ಸಿದ್ದರಾಮಯ್ಯ ನಮ್ಮ ನಾಯಕರು, ಅವರ ಹೆಸರು ದುರ್ಬಳಕೆ ಬೇಡ: DK ಶಿವಕುಮಾರ್

blank

ಬೆಂಗಳೂರು: ಸಿದ್ದರಾಮಯ್ಯ ನಮ್ಮ ಪಕ್ಷದ ನಾಯಕರು. ಅದರಲ್ಲಿ ಯಾವುದೇ ಪ್ರಶ್ನೆ ಇಲ್ಲ. ದಿನಬೆಳಗಾದರೆ ಅವರ ಹೆಸರನ್ನು ದುರ್ಬಳಕೆ ಮಾಡಿಕೊಳ್ಳುವುದು ಬೇಡ ಎಂದು ಡಿಸಿಎಂ DK ಶಿವಕುಮಾರ್ ಹೇಳಿದರು.

ನಗರದ ಕೆಪಿಸಿಸಿ ಕಚೇರಿ ಬಳಿ ಮಾಧ್ಯಮಗಳ ಸುದ್ದಿಗಾರರೊಂದಿಗೆ ಭಾನುವಾರ ಪ್ರತಿಕ್ರಿಯಿಸಿದರು. ಸಿದ್ದರಾಮಯ್ಯ ಅವರು ಪಕ್ಷಕ್ಕೆ ಅನಿವಾರ್ಯ ಎಂಬ ಹೇಳಿಕೆ ಬಗ್ಗೆ ಕೇಳಿದಾಗ, “ಸಿದ್ದರಾಮಯ್ಯ ಅವರು ನಮ್ಮ ನಾಯಕರು. ಅವರು ಎಲ್ಲಾ ಚುನಾವಣೆಗೂ ಬೇಕು. ಜಿಪಂ, ತಾಪಂ, ವಿಧಾನ ಸಭೆ, ಸಂಸತ್ ಚುನಾವಣೆ ಎಲ್ಲದಕ್ಕೂ ಬೇಕು. ಅವರನ್ನು ಪಕ್ಷ ಎರಡು ಬಾರಿ ಸಿಎಂ ಮಾಡಿದೆ. ಸಿದ್ದರಾಮಯ್ಯ ಅವರು ಎರಡನೇ ಬಾರಿಗೆ ಸಿಎಂ ಆಗಿ ಉತ್ತಮ ಕೆಲಸ ಮಾಡುತ್ತಿದ್ದು, ಅವರ ಹೆಸರು ಮಾಧ್ಯಮಗಳಿಗೆ ಆಹಾರವಾಗುವಂತೆ ಗೊಂದಲದ ಹೇಳಿಕೆ ಬೇಡ” ಎಂದು ತಿಳಿಸಿದರು.

ಇದನ್ನೂ ಓದಿ:ವಿಶ್ವದ ಮೊದಲ ಸ್ವಯಂಘೋಷಿತ ಸಲಿಂಗಕಾಮಿ ಇಮಾಮ್ ಮುಹ್ಸಿನ್ ಹೆಂಡ್ರಿಕ್ಸ್ ಗುಂಡಿಕ್ಕೆ ಹತ್ಯೆ! Muhsin Hendricks

ಪಕ್ಷದಲ್ಲಿ ಯಾವುದೇ ಗೊಂದಲ ಇಲ್ಲ. ಕಾಂಗ್ರೆಸ್ ಪಕ್ಷ ದಿನ ನಿತ್ಯ ಎಲ್ಲವನ್ನು ಗಮನಿಸುತ್ತಿದೆ ಎಂದು ತಿಳಿಸಿದರು.

ಅಧಿಕಾರದಲ್ಲಿದ್ದುಕೊಂಡು ಹೋರಾಟ ಯಾಕೆ ಮಾಡುತ್ತಾರೆ

ನೀರಾವರಿ ವಿಚಾರವಾಗಿ ಪಕ್ಷಾತೀತ ಹೋರಾಟ ಮಾಡಬೇಕು ಎಂಬ ದೇವೇಗೌಡರ ಹೇಳಿಕೆ ಬಗ್ಗೆ ಕೇಳಿದಾಗ, ರಾಜ್ಯದ ನೆಲ, ಜಲ ಹಿತಕ್ಕಾಗಿ ನಾವು ಬದ್ಧವಾಗಿದ್ದೇವೆ. ಅವರು ಮೇಕೆದಾಟಿಗೆ ಒಂದೇ ದಿನದಲ್ಲಿ ಸಹಿ ಹಾಕಿಸುವುದಾಗಿ ಹೇಳಿದ್ದರು. ಮಹದಾಯಿ ವಿಚಾರವಾಗಿ ನಾನೇ ಕೇಂದ್ರ ಸಚಿವರನ್ನು ಭೇಟಿ ಮಾಡಿ ಮನವಿ ಮಾಡಿದ್ದೆವು. ಇದು ಅವರ ಹೋರಾಟವಲ್ಲ. ರಾಜ್ಯದ ಹೋರಾಟ. ಅವರು ಅಧಿಕಾರದಲ್ಲಿ ಇರುವಾಗ ಹೋರಾಟ ಯಾಕೆ ಮಾಡಬೇಕು? ನಾವು ಈ ವಿಚಾರದಲ್ಲಿ ರಾಜಕೀಯ ಮಾಡುವುದಿಲ್ಲ, ನಮಗೆ ಅದರ ಅಗತ್ಯವಿಲ್ಲ. ಅವರಿಗೆ ರಾಜಕಾರಣ ಮಾಡಿ ರೂಢಿ ಇರಬಹುದು. ನಾವು ಹೋರಾಟ ಮಾಡಿದಾಗ ಅವರು ಯಾವ ರೀತಿ ಟೀಕೆ ಮಾಡಿದ್ದಾರೆ ಎಂದು ನೋಡಿದ್ದೇವೆ ಎಂದರು.

ಇದನ್ನೂ ಓದಿ: ಕಿಕ್ ಬಾಕ್ಸಿಂಗ್‌ನಲ್ಲಿ ಬೆಳ್ಳಿ ಪದಕ: ಬೇಬಿ ಫಾತಿಮಾಗೆ ನೆರವು ಅಗತ್ಯ

ನಾವು ಅದನ್ನು ಮರೆತು ರಾಜ್ಯದ ಹಿತಕ್ಕಾಗಿ ನೀರಾವರಿ ಯೋಜನೆಗೆ ಪ್ರಯತ್ನಿಸುತ್ತೇವೆ. ಭದ್ರಾ ಮೇಲ್ದಂಡೆ ಯೋಜನೆಗೆ 5 ಸಾವಿರ ಕೋಟಿ ಘೋಷಣೆ ಮಾಡಿದ್ದೀರಿ, ಅದನ್ನು ಕೊಟ್ಟಿಲ್ಲ ಎಂದು ಅವರು ಸಂಸತ್ತಿನಲ್ಲಿ ಎಂದಾದರೂ ಪ್ರಶ್ನೆ ಮಾಡಿದ್ದಾರಾ? ದೇವೇಗೌಡರು, ಕುಮಾರಸ್ವಾಮಿ, ಕೇಂದ್ರ ಸಚಿವರು, ಸಂಸದರು ಈ ಬಗ್ಗೆ ಧ್ವನಿ ಎತ್ತುತ್ತಾರೆ ಎಂಬ ನಿರೀಕ್ಷೆ ಇಟ್ಟುಕೊಂಡಿದ್ದೆ. ಆ ಕೆಲಸದಲ್ಲೂ ವಿಫಲರಾಗಿದ್ದಾರೆ. ಮೊದಲು ಈ ಕೆಲಸ ಮಾಡಲಿ. ಕಾವೇರಿ ಗೋದಾವರಿ ಜೋಡಣೆ ಮಾಡಿದರೆ ಸಂತೋಷ. ಅವರು ಯೋಜನೆ ತರಲಿ. ನಮ್ಮಿಂದ ಯಾವ ಸಹಕಾರ ಬೇಕು ಹೇಳಲಿ, ನಾವು ನೀಡುತ್ತೇವೆ. ಇಲ್ಲಿಂದಲೇ ಅವರಿಗೆ ಸಾಷ್ಟಾಂಗ ನಮಸ್ಕಾರ ಹಾಕುತ್ತೇವೆ ಎಂದರು.

ವಿಶ್ವವಿದ್ಯಾಲಯ ಹಾಗೂ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಸಂಪುಟ ಉಪ ಸಮಿತಿ ತೀರ್ಮಾನ: DK ಶಿವಕುಮಾರ್

Share This Article

ಬೇಸಿಗೆಯ ಆರೋಗ್ಯಕ್ಕಾಗಿ ಇವುಗಳಿಗೆ ವಿದಾಯ ಹೇಳಿ! ಇಲ್ಲದಿದ್ದರೆ ಅನಾರೋಗ್ಯಕ್ಕೊಳಗಾಗುವುದು ಖಂಡಿತ Summer Foods

Summer Foods : ಬೇಸಿಗೆ ಕಾಲ ಆರಂಭವಾಗುತ್ತಿದ್ದಂತೆ ದೇಹದ ಉಷ್ಣತೆಯು ಸ್ವಾಭಾವಿಕವಾಗಿ ಹೆಚ್ಚಾಗುತ್ತದೆ. ಆದ್ದರಿಂದ ದೇಹವನ್ನು…

ಈ ಕೆಟ್ಟ ಅಭ್ಯಾಸಗಳು ನಿಮ್ಮ ಮನೆಯ ಶಾಂತಿ, ನೆಮ್ಮದಿ ಕೆಡಿಸುತ್ತವೆ! ಹುಷಾರ್​…Vastu Tips

Vastu Tips:  ನಮ್ಮ ದೈನಂದಿನ ಅಭ್ಯಾಸಗಳು ಮತ್ತು ಸುತ್ತಮುತ್ತಲಿನ ಪ್ರದೇಶಗಳು ಸಹ ನಮ್ಮ ಮನೆಯ ವಾಸ್ತುಗೆ…

ರಾತ್ರಿ ಬಾಯಿ ತೆರೆದು ಮಲಗುವುದು ಆರೋಗ್ಯಕ್ಕೆ ಒಳ್ಳೆಯದಲ್ಲ! ಇಂದೇ ಈ ಅಭ್ಯಾಸ ಬಿಟ್ಟು ಬಿಡಿ.. Sleeping Disorder

Sleeping Disorder : ಸಾಮಾನ್ಯವಾಗಿ ನಿದ್ದೆ ಮಾಡುವಾಗ ಕೆಲವರಿಗೆ  ಬಾಯಿ ತೆರೆದುಕೊಂಡು ಮಲಗುವ ಅಭ್ಯಾಸ ಇರುತ್ತದೆ.…