More

    ನಮ್ಮ ಪಕ್ಷದ ಸಿಎಂ ಅಭ್ಯರ್ಥಿ ಯಾರೆಂದು ಹೈಕಮಾಂಡ್ ತೀರ್ಮಾನ ಮಾಡುತ್ತದೆ; ಸಿದ್ದರಾಮಯ್ಯ ಸ್ಪಷ್ಟನೆ

    ಬೆಂಗಳೂರು: ಒಂದೆಡೆ ರಾಜ್ಯದಲ್ಲಿ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಇದರ ನಡುವೆ ಕಾಂಗ್ರೆಸ್ ಪಕ್ಷದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನಡುವೆ ಸಿಎಂ ಸ್ಥಾನಕ್ಕಾಗಿ ಕಸರತ್ತು ನಡೆಯುತ್ತಿರುವುದು ಸಾಕಷ್ಟು ಬಾರಿ ಬಹಿರಂಗವಾಗಿದೆ. ಕಾಂಗ್ರೆಸ್​ನ ಈ ಇಬ್ಬರು ಹಿರಿಯ ನಾಯಕರು ಬಹಿರಂಗವಾಗಿಯೇ ನಾನೇ ಸಿಎಂ ಎಂದು ಈ ಹಿಂದೆ ಹೇಳಿಕೊಂಡಿದ್ದಾರೆ. 

    ಇದನ್ನೂ ಓದಿ: ಹಾಸನ | ರೇಗಿಸಿದ ಯುವಕನಿಗೆ ಚಪ್ಪಲಿಯೇಟು ನೀಡಿದ ಯುವತಿ

    ಅಲ್ಲದೆ ಕೆಲ ದಿನಗಳ ಹಿಂದೆ ರಾಷ್ಟ್ರೀಯ ವಾಹಿನಿಯೊಂದರ ಸಂದರ್ಶನದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಮಾತನಾಡುತ್ತಾ, ನಾನು ಮತ್ತು ಡಿಕೆಶಿ ಸಿಎಂ ಸ್ಥಾನದ ಆಕಾಂಕ್ಷಿಗಳು. ಆದರೆ ಹೈಕಮಾಂಡ್ ಡಿಕೆ ಶಿವಕುಮಾರ್​​ಗೆ ಮುಖ್ಯಮಂತ್ರಿ ಸ್ಥಾನ ಕೊಡುವುದಿಲ್ಲ ಎಂದು ಹೇಳಿದ್ದರು. ಇದೀಗ ಈ ಸಂದರ್ಶನ ಸಂಬಂಧಿಯ ಸುದ್ದಿಗಳು ವರದಿಯಾಗುತ್ತಿದ್ದಂತೆ, ತಮ್ಮ ಹೇಳಿಕೆಗೆ ಸ್ಪಷ್ಟನೆ ಕೊಡುವ ಕೆಲಸಕ್ಕೆ ಸಿದ್ದರಾಮಯ್ಯ ಮುಂದಾಗಿದ್ದಾರೆ.

    ನಮ್ಮ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿ ಬಗ್ಗೆ ನಾನು ಆಡದ ಮಾತುಗಳನ್ನು ಉಲ್ಲೇಖಿಸಿ ಮಾಧ್ಯಮ ಸಂಸ್ಥೆ ವರದಿಯೊಂದನ್ನು ಪ್ರಕಟಿಸಿದೆ. ಇದು ಸಂಪೂರ್ಣ ಸುಳ್ಳು ಮತ್ತು ದುರುದ್ದೇಶದಿಂದ ಕೂಡಿದ್ದಾಗಿದೆ. ಎನ್​ಡಿಟಿವಿ ಮಾಧ್ಯಮ ಸಂಸ್ಥೆ ತಕ್ಷಣ ಈ ಬರಹವನ್ನು ಅಳಿಸಿಹಾಕಿ ತಿದ್ದುಪಡಿ ಪ್ರಕಟಿಸಬೇಕು ಎಂದು ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಬಿಜೆಪಿ ಟಿಕೆಟ್‌ಗಾಗಿ CPI ಹುದ್ದೆಗೆ ರಾಜೀನಾಮೆ; ನಾಗಠಾಣ ಮೀಸಲು ಕ್ಷೇತ್ರದಿಂದ ಸ್ಪರ್ಧೆಗೆ ಸಿದ್ಧ

    ನಮ್ಮ ಪಕ್ಷದ ಮುಂದಿನ ಮುಖ್ಯಮಂತ್ರಿಯನ್ನು ಶಾಸಕಾಂಗ ಪಕ್ಷ ಮತ್ತು ಹೈಕಮಾಂಡ್ ಕೂಡಿ ಆಯ್ಕೆ ಮಾಡಲಿದೆ ಎನ್ನುವುದನ್ನು ನೂರು ಸಲ ಹೇಳಿದ್ದೇನೆ. ನನ್ನ ಮತ್ತು ಡಿ.ಕೆ.ಶಿವಕುಮಾರ್ ನಡುವೆ ಭಿನ್ನಾಭಿಪ್ರಾಯ ಹುಟ್ಟುಹಾಕುವ ವಿರೋಧ ಪಕ್ಷಗಳ ಹುನ್ನಾರಕ್ಕೆ ಮಾಧ್ಯಮಗಳು ಆಯುಧವಾಗಿ ಬಳಕೆಯಾಗಬಾರದು ಎಂದು ಹೇಳಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts