಾಗಿ ಮುಖ್ಯಮಂತ್ರಿ, ಜಿರೋ ಬಿಲ್ ನೀಡಿದ್ದಾರೆ. ಕಾರ್ಯಕ್ರಮದಲ್ಲಿ ನೆರೆದಿದ್ದವರನ್ನು ಕಲಬುರ್ಗಿ ದಕ್ಷಿಣ ಕ್ಷೇತ್ರದ ಶಾಸಕರಾದ ಅಲ್ಲಮಪ್ರಭು ಪಾಟೀಲ ಸ್ವಾಗತಿಸಿ, ಸಚಿವರಾದ ಡಾ| ಶರಣ ಪ್ರಕಾಶ ಪಾಟೀಲ ಪ್ರಾಸ್ತಾವಿಕ ನುಡಿಗಳನ್ನಾಡಿದರು.

    ಗೃಹಜ್ಯೋತಿ ಕಾರ್ಯಕ್ರಮದಲ್ಲಿ ಭಾಗವಹಿಸಲಿರುವ ಸಿಎಂ, ಮಧ್ಯಾಹ್ನ ಸುಮಾರು 3:30ರವರೆಗೆ ಭಾಗವಹಿಸಲಿದ್ದಾರೆ ಎನ್ನಲಾಗಿದ್ದು, ಬಳಿಕ ಸಂಜೆ ಸಂಜೆ 4 ಗಂಟೆಗೆ ಬೆಂಗಳೂರಿಗೆ ತೆರಳಲಿಲಿದ್ದಾರೆ ಎಂದು ಹೇಳಲಾಗಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts