More

    ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭೇಟಿ ಮಾಡಿ ದಸರಾದಲ್ಲಿ ಏರ್ ಶೋ ನಡೆಸುವಂತೆ ಮನವಿ ಸಲ್ಲಿಸಿದ ಸಿಎಂ

    ನವದೆಹಲಿ: ಇಂದು ಸಿಎಂ ಸಿದ್ದರಾಮಯ್ಯ ಅವರ ಹುಟ್ಟು ಹಬ್ಬವಾಗಿದ್ದು, ನವದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಇದೇ ವೇಳೆ ಅವರು ಕೇಂದ್ರ ಸಚಿವರಾದ ರಾಜನಾಥ್ ಸಿಂಗ್ ಹಾಗೂ ನಿರ್ಮಲಾ ಸೀತಾರಾಮನ್​ ಅವರನ್ನು ಭೇಟಿಯಾಗಿದ್ದಾರೆ.

    ರಕ್ಷಣಾ ಸಚಿವ ರಾಜನಾಥಸಿಂಗ್ ಅವರನ್ನು ನವದೆಹಲಿಯಲ್ಲಿ ಭೇಟಿ ಮಾಡಿದ ಸಿಎಂ ಸಿದ್ದರಾಮಯ್ಯ ಮೈಸೂರು ದಸರಾ ಮಹತ್ವವನ್ನು ಅವರಿಗೆ ವಿವರಿಸಿ, ಏರ್​ ಶೋ ನಡೆಸುವಂತೆ ಮನವಿ ಮಾಡಿದ್ದಾರೆ.

     

    ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭೇಟಿ ಮಾಡಿ ದಸರಾದಲ್ಲಿ ಏರ್ ಶೋ ನಡೆಸುವಂತೆ ಮನವಿ ಸಲ್ಲಿಸಿದ ಸಿಎಂ

    ಇದನ್ನೂ ಓದಿ: ಪ್ರಧಾನಿ ಮೋದಿ ಭೇಟಿ ಮಾಡಿದ ಸಿಎಂ ಸಿದ್ದರಾಮಯ್ಯ; ವಿಶೇಷ ಸ್ಮರಣಿಕೆ ನೀಡಿದ ಮುಖ್ಯಮಂತ್ರಿ!

    ಮನವಿ ಪತ್ರದಲ್ಲೇನಿದೆ?

    ಸಿಎಂ ಸಿದ್ದರಾಮಯ್ಯ, ರಕ್ಷಣಾ ಸಚಿವರಾದ ರಾಜನಾಥ್ ಸಿಂಗ್​ಗೆ ಆಂಗ್ಲ ಭಾಷೆಯಲ್ಲಿ ಪತ್ರ ಬರೆದಿದ್ದು ಅದರಲ್ಲಿ ಮೈಸೂರು ದಸರಾ ಸಂದರ್ಭದಲ್ಲಿ ಏರ್ ಶೋ ನಡೆಸುವಂತೆ ಕೋರಿದ್ದಾರೆ.

    ಪತ್ರದಲ್ಲಿ, “ನಮಸ್ಕಾರ ! ಕರ್ನಾಟಕದ ವೈಭವವನ್ನು ಪ್ರದರ್ಶಿಸುವ ಪ್ರಸಿದ್ಧ ಮೈಸೂರು ದಸರಾ ಉತ್ಸವದ ಬಗ್ಗೆ ನಾನು ನಿಮಗೆ ಬರೆಯುತ್ತಿದ್ದೇನೆ. ಈ ಆಚರಣೆಗಳ ಬಗ್ಗೆ ಇಡೀ ದೇಶಕ್ಕೇ ಅರಿವಾಗುವ ಅಗತ್ಯ ಇದ್ದು ರಾಜ್ಯದ ವೈಭವದ ಇತಿಹಾಸ ಮತ್ತು ಸಂಪ್ರದಾಯಗಳ ಮೇಲೆ ಬೆಳಕು ಚೆಲ್ಲಬೇಕಾಗಿದೆ. ಈ ವರ್ಷ ಅಕ್ಟೋಬರ್ 15 ರಿಂದ 24 ರವರೆಗೆ ದಸರಾ ಆಚರಿಸಲು ನಿರ್ಧರಿಸಲಾಗಿದೆ.

    ಇದನ್ನೂ ಓದಿ: CM Siddaramaiah Meets PM Modi | ಪ್ರಧಾನಿ ಮೋದಿಗೆ ವಿಶೇಷ ಸ್ಮರಣಿಕೆ ನೀಡಿದ ಸಿಎಂ ಸಿದ್ದರಾಮಯ್ಯ! | NEW DELHI

    ಮೈಸೂರು ದಸರಾ ಆಚರಣೆಗೆ ಸಂಬಂಧಪಟ್ಟ ಉನ್ನತ ಸಮಿತಿಯ ಸಭೆಯಲ್ಲಿ 2023ರ ದಸರಾ ಮಹೋತ್ಸವದ ವೇಳೆ ಏರ್ ಶೋ ನಡೆಸಬೇಕೆಂಬ ಜನರ ಬಯಕೆಯನ್ನು ಸಮಿತಿಯ ಮುಂದೆ ಇಡಲಾಯಿತು. 2017 ಮತ್ತು 2019 ರಲ್ಲಿ, ಮೈಸೂರಿನ ಟಾರ್ಚ್ ಲೈಟ್ ಪರೇಡ್ ಮೈದಾನದಲ್ಲಿ ಭಾರತೀಯ ವಾಯುಪಡೆಯು ಪ್ರದರ್ಶಿಸಿದ ವಿಶೇಷ ಏರ್ ಶೋ ಮೂಲಕ ದಸರಾ ಉತ್ಸವವು ಹತ್ತಾರು ಪ್ರವಾಸಿಗರು ಮತ್ತು ಕನ್ನಡಿಗರ ಗಮನವನ್ನು ಸೆಳೆದಿತ್ತು.

    ಹೀಗಾಗಿ, ಈ ಬಾರಿ ಮೈಸೂರಿನಲ್ಲಿ ನಾಡಹಬ್ಬ ದಸರಾ 2023ರ ಸಂದರ್ಭದಲ್ಲಿ ಇದೇ ರೀತಿಯ ‘ಏರ್‌ಶೋ’ ಅನ್ನು ಆಯೋಜಿಸಲು ಸಂಬಂಧಪಟ್ಟವರಿಗೆ ದಯೆಮಾಡಿ ನಿರ್ದೇಶಿಸಿ ಎಂದು ಈ ಮೂಲಕ ವಿನಂತಿಸುತ್ತಿದ್ದೇವೆ. ನಿಮ್ಮ ಸಮಯೋಚಿತ ಮಧ್ಯಸ್ಥಿಕೆ ದಸರಾ ಹಬ್ಬಕ್ಕೆ ಇನ್ನಷ್ಟು ರಂಗು ತುಂಬಲಿದೆ. ದೃಢವಾದ ಮತ್ತು ತ್ವರಿತ ಕ್ರಮಕ್ಕಾಗಿ ಎದುರುನೋಡುತ್ತಿದ್ದೇನೆ” ಎಂದು ಸಿಎಂ ಸಿದ್ದರಾಮಯ್ಯ ಬರೆದಿದ್ದಾರೆ.

    ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭೇಟಿ ಮಾಡಿ ದಸರಾದಲ್ಲಿ ಏರ್ ಶೋ ನಡೆಸುವಂತೆ ಮನವಿ ಸಲ್ಲಿಸಿದ ಸಿಎಂ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts