17 C
Bangalore
Friday, December 13, 2019

ತೇಜಸ್ವಿ ಸೂರ್ಯನನ್ನು ಅಮಾವಾಸ್ಯೆ ಎಂದು ಕೂಗಬೇಕು: ಮಾಜಿ ಸಿಎಂ ಸಿದ್ದರಾಮಯ್ಯ

Latest News

ಸಂಭ್ರಮದ ಅಮೃತೇಶ್ವರ ರಥೋತ್ಸವ

ಅಣ್ಣಿಗೇರಿ: ಪಟ್ಟಣದ ಆರಾಧ್ಯದೈವ ಶ್ರೀ ಅಮೃತೇಶ್ವರ ಮಹಾರಥೋತ್ಸವ ಗುರುವಾರ ಸಂಜೆ ಸಹಸ್ರಾರು ಭಕ್ತರ ಜಯಘೊಷಗಳ ಮಧ್ಯ ಸಡಗರ, ಸಂಭ್ರಮದಿಂದ ಜರುಗಿತು.

ಗಣರಾಜ್ಯೋತ್ಸವಕ್ಕೆ ಬ್ರೆಜಿಲ್ ಪ್ರಧಾನಿ ಬೇಡ

ವಿಜಯವಾಣಿ ಸುದ್ದಿಜಾಲ ಧಾರವಾಡ 2020ರ ಜ. 26ರ ಗಣರಾಜ್ಯೋತ್ಸವದ ಅತಿಥಿಯಾಗಿ ಬ್ರೆಜಿಲ್ ಪ್ರಧಾನಿ ಬೊಲ್ಸೇನಾರೋ ಬರುತ್ತಿರುವುದನ್ನು ರೈತ ಸಂಘ...

ಡಿಸಿಪಿಯಾಗಿ ಬಿ.ಎಸ್. ನೇಮಗೌಡ ಅಧಿಕಾರ ಸ್ವೀಕಾರ

ಹುಬ್ಬಳ್ಳಿ: ಹುಬ್ಬಳ್ಳಿ- ಧಾರವಾಡ ಪೊಲೀಸ್ ಕಮಿಷನರೇಟ್​ನ ಅಪರಾಧ ಮತ್ತು ಸಂಚಾರ ವಿಭಾಗಕ್ಕೆ ವರ್ಗವಾಗಿ ಬಂದಿರುವ ಉಪ ಪೊಲೀಸ್ ಆಯುಕ್ತ(ಡಿಸಿಪಿ) ಬಿ.ಎಸ್. ನೇಮಗೌಡ ಗುರುವಾರ...

ಸೇವೆ ಸ್ಥಗಿತಗೊಳಿಸಿ ಧರಣಿ

ವಿಜಯವಾಣಿ ಸುದ್ದಿಜಾಲ ಕುಂದಗೋಳ ಬಾಕಿ ವೇತನ ಪಾವತಿಗೆ ಆಗ್ರಹಿಸಿ ತಾಲೂಕಾಸ್ಪತ್ರೆ ಡಿ ದರ್ಜೆ ಗುತ್ತಿಗೆ ನೌಕರರು ಗುರುವಾರ ಸೇವೆ...

ಜ್ಞಾನ ಸಂಸತ್ ಅಧಿವೇಶನ ನಾಳೆ

ವಿಜಯವಾಣಿ ಸುದ್ದಿಜಾಲ ಧಾರವಾಡ ಹುಬ್ಬಳ್ಳಿಯ ವರದಶ್ರೀ ಫೌಂಡೇಷನ್​ನಿಂದ ನಗರದ ಕರ್ನಾಟಕ ಕಾಲೇಜು ಮೈದಾನದಲ್ಲಿ ಡಿ. 14ರಂದು ಸಂಜೆ 4ಕ್ಕೆ...

ಬೆಂಗಳೂರು: ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ವಿರುದ್ಧ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಾಗ್ದಾಳಿ ನಡೆಸಿದ್ದು, ಬಿಜೆಪಿ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರ ನಡೆಯನ್ನು ಟೀಕಿಸಿದ್ದಾರೆ.

ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ತೇಜಸ್ವಿ ಸೂರ್ಯನನ್ನು ಅಮಾವಾಸ್ಯೆ ಎಂದು ಕೂಗಬೇಕು. ಸಂವಿಧಾನವನ್ನು ಸುಟ್ಟು ಹಾಕಬೇಕು ಎಂದು ಹೇಳುತ್ತಾನೆ. ಅತ್ತ ಅನಂತ್ ಕುಮಾರ್ ಹೆಗ್ಡೆ ಕೂಡ ಸಂವಿಧಾನ ಬದಲಾವಣೆ ಮಾಡ್ತೀವಿ ಎಂದು ಹೇಳ್ತಾರೆ. ಅಮಿತ್​ ಷಾ ಹಾಗೂ ಮೋಹನ್ ಭಾಗವತ್ ಬೆಂಬಲ ಇರುವುದರಿಂದಲೇ ಇವರು ಈ ರೀತಿ ಹೇಳುತ್ತಿರುವುದು ಎಂದು ಕಿಡಿಕಾರಿದರು.

ಹೃದಯದಲ್ಲಿ ಬಡವರ ಬಗ್ಗೆ ಕಾಳಜಿ ಇರಬೇಕು
ಪುಲ್ವಾಮ ಘಟನೆ ಬಗ್ಗೆ ಹೇಳ್ತಾರೆ. ದೇಶದ ರಕ್ಷಣೆ ನನ್ನಿಂದ ಮಾತ್ರ ಸಾಧ್ಯ, 56 ಇಂಚಿನ ಎದೆಯುಳ್ಳವರಿಂದ ಮಾತ್ರ ಸಾಧ್ಯ ಎಂದು ಹೇಳ್ತಾರೆ. 56 ಇಂಚು ಎದೆ ಇದ್ದರೆ ಸಾಲದು, ಹೃದಯದಲ್ಲಿ ಬಡವರ ಬಗ್ಗೆ ಕಾಳಜಿ ಇರಬೇಕು. ನಾನು ಸಿಎಂ ಆಗಿದ್ದಾಗ ರಾಜ್ಯದಲ್ಲಿ ಬರಗಾಲ ಬಂದಿದೆ, ರೈತರ ಸಾಲಮನ್ನಾ ಮಾಡಿ ಎಂದು ನರೇಂದ್ರ ಮೋದಿ ಅವರ ಬಳಿ ಸರ್ವಪಕ್ಷ ನಿಯೋಗ ಕರೆದುಕೊಂಡು ಹೋದೆ, ಕಾಲಿಗೆ ಬೀಳೊದು ಬಾಕಿ, ಕೈಮುಗಿದು ಪ್ರಾರ್ಥನೆ ಮಾಡಿದೆ. ಆದರೆ, ಅವರು ಮಾಡಲಿಲ್ಲ. ನಮ್ಮ ಜತೆ ಬಂದ ಬಿಜೆಪಿ ಗಿರಾಕಿಗಳು ಕೂಡ ಒಂದೇ ಒಂದು ಮಾತನಾಡಲಿಲ್ಲ ಎಂದು ಟೀಕಾಪ್ರಹಾರ ನಡೆಸಿದರು.

ಬಾಬ್ರಿ ಮಸೀದಿ ನಾಶ ಮಾಡಿ 27 ವರ್ಷ ಆಯ್ತು. ರಾಮಮಂದಿರ ಕಟ್ತೀವಿ ಎಂದು ಹಣ ಸಂಗ್ರಹಿಸಿದ್ದರು. ಸಂಗ್ರಹಿಸಿದ ಹಣವನ್ನು ಬಿಜೆಪಿಯವರು ಜೇಬಿಗೆ ಹಾಕ್ಕೊಂಡರು. ಈಗ ನಾವು ರಾಮಮಂದಿರ ಕಟ್ತೀವಿ ಎಂದು ಹೇಳ್ತಾರೆ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.

ಮೋದಿ ರೀತಿಯ ಸುಳ್ಳುಗಾರ ಪ್ರಧಾನಿಯನ್ನು ನಾನು ನೋಡಿಲ್ಲ
ನರೇಂದ್ರ ಮೋದಿ ಐದು ವರ್ಷ ಆಡಳಿತ ನಡೆಸಿದ್ದಾರೆ. ಯುಪಿಎ 10 ವರ್ಷ ಆಡಳಿತ ನಡೆಸಿತ್ತು. ಯಾವುದೇ ಪಕ್ಷ 10 ವರ್ಷ ಆಡಳಿತ ನಡೆಸಿದರೆ, ಸಾಮಾನ್ಯವಾಗಿ ಆಡಳಿತ ವಿರೋಧಿ ಅಲೆ ಇರುತ್ತದೆ. ಆದರೆ, ಯುಪಿಎದಲ್ಲಿ ಮನಮೋಹನ್ ಸಿಂಗ್ ಆರ್ಥಿಕ ತಜ್ಞ ಹಾಗೂ ಪ್ರಾಮಾಣಿಕ ವ್ಯಕ್ತಿಯಾಗಿದ್ದರು. ಅವರು ನರೇಂದ್ರ ಮೋದಿ ರೀತಿ ಡೋಂಗಿ ಪ್ರಧಾನಿಯಾಗಿರಲಿಲ್ಲ. ದೇಶದಲ್ಲಿ ಅನೇಕ ಪ್ರಧಾನಿಗಳು ಆಡಳಿತ ನಡೆಸಿದ್ದಾರೆ. ಮಣ್ಣಿನ ಮಗ ದೇವೆಗೌಡರು ಪ್ರಧಾನಿಯಾಗಿ ಆಡಳಿತ ನಡೆಸಿದ್ದಾರೆ. ಆದರೆ ಪ್ರಧಾನಿ ನರೇಂದ್ರ ಮೋದಿ ರೀತಿಯ ಸುಳ್ಳುಗಾರ ಪ್ರಧಾನಿಯನ್ನು ನಾನು ನೋಡಿಲ್ಲ ಎಂದು ಜರಿದರು. (ದಿಗ್ವಿಜಯ ನ್ಯೂಸ್​)

Stay connected

278,749FansLike
588FollowersFollow
626,000SubscribersSubscribe

ವಿಡಿಯೋ ನ್ಯೂಸ್

VIDEO: 8 ಅಡಿ ಉದ್ದದ ಹೆಬ್ಬಾವನ್ನು ರಕ್ಷಿಸಲು 40 ಅಡಿ...

ತ್ರಿಶೂರ್​: ಇಲ್ಲೋರ್ವ ಯುವಕ ಬಾವಿಯಲ್ಲಿ ಬಿದ್ದಿದ್ದ ಹೆಬ್ಬಾವನ್ನು ರಕ್ಷಿಸಲು ಹಗ್ಗದ ಮೂಲಕ ಕೆಳಗೆ ಇಳಿದು ಬಳಿಕ ಅಪಾಯಕ್ಕೆ ಸಿಲುಕಿದ ವಿಡಿಯೋವೊಂದು ವೈರಲ್​ ಆಗಿದೆ. ಈ ಘಟನೆ ನಡೆದಿದ್ದು ಕೇರಳದ ತ್ರಿಶೂಲ್​ನಲ್ಲಿ ಎನ್ನಲಾಗಿದೆ. ವಿಡಿಯೋದಲ್ಲಿ ಇರುವ...

VIDEO| ಲಕ್ಷ್ಯದ ಜೊತೆಯಲಿ ಅನಿರುದ್ಧ್; ಡೈಲಾಗ್​ ಟೀಸರ್​ ಬಿಡುಗಡೆ

ಬೆಂಗಳೂರು: ‘ಜೊತೆ ಜೊತೆಯಲಿ’ ಧಾರಾವಾಹಿ ಮೂಲಕ ಕನ್ನಡಿಗರ ಮನೆಮನ ಗೆದ್ದಿರುವ ನಟ ಅನಿರುದ್ಧ್ ಈಗ ‘ಲಕ್ಷ್ಯ’ಗೆ ಜತೆಯಾಗಿದ್ದಾರೆ. ಅಂದರೆ ‘ಲಕ್ಷ್ಯ’ ಸಿನಿಮಾದ ಡೈಲಾಗ್ ಟೀಸರ್ ಬಿಡುಗಡೆ ಮಾಡುವ ಮೂಲಕ ಅವರು ಚಿತ್ರತಂಡದ ಜತೆ...

VIDEO| ಇಸ್ರೋದಿಂದ ರಿಸ್ಯಾಟ್​-2ಬಿಆರ್​1 ಹೆಸರಿನ ಮತ್ತೊಂದು ಬೇಹುಗಾರಿಕಾ ಉಪಗ್ರಹ ಯಶಸ್ವಿ...

ನವದೆಹಲಿ: ಪಿಎಸ್​ಎಲ್​ವಿ-ಸಿ48 ಉಡಾವಣಾ ವಾಹಕ ಹೊತ್ತ ರಿಸ್ಯಾಟ್​-2ಬಿಆರ್​1 ಹೆಸರಿನ ಉಪಗ್ರಹವನ್ನು ಇಸ್ರೋ ಶ್ರೀಹರಿಕೋಟದಲ್ಲಿರುವ ಸತೀಶ್​ ಧವನ್​ ಉಡಾವಣಾ ಕೇಂದ್ರದಿಂದ ಬುಧವಾರ ಮಧ್ಯಾಹ್ನ ಯಶಸ್ವಿಯಾಗಿ ಉಡಾವಣೆಗೊಳಿಸಿತು. ರಿಸ್ಯಾಟ್​-2ಬಿಆರ್​1 ಉಪ್ರಗಹದ ಜೊತೆಗೆ 9 ಗ್ರಾಹಕ...

VIDEO| ವಿಜಯವಾಣಿ-ದಿಗ್ವಿಜಯ ನ್ಯೂಸ್​ ಸಹಯೋಗದಲ್ಲಿ ಫೋನ್​ ಇನ್​ ಪ್ರೋಗ್ರಾಮ್​: ಮಹಿಳಾ...

ಬೆಂಗಳೂರು: ದಿಶಾ ಅತ್ಯಾಚಾರ ಮತ್ತು ಕೊಲೆ ಹಾಗೂ ಉನ್ನಾವೋ ಅತ್ಯಾಚಾರ ಪ್ರಕರಣಗಳಂತಹ ಪೈಶಾಚಿಕ ಕೃತ್ಯಗಳು ಜನರ ಮನಸ್ಸಿನಲ್ಲಿನ್ನೂ ಮಾಸಿಲ್ಲ. ಈ ಎರಡು ಪ್ರಕರಣಗಳಿಂದ ದೇಶದೆಲ್ಲೆಡೆ ಮಹಿಳಾ ಸುರಕ್ಷಾ ಪ್ರಶ್ನೆಯನ್ನು ಎಬ್ಬಿಸಿದೆ....

VIDEO: ಮರದ ಮೇಲಿದ್ದ ಹಾವನ್ನು ಜಂಪ್​ ಮಾಡಿದ ಹಿಡಿದ ಮುಂಗುಸಿ;...

ಬಳ್ಳಾರಿ: ಹಾವು-ಮುಂಗುಸಿ ಫೈಟ್​ ಹೊಸದಲ್ಲ. ಈಗಾಗಲೇ ಅದೆಷ್ಟೋ ದೃಶ್ಯಗಳನ್ನು ನೋಡಿರುತ್ತೇವೆ. ಆದರೆ ಇಲ್ಲೊಂದು ಮುಂಗುಸಿ ಹಾವನ್ನು ಹಿಡಿದ ಪರಿ ನೋಡಿದರೆ ಒಂದು ಕ್ಷಣ ಮೈ ಜುಂ ಎನ್ನುತ್ತದೆ. ಹಾವಿನ ಮೇಲೆ ಸುಮ್ಮನೆ ಕುಳಿತಿದ್ದ ಮಾರುದ್ದ...

VIDEO: ಏರ್​ಪೋರ್ಟ್​ನಲ್ಲಿ ಬ್ಯಾಗೇಜ್​ಗಳ ಸಭ್ಯ ನಡತೆ ನೋಡಿ ಮನಸೋತ ನೆಟ್ಟಿಗರು;...

ಯಾವುದಾದರೂ ಕ್ಯೂದಲ್ಲಿ ನಿಂತರೂ ನೂಕುನುಗ್ಗಲು ಮಾಡುವ ಮನುಷ್ಯರಗಿಂತ ಈ ಬ್ಯಾಗೇಜ್​ಗಳು ಸಾವಿರ ಪಾಲು ಉತ್ತಮ ! ಅರೆ, ಇದೇನು? ಮನುಷ್ಯರಿಗೂ, ಬ್ಯಾಗೇಜ್​ಗಳಿಗೂ ಎಲ್ಲಿಯ ಹೋಲಿಕೆ ಎನ್ನುತ್ತೀರಾ? ಹಾಗಾದರೆ ಈ ಸುದ್ದಿ ಓದಿ, ವಿಡಿಯೋ ನೋಡಿದರೆ...