

ಹುಬ್ಬಳ್ಳಿ: ತಮ್ಮ ಹೆಸರೇಳದೆ ಬಹಿರಂಗವಾಗೊ ವಾಗ್ದಾಳಿ ನಡೆಸಿರುವ ವಿಧಾನಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಅವರ ಹೇಳಿಕೆಗೆ ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ ಜನರಲ್ ಸ್ಟೇಟ್ಮೆಂಟ್ಗಳ ಬಗ್ಗ ನಾನು ಮಾತನಾಡುವುದಿಲ್ಲ ಎಂದಿದ್ದಾರೆ.
ಈ ಕುರಿತು ಹುಬ್ಬಳ್ಳಿಯಲ್ಲಿ ಮಾತನಾಡಿದ ಸಿಎಂ ಮೊದಲಿಗೆ ಅವರು ನನ್ನ ಹೆಸರು ಪ್ರಸ್ತಾಪಿಸಿದ್ದಾರಾ ಎಂದು ಪ್ರಶ್ನಿಸಿದ್ದಾರೆ. ನಂತರ ನಾನು ಈ ರೀತಿಯ ಜನರಲ್ ಸ್ಟೇಟ್ಮೆಂಟ್ಗಳಿಗೆ ಪ್ರತಿಕ್ರಿಯಿಸುವುದಿಲ್ಲ ಎಂದು ಹೇಳಿದ್ದಾರೆ.
ತಮನ್ನು ಸಚಿವನನ್ನಾಗಿ ಮಾಡಲಿಲ್ಲ ಎಂಬ ಕಾರಣಕ್ಕೆ ಸ್ವಪಕ್ಷ ಕಾಂಗ್ರೆಸ್ ವಿರುದ್ದ ತೀವ್ರ ಅಸಮಾಧಾನ ಹೊಂದಿರುವ ವಿಧಾನಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಮುಖ್ಯಮಂತ್ರಿ ಸಿದ್ದರಾಮಯ್ಯ ಹೆಸರೇಳದೆ ಬಹಿರಂಗವಾಗಿಯೇ ವಾಗ್ದಾಳಿ ನಡೆಸಿದ್ದರು.
ಸಮಾನ ಮನಸ್ಕರ ಪೂರ್ವಭಾವಿ ಸಭೆಯನ್ನುದ್ಧೇಶಿಸಿ ಮಾತನಾಡಿದ ಹರಿಪ್ರಸಾದ್ ನನ್ನನ್ನು ಮಂತ್ರಿ ಮಾಡದಿದ್ದಕ್ಕೆ ಮುಖ್ಯಮಂತ್ರಿಗಳಿಗೆ ಅಭಿನಂದನೆಗಳು ಎಂದು ವ್ಯಂಗ್ಯಭರಿತವಾಗಿ ತ,ಮ್ಮ ಅಸಮಾಧಾನವನ್ನು ಹೊರಹಾಕಿದ್ದರು.